ಕೊಲೆ ಬೆದರಿಕೆ | ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಭಾರಿ ಪಿತೂರಿ: ಬಿ ಕೆ ಹರಿಪ್ರಸಾದ್‌ ಗಂಭೀರ ಆರೋಪ

Date:

ಸತ್ಯ, ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸುತ್ತಿರುವುದು ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈಗನ್ನಡಿ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

- Advertisement -

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಟ್ಟು ಹೊಡೆಯುತ್ತೇವೆ ಎಂದು ಹೇಳುವ ಮೂಲಕ ಕೇರಳ ಬಿಜೆಪಿ ಮಾಧ್ಯಮ ವಕ್ತರ ಪಿಂಟು ಮಹಾದೇವನ್‌ ಕೊಲೆ ಬೆದರಿಕೆ ಹಾಕಿರುವುದನ್ನು ಉಲ್ಲೇಖಿಸಿ ಬಿ ಕೆ ಹರಿಪ್ರಸಾದ್‌ ಅವರು ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ದೇಶದ ಕೋಟ್ಯಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ ” ಬಿಜೆಪಿಯ ವಿರುದ್ಧ ರಾಹುಲ್ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ” ಎಂದು ಹೇಳಿಕೆ ನೀಡುವುದು ರಾಹುಲ್ ಗಾಂಧಿಯವರ ವಿರುದ್ಧ ಗಂಭೀರವಾಗಿ ಭಾರಿ ಪಿತೂರಿ ನಡೆಸಿರುವುದು ಸ್ಪಷ್ಟವಾಗುತ್ತಿದೆ” ಎಂದಿದ್ದಾರೆ.

“ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ. ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ. ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...