ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಲಿರುವ ಡಿ ಸಿ ಗೌರಿಶಂಕರ್, ದಾಸರಹಳ್ಳಿ ಮಂಜುನಾಥ್

Date:

  • ಬುಧವಾರ (ನ.15ರಂದು) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ
  • ಮುದ್ದಹನುಮೇಗೌಡ ಕಾಂಗ್ರೆಸ್‌ ಸೇರುವ ಬಗ್ಗೆ ಚರ್ಚೆ ನಡೆದಿದೆ: ಕೆ ರಾಜಣ್ಣ

ಮಾಜಿ ಶಾಸಕರಾದ ಡಿ ಸಿ ಗೌರಿಶಂಕರ್ ಮತ್ತು ದಾಸರಹಳ್ಳಿಯ ಮಂಜುನಾಥ್ ಅವರು ಜೆಡಿಎಸ್‌ ತೊರೆದು ಬುಧವಾರ (ನ.15) ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಲಿದ್ದಾರೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ. ಮಾಜಿ ಶಾಸಕರ ಜೊತೆಯಲ್ಲಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಮಾಜಿ ಶಾಸಕ ಗೌರಿಶಂಕರ್ ತುಮಕೂರು‌ ಮತ್ತು ನೆಲಮಂಗಲ ಭಾಗದಲ್ಲಿ ತಮ್ಮದೇ ಆದ ಹಿಡಿತ ಸಾಧಿಸಿದ್ದಾರೆ. ಇನ್ನು ಮಂಜುನಾಥ್ ಸಹ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ವರ್ಚಸ್ಸು ಹೊಂದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಅವರು ಗೌರಿಶಂಕರ್ ಮತ್ತು ಮಂಜುನಾಥ್ ಮನವೊಲಿಕೆಗೆ ಸಾಕಷ್ಟು ಪ್ರಯತ್ನಿಸಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಕರೆತರುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ: ಎಚ್‌ಡಿಕೆ

ಜೆಡಿಎಸ್‌ ನಾಯಕರ ಕಾಂಗ್ರೆಸ್‌ ಸೇರ್ಪಡೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಶಾಸಕರಾದ ಗೌರಿಶಂಕರ್​, ಮಂಜುನಾಥ್ ಕಾಂಗ್ರೆಸ್ ಸೇರುವ ವಿಚಾರ ಹಳೆಯದು. ನನಗೇನೂ ಆಶ್ಚರ್ಯ ​ಆಗಲ್ಲ. ಗೌರಿಶಂಕರ್​, ಮಂಜುನಾಥ್ ಕರೆದು ಎರಡು ಬಾರಿ ಮಾತನಾಡಿದ್ದೇನೆ. ಅವರಿಗೆ ಅನುಕೂಲ ಆಗುವ ಕಡೆ ಹೋಗಿದ್ದಾರೆ. ನಮಗೆ ಯಾವುದೇ ತೊಂದರೆ ಇಲ್ಲ. ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ಮತ್ತಷ್ಟು ಬದಲಾವಣೆ: ಕೆ ಎನ್‌ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ, ಮಾಜಿ ಶಾಸಕ ಡಿ ಸಿ ಗೌರಿಶಂಕರ್ ಅವರು ಕಾಂಗ್ರೆಸ್‌ಗೆ ಬರುವ ವಿಚಾರ ಚರ್ಚೆ ನಡೆದಿದೆ ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದರು.

ತುಮಕೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಐದು ರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಬದಲಾವಣೆ ಸಾಧ್ಯತೆ” ಎಂದರು.

ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಡಿ.6ರಂದು ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ಅವರು ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ನನ್ನನ್ನೂ ಆಹ್ವಾನಿಸಿದ್ದಾರೆ. ಅಧಿವೇಶನ ಇರುವುದರಿಂದ ಬಿಡುವು ಮಾಡಿಕೊಂಡು ಬರಲು ಪ್ರಯತ್ನಿಸುವೆ. ಉಳಿದ ವಿಚಾರ ಗೊತ್ತಿಲ್ಲ” ಎಂದರು.

“ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಹೈಕಮಾಂಡ್ ಒಪ್ಪಿ ಟಿಕೇಟ್ ನೀಡಿದರೆ ಸ್ಪರ್ಧಿಸುತ್ತೇನೆ. ಇಲ್ಲಿವರೆಗೂ ರಾಜ್ಯ ರಾಜಕಾರಣದ ಅನೇಕ ಮಜುಲುಗಳ ಅನುಭವವಾಗಿದೆ, ಅನೇಕ ಸ್ಥಾನಮಾನಗಳು ದೊರೆತಿವೆ. ಇನ್ನು ಲೋಕಸಭೆಗೆ ಒಮ್ಮೆ ಕಾಲಿರಿಸುವ ಉಮೇದು ಇದೆ. ಇದಕ್ಕೆ ಪೂರಕವಾಗಿ ವರಿಷ್ಠರು ಒಪ್ಪಿ ಟಿಕೆಟ್‌ ನೀಡುವುದಾದರೆ ಸ್ಪರ್ಧಿಸುವೆ” ಎಂದು ಇದೇ ವೇಳೆ ಇಂಗಿತ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...