ʼಕಾಂಗ್ರೆಸ್ ಅಧಃಪತನಕ್ಕೆ ದಾವಣಗೆರೆಯೇ ಸಾಕ್ಷಿʼ; ಅಲ್ಪಸಂಖ್ಯಾತ ನಾಯಕರ ಮೇಲೆ ಸೇಡಿನ ಕ್ರಮಕ್ಕೆ ‘ಎದ್ದೇಳು ಕರ್ನಾಟಕ’ ಕಿಡಿ

Date:

ಜಿಲ್ಲೆಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತ ಮೌಲ್ಯಗಳಿಗೆ ತಿಲಾಂಜಲಿ ಇಟ್ಟು, ಕುಟುಂಬ ಮತ್ತು ಜಾತಿ ರಾಜಕಾರಣಕ್ಕೆ ಮಣಿಯುತ್ತಿದೆ ಎಂದು ‘ಎದ್ದೇಳು ಕರ್ನಾಟಕ’ ಸಂಘಟನೆಯು ಗಂಭೀರ ಆರೋಪ ಮಾಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಹಂಚಿಕೆ ಹಾಗೂ ನಂತರದ ಬೆಳವಣಿಗೆಗಳ ಕುರಿತು ಸಂಘಟನೆಯು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, “ದಾವಣಗೆರೆ ಉಪ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿ ಜಿಗುಪ್ಸೆ ಮೂಡಿಸಿದರೆ, ಅದು ಈಗ ತನ್ನದೇ ಪಕ್ಷದ ಅಲ್ಪಸಂಖ್ಯಾತ ಮುಖಂಡರ ಮೇಲೆ ತೆಗೆದುಕೊಳ್ಳುತ್ತಿರುವ ಸೇಡಿನ ಕ್ರಮಗಳು ಆಕ್ರೋಶ ಹುಟ್ಟಿಸುತ್ತಿವೆ. ಬಹಳ ನಿರಾಶೆ ಹಾಗೂ ಕಾಳಜಿಯ ಜೊತೆ ಕರ್ನಾಟಕದ ನಾಗರಿಕ ಸಮಾಜದ ಪರವಾಗಿ KPPCC ಹಾಗೂ AICC ನಡವಳಿಕೆಯ ಕುರಿತು ಈ ಹೇಳಿಕೆಯನ್ನು ಬಿಡುಗಡೆ ಮಾಡಲಾಗುತ್ತಿದೆ. ಮಾತಿನಲ್ಲಿ ಜಾತ್ಯತೀತತೆ ಇದ್ದರೂ ಅದರ ನಡುವಳಿಕೆ ಕರ್ನಾಟಕ ಜಾತ್ಯತೀತ ಶಕ್ತಿಗಳನ್ನು ದುರ್ಬಲಗೊಳಿಸುವ ರೀತಿಯಲ್ಲಿ ಇದೆ ಎಂಬುದನ್ನು ನೇರ ಮಾತುಗಳಲ್ಲಿ ಹೇಳಲೇಬೇಕಾದ ಸಂದರ್ಭ ಎದುರಾಗಿದೆ” ಎಂದು ಸಂಘಟನೆ ಕಿಡಿ ಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಅತ್ಯಂತ ಹೆಚ್ಚಿನ ಜನಸಂಖ್ಯಾ ಬಾಹುಳ್ಯವಿದ್ದರೂ ಲಿಂಗಾಯತ ಸಮುದಾಯದ ಶಾಮನೂರು ಶಿವಶಂಕರಪ್ಪ ಅವರೇ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಶಾಸಕರಾಗಿ ಮುಂದುವರೆಯುತ್ತಾ ಬಂದಿದ್ದಾರೆ. ಅವರ ನಿಧನದ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತದೆ ಎಂಬ ಭರವಸೆಯನ್ನು ಕಾಂಗ್ರೆಸ್ ನಾಯಕತ್ವ ನೀಡಿತ್ತು. ಕೇವಲ ಮುಸ್ಲಿಂ ಮಾತ್ರವಲ್ಲ ಕುಟುಂಬ ರಾಜಕಾರಣವನ್ನು ವಿರೋಧಿಸುವ ಎಲ್ಲ ಜಾತ್ಯತೀತ ಶಕ್ತಿಗಳ ಬಯಕೆಯೂ ಆಗಿತ್ತು. ಆದರೆ ಕುಟುಂಬ, ಜಾತಿ ಹಾಗೂ ಹಣದ ಬಲದ ಮುಂದೆ ಕಾಂಗ್ರೆಸ್ಸಿನ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮಂಡಿಯೂರಿದ ಬಗೆ ಎಲ್ಲರಿಗೂ ಜಿಗುಪ್ಸೆ ಮೂಡಿಸಿದೆ” ಎಂದು ಸಂಘಟನೆಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್ಸಿನ ಹಸಿಹಸಿ ಅವಕಾಶವಾದಿ ನಿಲುವಿನಿಂದ ಬೇಸತ್ತು ಕೇವಲ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರವಲ್ಲ ಯಾವ ಜಾತ್ಯಾತೀತ ಶಕ್ತಿಗಳು ಸಹ ಇಲ್ಲಿನ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿಲ್ಲ. 2023ರ ಚುನಾವಣೆಯಲ್ಲಿ ಕರ್ನಾಟಕದ ನಾಗರೀಕ ಸಂಘಟನೆಗಳ ಸಂಯುಕ್ತ ಶಕ್ತಿಯಾಗಿ ಎದ್ದೇಳು ಕರ್ನಾಟಕ ತನ್ನನ್ನು ಸಂಪೂರ್ಣವಾಗಿ ಸುರಿದುಕೊಂಡು ಕೆಲಸ ಮಾಡಿ ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿತ್ತು. 2025ರಲ್ಲಿ ನಡೆದ ಉಪ ಚುನಾವಣೆಗಳಲ್ಲೂ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ತನ್ನದೇ ರೀತಿಯಲ್ಲಿ ಸಕಾರಾತ್ಮಕ ಕೊಡುಗೆ ನೀಡಿತ್ತು. ಆದರೆ ಕಾಂಗ್ರೆಸ್ ನಡೆದುಕೊಂಡ ರೀತಿಯಿಂದಾಗಿ ನಾವು ಈ ಬಾರಿಯ ಉಪ ಚುನಾವಣೆಯಲ್ಲಿ ಮಧ್ಯ ಪ್ರವೇಶಿಸದೇ ಇರಲು ತೀರ್ಮಾನಿಸಬೇಕಾಯಿತು. ಇದು ಎದ್ದೇಳು ಕರ್ನಾಟಕದ ಕತೆ ಮಾತ್ರವಲ್ಲ ಬಹುಪಾಲು ಜನಪರ ಸಂಘಟನೆಗಳ ನಿಲುವು ಸಹ ಇದೇ ಆಗಿತ್ತು”

