ದಾವಣಗೆರೆ | ನಾಮಪತ್ರ ಪರಿಶೀಲನೆ ವೇಳೆ ಮೂರು ತಿರಸ್ಕೃತ; 37 ಅಭ್ಯರ್ಥಿಗಳ ನಾಮಪತ್ರ ಸಿಂಧು

Date:

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರ ಚುನಾವಣೆಗೆ ಸಲ್ಲಿಸಿದ್ದ ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 45 ನಾಮಪತ್ರಗಳಲ್ಲಿ ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಓರ್ವ ಮಹಿಳಾ ಅಭ್ಯರ್ಥಿ ಸೇರಿದಂತೆ 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ನಾಮಪತ್ರ ಹಿಂಪಡೆಯಲು ಮಾರ್ಚ್ 26 ಕೊನೆಯ ದಿನವಾಗಿದೆ.

- Advertisement -

ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ ಕರ್ನಾಟಕ ರಾಷ್ಟ್ರ ಸಮಿತಿಯ ಎಚ್‌.ಕೆ. ದಾವುಲ್‌ ಸಾಬ್‌ ಹಾಗೂ ಬಿಜೆಪಿ ಹೆಸರಲ್ಲಿ ಬಿಫಾರ್ಮ್ ಇಲ್ಲದೇ ನಾಮಪತ್ರ ಸಲ್ಲಿಸಿದ್ದ ಯಶವಂತರಾವ್‌ ಜಾಧವ್‌ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
ದಾವಣಗೆರೆ ಉಪಚುನಾವಣೆ

ಅಲ್ಪಸಂಖ್ಯಾತರಗೆ ಟಿಕೆಟ್ ಸಿಗದೇ ಕಾಂಗ್ರೆಸ್‌ ನಲ್ಲಿ ಬಂಡಾಯ ಎದ್ದಿರುವ ಸಾದಿಕ್‌ ಪೈಲ್ವಾನ್‌ ಕಾಂಗ್ರೆಸ್‌ ಹೆಸರಲ್ಲಿ ಪಕ್ಷದ ಬಿಫಾರ್ಮ್ ಇಲ್ಲದೇ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದ್ದು, ಪಕ್ಷೇತರರಾಗಿ ಸಲ್ಲಿಸಿರುವ ನಾಮಪತ್ರ ಸ್ವೀಕೃತವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ, ಮಹಿಳಾ ಸ್ವತಂತ್ರ ಅಭ್ಯರ್ಥಿ ಜಬೀನ ತಾಜ್, ಎಸ್ ಡಿ ಪಿ ಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್, ಎಎಪಿ, ಸೇರಿದಂತೆ ಮೂವತ್ತೇಳು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಮಾರ್ಚ್ 26 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಅಂದು ಸಂಜೆ ನಾಲ್ಕು ಗಂಟೆಗೆ ಕಣದಲ್ಲಿರುವ ಅಂತಿಮ ಪಟ್ಟಿ ನಿರ್ಧಾರವಾಗಲಿದೆ.

Advertisements

ಕ್ಷೇತ್ರದಲ್ಲಿ ಒಟ್ಟು 39ಜನರಿಂದ 45ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಪರಿಶೀಲನೆ ಬಳಿಕ ಮೂರು ನಾಮಪತ್ರಗಳು ತಿರಸ್ಕೃತಗೊಂಡು ಇಬ್ಬರು ಕಣದಿಂದ ಹೊರಹೋದಂತಾಗಿದೆ.

ಈ ಬಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಮಗೆ ಟಿಕೆಟ್ ಕೊಡಬೇಕೆಂದು ಅಲ್ಪಸಂಖ್ಯಾತರು ಒತ್ತಾಯಿಸಿದ್ದರು. ಕಾಂಗ್ರೆಸ್ ನಲ್ಲಿ ಟಿಕೆಟ್ ಸಿಗದೇ ಅಸಮಾಧಾನಗೊಂಡು ಬರೋಬ್ಬರಿ 22 ಮುಸ್ಲಿಂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಚುನಾವಣೆಯಲ್ಲಿ ವಿಶೇಷವಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹರಿಹರದಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸದಿಂದ ಅರೆಬೆತ್ತಲೆ ಮೆರವಣಿಗೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಹಿರಿಯ ನ್ಯಾ....

ಚಿಕ್ಕಮಗಳೂರು | ಮಕ್ಕಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ನ್ಯಾ. ಹೆಚ್. ಶಶಿಧರ್ ಶೆಟ್ಟಿ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರ, ಇಲಾಖೆಗಳು ಅಥವಾ ಸರ್ಕಾರೇತರ ಸಂಸ್ಥೆಗಳ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...