ದಾವಣಗೆರೆ ಉಪಸಮರ | ಬಿರುಸಿನ ಮತದಾನ; 3 ಗಂಟೆ ಹೊತ್ತಿಗೆ ಶೇ.49.66ರಷ್ಟು ದಾಖಲೆಯ ವೋಟಿಂಗ್!

Date:

ಟಿಕೆಟ್ ಹಂಚಿಕೆ ವಿಷಯದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಗಮನ ಸೆಳೆದಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಇಂದು ಬೆಳಗ್ಗೆ 7ರಿಂದ ಪ್ರಾರಂಭವಾಗಿದ್ದು ಮತದಾನ ಬಿರುಸಿನಿಂದ ಸಾಗಿದೆ. 2 ಲಕ್ಷ 31 ಸಾವಿರಕ್ಕೂ ಅಧಿಕ ಮತಗಳಿರುವ 284 ಮತಗಟ್ಟೆಗಳನ್ನು ಹೊಂದಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಇದುವರೆಗೆ ಶಾಂತಿಯುತವಾಗಿ ಸಾಗಿದ್ದು, 11 ಗಂಟೆ ಸುಮಾರಿಗೆ ದಾಖಲೆಯ ಶೇ. 22.01ರಷ್ಟು ಮತದಾನವಾಗಿದೆ. 1 ಗಂಟೆ ಸುಮಾರಿಗೆ 37.01% ಆಗಿದ್ದು, 3ಗಂಟೆ ವೇಳೆಗೆ 49.66% ಮತದಾನವಾಗಿದ್ದು, 1,14,752 ಮಂದಿ ಚಲಾಯಿಸಿದ್ದಾರೆ.

- Advertisement -

ಈ ಮುಂಚೆ ಬೆಳಿಗ್ಗೆ 9 ಗಂಟೆ ಸಮಯಕ್ಕೆ ಶೇ. 9ರಷ್ಟು ಮತದಾನ ದಾಖಲಾಗಿತ್ತು. ಮಹಿಳೆಯರು, ಯುವಕರು ವಯಸ್ಕರು ಸೇರಿದಂತೆ ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಹೊಸ ಪೀಳಿಗೆಯ ಮತದಾರರು ಕೂಡ ಮತಗಟ್ಟೆಗೆ ಉತ್ಸಾಹದಿಂದ ಆಗಮಿಸಿ ಮತ ಚಲಾಯಿಸುತ್ತಿದ್ದುದು ಕಂಡುಬಂದಿದೆ. ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮತದಾನದ ಆರಂಭದಲ್ಲಿ ಮತಗಟ್ಟೆ ಸಂಖ್ಯೆ 201 ಮತ್ತು 284ರಲ್ಲಿ ತಾಂತ್ರಿಕ ಕಾರಣದಿಂದ ಮತಯಂತ್ರಗಳು ಕೈಕೊಟ್ಟಿದ್ದು, ವಿಷಯ ತಿಳಿದ ಚುನಾವಣಾ ಅಧಿಕಾರಿಗಳು ಮತ್ತು ತಾಂತ್ರಿಕ ವರ್ಗ ಕೂಡಲೇ ಸ್ಥಳಕ್ಕೆ ತೆರಳಿ ಸರಿಪಡಿಸಿ ಮತದಾನ ಸುಗಮವಾಗುವಂತೆ ನೋಡಿಕೊಂಡಿವೆ. ಈ ಮತಗಟ್ಟೆಗಳಲ್ಲಿ ಮತದಾನ ಸ್ವಲ್ಪ ವಿಳಂಬವಾದ ವರದಿ ಬಂದಿದೆ.

ಇದನ್ನೂ ಓದಿ: ದಾವಣಗೆರೆ | ಜಮೀರ್ ಚುನಾವಣಾ ಪ್ರಚಾರ, ಸುದ್ದಿಗೋಷ್ಠಿ ನಡೆಸಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ

ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ಕಣದಲ್ಲಿದ್ದು ಬಹುತೇಕ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ನೇರ ಹಣಾಹಣಿ ಇದೆ. ಟಿಕೆಟ್ ಹಂಚಿಕೆ ವಿಷಯದಲ್ಲಿ ಮುಸ್ಲಿಮರ ವಿರೋಧ ಎದುರಿಸಿದ್ದ ಕಾಂಗ್ರೆಸ್ ಹಾಗೂ ಶಾಮನೂರು ಕುಟುಂಬಕ್ಕೆ ಈ ಚುನಾವಣೆ ಪ್ರತಿಷ್ಠೆಯ ಹಾಗೂ ಸವಾಲಿನ ವಿಷಯವಾಗಿದೆ. ಸಂಜೆ ಐದರವರೆಗೆ ಮತದಾನ ನಡೆಯಲಿದ್ದು ದಾವಣಗೆರೆ ದಕ್ಷಿಣದ ಮತದಾರರು ಉಪಚುನಾವಣೆಯಲ್ಲಿ ಯಾರ ಪರ ಮತ ಚಲಾಯಿಸಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...