5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

Date:

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು, ಬಂಡೀಪುರದಲ್ಲಿ 19 ಕೋತಿಗಳ ಸಾವು ಅತೀವ ನೋವು ತಂದಿದ್ದು, ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ವಿಧಾನಸೌಧದ ಮೆಟ್ಟಿಲುಗಳ ಮೇಲೆ 71ನೇ ವನ್ಯಜೀವಿ ಸಪ್ತಾಹದಲ್ಲಿ ಮಾತನಾಡಿದ ಅವರು, “ಕರ್ನಾಟಕ ರಾಜ್ಯ ವನ್ಯಜೀವಿ ಸಂರಕ್ಷಣಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ. ಆದರೂ ಇಂತಹ ಘಟನೆಗಳು ನಡೆಯುತ್ತಿರುವುದು ದುರ್ದೈವ. ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದ್ದು, ವನ ಪ್ರದೇಶ ಕ್ಷೀಣಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಅನಿವಾರ್ಯವಾಗಿದೆ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ವನ್ಯಜೀವಿಗಳು ಪ್ರಕೃತಿ ಸಮತೋಲನ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವುದೇ ಈ ಸಪ್ತಾಹದ ಉದ್ದೇಶವಾಗಿದೆ. ವನ್ಯಜೀವಿ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿರುವುದರಿಂದಲೇ ನಮ್ಮ ರಾಜ್ಯ ಆನೆಗಳ ಸಂಖ್ಯೆಯಲ್ಲಿ ನಂ.1 ಸ್ಥಾನದಲ್ಲಿದೆ. ರಾಜ್ಯದಲ್ಲಿ 5395 ಆನೆಗಳಿದ್ದರೆ, 563 ಹುಲಿಗಳಿವೆ. ದೇಶದಲ್ಲೇ ಅತಿ ಹೆಚ್ಚು ಹುಲಿಗಳಿರುವ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆದರೆ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಷ ಪ್ರಾಶನದಿಂದ ಒಂದೇ ದಿನ ಶೇ.1ರಷ್ಟು ಹುಲಿಗಳು ಸಾವಿಗೀಡಾದವು ಇದು ಹೃದಯ ವಿದ್ರಾವಕ ಘಟನೆ” ಎಂದು ನೋವು ವ್ಯಕ್ತಪಡಿಸಿದರು.

ಗಾಂಧೀ ಸ್ಮರಣೆ

“ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀ ಜಯಂತಿ. ಸತ್ಯ, ಶಾಂತಿ ಮತ್ತು ಅಹಿಂಸೆ ಎಂಬ ಶಸ್ತ್ರ ಹಿಡಿದು ಸತ್ಯಾಗ್ರಹದ ಶಕ್ತಿಯನ್ನು ಜಗತ್ತಿಗೆ ತೋರಿದ ಮತ್ತು ಭಾರತವನ್ನು ಪರಕೀಯರ ದಾಸ್ಯದಿಂದ ಮುಕ್ತಗೊಳಿಸಿದ ಮಹಾತ್ಮಾ ಗಾಂಧೀ ಅವರು ಪ್ರಕೃತಿ, ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಮಹಾತ್ಮಾ ಗಾಂಧೀ ಅವರು, “ಪ್ರಕೃತಿ, ಪರಿಸರ ಇರುವುದು ಮನುಷ್ಯನ ಅವಶ್ಯಕತೆ ಪೂರೈಸುವುದಕ್ಕೇ ಹೊರತು, ದುರಾಸೆ ಪೂರೈಸುವುದಕ್ಕಲ್ಲ’’ ಎಂದು ಪ್ರತಿಪಾದಿಸುತ್ತಿದ್ದರು. ಈ ಜಗತ್ತು ನಮ್ಮ ಪಿತ್ರಾರ್ಜಿತ ಆಸ್ತಿಯಲ್ಲ, ಬದಲಾಗಿ ನಮ್ಮ ಮುಂದಿನ ಪೀಳಿಗೆಯಿಂದ ನಾವು ಪಡಿದಿರುವ ಸಾಲ ಎಂದೂ ಮಹಾತ್ಮಾ ಗಾಂಧೀ ಹೇಳುತ್ತಿದ್ದರು” ಎಂದು ಖಂಡ್ರೆ ಸ್ಮರಿಸಿದರು.

“ಬೆಂಗಳೂರು ನಗರವೊಂದರಲ್ಲೇ ಸುಮಾರು 10 ಸಾವಿರ ಕೋಟಿ ರೂ. ಬೆಲೆ ಬಾಳುವ 250 ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ಅಲ್ಲಿ ಸಸಿಗಳನ್ನು ನೆಡಲಾಗಿದೆ. ಬೆಂಗಳೂರು ನಗರದ ಹಸಿರು ಪ್ರದೇಶ ಹೆಚ್ಚಳ ಮಾಡಲಾಗುತ್ತಿದೆ. ಇದರ ಜೊತೆಗೆ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಲಾಲ್ ಬಾಗ್ ಮಾದರಿಯಲ್ಲಿ ಬೃಹತ್ ಸಸ್ಯೋದ್ಯಾನ ನಿರ್ಮಾಣ ಮಾಡಲಾಗುತ್ತಿದೆ. ಹೆಸರುಘಟ್ಟ ಪ್ರದೇಶದಲ್ಲಿ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.

ವನ್ಯಜೀವಿ ಸಪ್ತಾಹಕ್ಕೆ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು. ವನ, ವನ್ಯಜೀವಿ ರಾಯಭಾರಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಮತ್ತಿತರರು ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...