ದಾವಣಗೆರೆ ಉಪ ಚುನಾವಣೆ | ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ : ಸಿದ್ದರಾಮಯ್ಯ

Date:

ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು(ಏ.01) ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರ ಪರ ರೋಡ್ ಶೋ ನಡೆಸಿ ಮಾತನಾಡಿದರು.

- Advertisement -

ಸಮರ್ಥ್ ಅತ್ಯಂತ ವಿದ್ಯಾವಂತ ಮತ್ತು ರಾಜಕಾರಣದ ಎಲ್ಲ ಅರ್ಹತೆಗಳಿರುವ ಸಮರ್ಥ ಅಭ್ಯರ್ಥಿ. ಇವರು ಗೆದ್ದು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ. ಎಲ್ಲಾ ಜನಪರ ಗುಣಗಳು ಸಮರ್ಥ್ ಅವರಲ್ಲಿದೆ.‌ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಸಾಕಷ್ಟಿದೆ. ಹೀಗಾಗಿ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ರಾಜ್ಯ ಉಪಸಮರ | ಕುಟುಂಬ ತಂತ್ರ ಸೋಲಿಸಿ ಗೆಲ್ಲುವುದೇ ಜನತಂತ್ರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ. ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು  ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ? ಎಂದು ಕೇಳಿದರು.

ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ.

ಬಿಜೆಪಿ ಅಧಿಕಾರದಲ್ಲಿದ್ದಾಗ ಜನರ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ಸರ್ವ ಜಾತಿ ಜನಾಂಗಗಳನ್ನು ಒಟ್ಟಿಗೇ ಕರೆದೊಯ್ಯುತ್ತದೆ. ನಮ್ಮ ಗ್ಯಾರಂಟಿಗಳ ಫಲವನ್ನು ಎಲ್ಲಾ ಪಕ್ಷದವರೂ, ಎಲ್ಲಾ ಜಾತಿ, ಎಲ್ಲಾ ಧರ್ಮದವರೂ ಪಡೆಯುತ್ತಿದ್ದಾರೆ. ಆದ್ದರಿಂದ ನಮ್ಮದು “ಸರ್ವ ಜನಾಂಗದ ಶಾಂತಿಯ ತೋಟ”.  ಕಾಂಗ್ರೆಸ್ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವಣ್ಣನವರ ಆಶಯದ ಹಾದಿಯಲ್ಲಿ ನಡೆದರೆ, ಬಿಜೆಪಿ ಗೋಡ್ಸೆ, ಮನುವಾದಿಗಳ ಮಾತಿನಂತೆ ನಡೆಯುತ್ತದೆ ಎಂದು ಗುಡುಗಿದರು.

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ.  ನಮ್ಮ ಮೂಲ ಉದ್ದೇಶ ತಳ ಸಮುದಾಯದ ಅಭಿವೃದ್ದಿ.  ಬಸವಣ್ಣ ಅವರ ಪರಿಕಲ್ಪನೆಯಲ್ಲಿ ನಾವು ಸರ್ಕಾರ ನಡೆಸುತ್ತಿದ್ದೇವೆ. ಮಧ್ಯವರ್ತಿಗಳ ಕಾಟ ಇಲ್ಲದೆ ಬಡವರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....