“ದಾವಣಗೆರೆಯ ಜಾತ್ಯತೀತ ಶಕ್ತಿಗಳ ಮುಂದೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಂದೆ ದೊಡ್ಡ ಇಕ್ಕಟ್ಟು ಸೃಷ್ಟಿಯಾಗಿತ್ತು. ಕಾಂಗ್ರೆಸ್ಸಿನ ನಿಲುವನ್ನಂತೂ ಯಾರೂ ಒಪ್ಪುವ ಮಾತೇ ಇರಲಿಲ್ಲ. ಆದರೆ ಕೆಲವರು ಕಾಂಗ್ರೆಸ್ಸನ್ನು ಬೈದುಕೊಂಡು ಕಾಂಗ್ರೆಸ್ಸಿಗೇ ಮತ ಹಾಕಿದರು. ಕೆಲವರು ಕೋಮುವಾದಿಗಳನ್ನು ಮುಂದೆ ನೋಡಿಕೊಳ್ಳೋಣ, ಈ ಬಾರಿ ಕಾಂಗ್ರೆಸ್ಸಿಗೆ ಪಾಠ ಕಲಿಸಲೇಬೇಕು ಎಂದು ಇತರೆ ಅಭ್ಯರ್ಥಿಗಳಿಗೆ ಓಟು ಹಾಕಿದರು. ಕೆಲವರು ಓಟು ಮಾಡಲಿಕ್ಕೇ ಹೋಗಲಿಲ್ಲ. ಫಲಿತಾಂಶ ಏನೇ ಬರಬಹುದು, ಅಲ್ಪ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಣ ಬಲದ ಮೇಲೆ ಗೆದ್ದರೂ ಗೆಲ್ಲಬಹುದು, ಆದರೆ ಕಾಂಗ್ರೆಸ್ ನೈತಿಕವಾಗಿ ಸೋತಾಗಿದೆ”

