OPS ಜಾರಿ ಬಗ್ಗೆ ಸಮಿತಿ ವರದಿ ಬಳಿಕ‌ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

Advertisements

ಏಳನೇ ವೇತನ‌ ಆಯೋಗದ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಆರೋಗ್ಯ ಸಂಜೀವಿನಿ ಬಗ್ಗೆಯೂ ಸೂಕ್ತ ತೀರ್ಮಾನ ಆಗಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ದವಿದೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ಸದಾ ತೆರೆದ ಮನಸ್ಸಿನಿಂದ ಇರುತ್ತೇನೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು, ಈ ಜವಾಬ್ದಾರಿಯನ್ನೂ ನೀವು ಪರಿಣಾಮಕಾರಿಯಾಗಿ ಜನರಿಗೆ, ಫಲಾನುಭವಿಗಳಿಗೆ ತಲುಪಿಸಿ” ಎಂದರು.

Advertisements

“ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ. ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರತ್ತದೆ. ಮಕ್ಕಳ ಪ್ರತಿಭೆ ರೂಪುಗೊಳ್ಳಲು ಶಿಕ್ಷಕರಷ್ಟೇ ಪೋಷಕರ ಶ್ರಮ ಕೂಡ ಅಗತ್ಯ. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳದಿದ್ದರೆ ಯಾರನ್ನೂ ದೂರಲು ಸಾಧ್ಯವಿಲ್ಲ” ಎಂದು ಹೇಳಿದರು.

“ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ನಿಮ್ಮ ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ. ಅಪ್ಪ ಅಮ್ಮ ಖರ್ಚು ಮಾಡಿದ ಹಣದಲ್ಲಿ ನೀವೆಲ್ಲಾ ಸರ್ಕಾರಿ ನೌಕರರಾಗಲು ಸಾಧ್ಯವಿಲ್ಲ. ನಾವು ಶಾಸಕರಾಗಲು, ಮಂತ್ರಿಗಳಾಗಲು ಸಾಧ್ಯವಿಲ್ಲ. ಜನರ ತೆರಿಗೆ ಹಣದಲ್ಲಿ ನಾವೆಲ್ಲಾ ಬದುಕಿದ್ದೇವೆ. ಹೀಗಾಗಿ ಸಮಾಜದ, ಎಲ್ಲಾ ಜಾತಿ, ಧರ್ಮದವರ ಋಣವೂ ನಮ್ಮ ಮೇಲಿದೆ. ಈ ಋಣ ಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಕಿವಿಮಾತು ಹೇಳಿದರು.

“ನಮಗೆ ವಿಶ್ವ ಮಾನವರಾಗುವ ಅವಕಾಶ ಇದೆ. ಅಲ್ಪ ಮಾನವರಾಗುವುದು ಬೇಡ. ಹುಟ್ಟು ಆಕಸ್ಮಿಕ. ಸಾವು ಗ್ಯಾರಂಟಿ. ಆದ್ದರಿಂದ ನಾವು ಸಮಾಜದ ಋಣ ತೀರಿಸಿ ಬದುಕನ್ನು ಸಾರ್ಥಕ ಮಾಡಿಕೊಳ್ಳಿ. ಶಿಕ್ಷಕರು, ಸೈನಿಕರು, ರೈತರು ನಮ್ಮ ಬದುಕನ್ನು ಹಸನು ಮಾಡಿದ್ದಾರೆ. ಈ ಮೂವರ ಋಣ ತೀರಿಸುವ ಕೆಲಸ ನಾವು ಮಾಡಬೇಕಿದೆ. ಮಕ್ಕಳಲ್ಲೂ ವೈಚಾರಿಕ, ವೈಜ್ಞಾನಿಕ ಪ್ರಜ್ಞೆ ಮೂಡಿಸುವ ಮೂಲಕ ಸಮಾಜಮುಖಿ ಪ್ರಜೆಗಳನ್ನು ರೂಪಿಸಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X