ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿಗಾಗಿ ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ. ದರ್ಶನ್ ಕಳೆದ ಎಂಟು ತಿಂಗಳಿನಿಂದ ಕೇಂದ್ರ ಕಾರಾಗೃಹದಲ್ಲಿದ್ದಾರೆ.

- Advertisement -

ಎರಡು ವರ್ಷಗಳ ಹಿಂದೆ ರೇಣುಕಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿತ್ತು. ಜಾಮೀನು ಮೇಲೆ ಹೊರ ಬಂದ ಆರೋಪಿಗಳು ಜಾಮೀನು ರದ್ದಾಗಿ ಕಳೆದ ಎಂಟು ತಿಂಗಳಿನಿಂದ ಜೈಲಿನಲ್ಲೆ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ರೇಣುಕಸ್ವಾಮಿ ಕೊಲೆ ಪ್ರಕರಣ: ನಟ, ಆರೋಪಿ ದರ್ಶನ್‌ಗೆ ಇಲ್ಲ ಮನೆ ಊಟ

ಈ ಹಿಂದೆ ಸುಪ್ರೀಂ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಏಪ್ರಿಲ್ 27ರಂದು ವಕೀಲ ರಂಜಿತ್ ರೋಹಟಗಿ ಮೂಲಕ ನಟ ದರ್ಶನ್ ಮತ್ತೆ ಮಧ್ಯಂತರ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದಾರೆ. ಮೇ 4ರಂದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದೆ, ಹಾಗಾಗಿ ಜಾಮೀನು ನೀಡಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

2024ರ ಜೂನ್ 8ರಂದು ರೇಣುಕಸ್ವಾಮಿ ಅವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ದರ್ಶನ್ ಅವರ ಆಪ್ತೆ ಪವಿತ್ರಾ ಗೌಡ ಅವರಿಗೆ ರೇಣುಕಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಈ ಪ್ರಕರಣದ ವಿಚಾರಣೆ ಈಗಾಗಲೇ ಆರಂಭವಾಗಿದೆ. ಒಟ್ಟು 273 ಸಾಕ್ಷಿಗಳ ಪೈಕಿ ಈವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ –...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...