“ಕಾಂಗ್ರೆಸ್ಸಿನ ಈ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ಯಾರು? ನಿಸ್ಸಂಶಯವಾಗಿ ಕಾಂಗ್ರೆಸ್ಸಿನ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು. ಕಾಂಗ್ರೆಸ್ಸಿನ ಈ ಸ್ಥಿತಿಗೆ ಕಾರಣವಾಗಿರುವ ಈ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು ನೊಂದಿದ್ದ ದಾವಣಗೆರೆಯ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳಿಗೆ ಸ್ಪಂದಿಸಿದ ಅಲ್ಪಸಂಖ್ಯಾತ ಸಮುದಾಯದ ಆದರೆ ಜಾತ್ಯತೀತ ನಿಲುವಿಗೆ ಮತ್ತು ಕಾಂಗ್ರೆಸ್ಸಿಗೆ ಬದ್ಧವಾಗಿದ್ದ ನಾಯಕರ ತಲೆದಂಡಕ್ಕೆ ಹೊರಟಿರುವುದು ಅಕ್ಷಮ್ಯ ಅಪರಾಧ. ಇದನ್ನು ಎದ್ದೇಳು ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ದಾವಣಗೆರೆಯ ಈ ಬಲಾಢ್ಯ ಕುಟುಂಬದವರು ಜಾತಿ ಕಾರಣಕ್ಕೆ ʼಬಿಜೆಪಿಯ ರಾಘವೇಂದ್ರ ಅವರನ್ನು ಗೆಲ್ಲಿಸಿʼ ಎಂದು ಬಹಿರಂಗವಾಗಿ ಕರೆ ಕೊಟ್ಟಾಗಲೂ ಯಾವುದೇ ಕ್ರಮ ತೆಗೆದುಕೊಳ್ಳದೆ ತೆಪ್ಪಗಿದ್ದ ಕಾಂಗ್ರೆಸ್ ಮುಖಂಡರು ಈಗ ಇಲ್ಲದ ಕಾರಣ ಹುಡುಕಿ ಅಲ್ಪಸಂಖ್ಯಾತ ಮುಖಂಡರನ್ನು ದಮನಿಸಲು, ಅಲ್ಪಸಂಖ್ಯಾತ ಮುಖಂಡರ ನಡುವೆ ಒಡಕು ತರಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ”

ಇದನ್ನೂ ಓದಿ: BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ದೋಷಿ

“ಕಾಂಗ್ರೆಸ್ ಇದೇ ಧೋರಣೆಯನ್ನು ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಎಲ್ಲಾ ಜನಪರ ಶಕ್ತಿಗಳ ಬೆಂಬಲ ಕಳೆದುಕೊಳ್ಳಬೇಕಾಗುತ್ತದೆ. ದಾವಣಗೆರೆ ವಿದ್ಯಮಾನ ಬರಲಿರುವ 2028ರ ಚುನಾವಣೆಗೆ ಮುನ್ನ ಎಚ್ಚರಿಕೆ ಗಂಟೆಯಾಗಿದೆ. ಅಲ್ಪಸಂಖ್ಯಾತರನ್ನು, ದಲಿತರನ್ನು, ಜಾತ್ಯತೀತ ಜನತೆಯನ್ನು, ಪ್ರಗತಿಪರ ಶಕ್ತಿಯನ್ನು ಟೇಕನ್ ಫಾರ್ ಗ್ರ‍್ಯಾಂಟೆಡ್ ಮಾಡಿಕೊಳ್ಳಬೇಡಿ. ಕಾಂಗ್ರೆಸ್ ನಾಯಕತ್ವ ಈಗಾದರೂ ತನ್ನ ತಪ್ಪನ್ನು ನೋಡಿಕೊಂಡು ಆಗಿರುವ ಅನಾಹುತವನ್ನು ಸರಿಪಡಿಸುವ ದಿಕ್ಕಿನಲ್ಲಿ ಹೆಜ್ಜೆ ಇಡಬೇಕು” ಎಂದು ಸಂಘಟನೆ ಎಚ್ಚರಿಸಿದೆ.

ಎದ್ದೇಳು ಕರ್ನಾಟಕದ ಪರವಾಗಿ ತಾರಾ ರಾವ್, ಜೆ.ಎಂ. ವೀರಸಂಗಯ್ಯ, ಕೆ.ಎಲ್. ಅಶೋಕ್, ಎನ್. ವೆಂಕಟೇಶ್ ಸೇರಿದಂತೆ ಹಲವು ಪ್ರಮುಖರು ಈ ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...