1 ವರ್ಷ ಜೈಲು ಶಿಕ್ಷೆ ಆದೇಶವನ್ನು ಮರುಪರಿಶೀಲನೆ ನಡೆಸುವಂತೆ ಕೋರಿ ಸಲ್ಲಿಸಿದ್ದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಪರಿಶೀಲನೆ ಹಂತದಲ್ಲೇ ದರ್ಶನ್ ಅರ್ಜಿ ವಜಾಗೊಂಡಿದೆ.
ಪ್ರಕರಣ ಸಂಬಂಧ ಕೋರ್ಟ್ನಲ್ಲಿ ಟ್ರಯಲ್ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿ ನಡೆದಿದೆ. ಕೇಸಿನ ಪ್ರಮುಖ ಸಾಕ್ಷಿ ಸಂದೀಪ್ಗೆ ಬೆದರಿಕೆ ಹಾಕಿದ ದರ್ಶನ್ ಅಭಿಮಾನಿಗಳು ಎನ್ನಲಾಗಿರುವ ಪುನೀತ್, ವೇಣು ಹಾಗೂ ಸುಹಾಸ್ ಎಂಬುವವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.




