ದಾವಣಗೆರೆ | ಕಾನೂನು ವಿದ್ಯಾರ್ಥಿಗಳ ಸಂಕಷ್ಟ: ಮುಖ್ಯಮಂತ್ರಿಗಳು ಪರಿಹರಿಸಲಿ: ದಲಿತ ವಿದ್ಯಾರ್ಥಿ ಒಕ್ಕೂಟ

Date:

ಹಾಸನದ ಸರ್ಕಾರಿ ಕಾನೂನು ಕಾಲೇಜಿನ 5 ವರ್ಷದ ಬಿ.ಎ.ಎಲ್.ಎಲ್.ಬಿ. ಕೋರ್ಸ್‌ನ ಹೆಚ್ಚುವರಿ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿರುವ 24 ವಿದ್ಯಾರ್ಥಿಗಳ ಕಾನೂನು ಶಿಕ್ಷಣ ಪೂರ್ಣಗೊಳಿಸುವುದು ಸಂಕಷ್ಟಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮದ್ಯ ಪ್ರವೇಶಿಸಿ ಎಲ್ಲಾ ಸೆಮಿಸ್ಟರ್‌ಗಳ ಫಲಿತಾಂಶಗಳನ್ನು ತಕ್ಷಣ ಪ್ರಕಟಿಸಲು ಸೂಕ್ತ ನಿರ್ದೇಶನ ನೀಡಿ ಪರಿಹರಿಸುವಂತೆ ದಲಿತ ವಿದ್ಯಾರ್ಥಿಗಳ ಒಕ್ಕೂಟವು ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದೆ.

- Advertisement -

ಈ ವೇಳೆ ಮಾತನಾಡಿದ ಮುಖಂಡರು “ಹಾಸನದ ಸರ್ಕಾರಿ ಕಾನೂನು ಕಾಲೇಜು 2017ರಲ್ಲಿ ಆರಂಭಗೊಂಡಿದ್ದು, ಆರಂಭದಲ್ಲಿ 60 ವಿದ್ಯಾರ್ಥಿಗಳ ದಾಖಲಾತಿಯೊಂದಿಗೆ 5 ವರ್ಷದ ಬಿ.ಎಲ್.ಎಲ್.ಬಿ. ಕೋರ್ಸ್ ಪ್ರಾರಂಭಿಸಲಾಗಿತ್ತು. ಬಳಿಕ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ ವತಿಯಿಂದ ಹೆಚ್ಚುವರಿ 60 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ನೀಡಲಾಗಿತ್ತು. 2022-23ನೇ ಶೈಕ್ಷಣಿಕ ವರ್ಷಕ್ಕೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಾನ್ಯತೆ ನೀಡಿದ ಹಿನ್ನೆಲೆಯಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ನಡೆದಿತ್ತು” ಎಂದು ವಿವರಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ನಂತರದಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಹೆಚ್ಚುವರಿ ವಿದ್ಯಾರ್ಥಿಗಳ ಅನುಮೋದನೆ ಕುರಿತು ಸ್ಪಷ್ಟ ಆದೇಶ ಹೊರಬರದ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ನಡುವೆ ಕರ್ನಾಟಕ ಹೈಕೋರ್ಟ್‌ನಲ್ಲಿ ವಿದ್ಯಾರ್ಥಿಗಳು ರಿಟ್ ಅರ್ಜಿ (ಡಬ್ಲ್ಯೂ.ಪಿ. ನಂ.32059/2024) ಸಲ್ಲಿಸಿದ್ದು, 14-08-2024 ರಂದು ನ್ಯಾಯಾಲಯವು ಬಾರ್ ಕೌನ್ಸಿಲ್‌ಗೆ ನಾಲ್ಕು ವಾರಗಳಲ್ಲಿ ತಪಾಸಣೆ ನಡೆಸಿ ಮಾನ್ಯತೆ ನೀಡುವಂತೆ ನಿರ್ದೇಶನ ನೀಡಿದೆ. ಕಾಲೇಜು ವತಿಯಿಂದ ಅಗತ್ಯ ಶುಲ್ಕ ಪಾವತಿಸಿ, ಆನ್‌ಲೈನ್ ಮೂಲಕ ಎಲ್ಲಾ ದಾಖಲೆಗಳು ಹಾಗೂ ಜಿಯೋ ಟ್ಯಾಗ್ ಫೋಟೋಗಳನ್ನು ಸಲ್ಲಿಸಿದರೂ ಸಹ ಇನ್ನೂ ಅಂತಿಮ ಆದೇಶ ಹೊರಬಂದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಈ ಅನಿಶ್ಚಿತತೆಯಿಂದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದು, ಕೆಲವರು ಈಗಾಗಲೇ ಕೋರ್ಸ್ ತ್ಯಜಿಸಿದ್ದಾರೆ. ಪ್ರಸ್ತುತ ಹೆಚ್ಚುವರಿ ವಿಭಾಗದಲ್ಲಿ ಕೇವಲ 24 ವಿದ್ಯಾರ್ಥಿಗಳು ಮಾತ್ರ ಅಭ್ಯಾಸ ಮುಂದುವರೆಸುತ್ತಿದ್ದಾರೆ. ಪ್ರತೀ ಬಾರಿ ಪರೀಕ್ಷೆ ಬರೆಯುವ ಹಾಗೂ ಫಲಿತಾಂಶ ಪ್ರಕಟಿಸುವ ವಿಚಾರದಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

“ಈ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ನಿರಾಕ್ಷೇಪಣ ಪತ್ರ ನೀಡಬೇಕು ಹಾಗೂ ಉಳಿದ ಅವಧಿಯ ಶಿಕ್ಷಣವನ್ನು ಬೇರೆ ಕಾನೂನು ಕಾಲೇಜುಗಳಲ್ಲಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕು ಎಂದು ದಲಿತ ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? http://ದಾವಣಗೆರೆ ಮಾದರಿ ರಾಜಕಾರಣ; ಎಚ್ಚರಿಕೆ ಕಾಂಗ್ರೆಸಿಗೋ, ಮುಸ್ಲಿಂರಿಗೋ? ಮುಸ್ಲಿಂರ ಮುಂದಿನ ನಡೆಯೇನು?

ಮನವಿ ಸಲ್ಲಿಸುವ ವೇಳೆ ದಲಿತ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಲಿಂಗರಾಜು ಎಂ. ಗಾಂಧಿನಗರ, ಕಾನೂನು ವಿದ್ಯಾರ್ಥಿಗಳಾದ ಅಜ್ಜಯ್ಯ ಕಡ್ಲೇಬಾಳು, ಮಧುಕುಮಾರ್ ಪೂಜಾರ್, ಆಕಾಶ ದುಗ್ಗತ್ತಿ, ಕೊಟ್ರೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...