ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

Date:

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಘೋಷಿಸಿದ್ದಾರೆ. ಈ ಮೂಲಕ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲಾಗಿದೆ.

- Advertisement -

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಈ ಮಾಹಿತಿ ನೀಡಿದರು. ಈ ಸಂದರ್ಭದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಬದಲಾಯಿಸುವ ವಿಚಾರದ ಬಗ್ಗೆಯೂ ಪ್ರಸ್ತಾಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ದಕ್ಷಿಣ ಕನ್ನಡ ಜಿಲ್ಲೆಯ ಬದಲಾಗಿ ಮಂಗಳೂರು ಜಿಲ್ಲೆಯಾಗಿ ಘೋಷಿಸಲು ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು. ಜನಾಭಿಪ್ರಾಯ ಮುಖ್ಯವಾಗುತ್ತದೆ. ಒಂದು ತಿಂಗಳಲ್ಲಿ ಈ ಸಂಬಂಧ ನೋಟಿಫಿಕೇಷನ್ ಸಿದ್ಧಪಡಿಸಿ ಜನರ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಮಾನ್ಯತೆ ಘೋಷಿಸಿ: ಕರವೇ ಆಗ್ರಹ

ಯು ಟಿ ಖಾದರ್ ಅವರು ಸ್ಪೀಕರ್ ಆಗಿದ್ದಾಗ ಮೊದಲು ಬಂದ ಪ್ರಶ್ನೆ ತುಳು ಭಾಷೆಗೆ ಸಂಬಂಧಿಸಿದಂತೆ ಆಗಿದೆ. ಇಲ್ಲಿನ ಶಾಸಕರು, ಖಾದರ್ ಅವರು ಸೇರಿ ತುಳು ಭಾಷೆ ಅಧಿಕೃತ ಭಾಷೆಯನ್ನಾಗಿ ಮಾಡಲು ನಮ್ಮ ಮೇಲೆ ಒತ್ತಡ ಹೆಚ್ಚಿಸಿದರು ಎಂದರು.

ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಮುಖ್ಯವಾಗಿ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿ ಸಂಬಂಧ ಕ್ರಮಕೈಗೊಳ್ಳಲಾಗುವುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ವಿವರವಾಗಿ ತಿಳಿಸಲಾಗುವುದು. ಮಲೆನಾಡು ಮತ್ತು ಕರಾವಳಿ ಪ್ರದೇಶ ಒಳಗೊಂಡಂತೆ ಪ್ರವಾಸೋದ್ಯಮ ನೀತಿ ಮಾಡಲಾಗುವುದು. ಮುಖ್ಯವಾಗಿ ಮೂಲಸೌಕರ್ಯ ನೀತಿ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಮೀನುಗಾರಿಕೆಗೆ ಪ್ರೋತ್ಸಾಹ ನೀಡಲಾಗುವುದು. ಮೆರಿನ್ ಸಂಬಂಧಿಸಿದ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು, ಸೀಟುಗಳನ್ನು ಇನ್ನೂರಕ್ಕೆ ಏರಿಸಲಾಗುವುದು. ಮಂಗಳೂರಿನಲ್ಲಿ ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆ ಆಗಬೇಕು ಎಂಬ ಒತ್ತಾಯವಿದೆ. ಈ ಸಂಬಂಧ ಉಳಿದ ಮಾಹಿತಿಯನ್ನು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ತಿಳಿಸುತ್ತಾರೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು...

ರಾಜಸ್ಥಾನ ಸ್ಥಳೀಯ ಚುನಾವಣೆ: 86 ಗೆದ್ದರೂ ಮಿಷನ್-200 ಸಾಧಿಸಲು ಬಿಜೆಪಿ ಹರಸಾಹಸ; ‘ಆಪರೇಷನ್ ಲೋಟಸ್’ ಸದ್ದು!

ರಾಜಸ್ಥಾನದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 200...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...