ಕ್ಷೇತ್ರ ಮರುವಿಂಗಡಣೆಗೆ ಜೋಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಹೆಚ್‌ಡಿಕೆ ಗರಂ

Date:

ಮೂರು ದಶಕಗಳ ನಂತರವೂ ಕಾಂಗ್ರೆಸ್‌ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಸಾಕ್ಷಿಯಾಯಿತು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -

ಶುಕ್ರವಾರ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. 278 ಸದಸ್ಯರು ಮಸೂದೆ ಪರವಾಗಿ ಮತ ಚಲಾಯಿಸಿದರೆ. 211 ಸದಸ್ಯರು ಮಸೂದೆಯೆ ವಿರುದ್ಧವಾಗಿ ಮತ ಚಲಾಯಿಸಿದರು. ಬಹುಮತ ಸಿಗದ ಕಾರಣ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನೆಡೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಮಸೂದೆ ತಿರಸ್ಕಾರಗೊಂಡ ಬೆನ್ನಲ್ಲೇ ಎಕ್ಸ್‌ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಕುಮಾರಸ್ವಾಮಿ “1996 ಮತ್ತು 2026ರ ಕರಾಳ ಇತಿಹಾಸ ಮರುಕಳಿಸಿದೆ. ಅಂದು ಹೆಚ್‌. ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಿತು ಅಂದು ಇದೇ ಕಾಂಗ್ರೆಸ್‌ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದವು” ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ದಿಟ್ಟ ಹೆಜ್ಜೆ ಇರಿಸಿದ್ದರು, ಪುನಃ ಅದೇ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ”. ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ>ಮಹಿಳಾ ಮೀಸಲಾತಿ: ಚುನಾವಣಾ ತಂತ್ರವಾಗಿಸಿಕೊಂಡಿತೇ ಮೋದಿ ಸರ್ಕಾರ?

“ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣವಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು” ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮೀಸಲಾತಿ ನೆಪದಲ್ಲಿ ನಡೆದಿದ್ದೇನು?

ಜನಸಂಖ್ಯೆಯ ಆಧಾರದಲ್ಲಿ ನಡೆಯುವ ಕ್ಷೇತ್ರ ಮರುವಿಂಗಡಣೆಗೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಕರ್ನಾಟಕ, ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುವ ಭೀತಿ ಉಂಟಾಗಿದೆ. ವಿರೋಧವಿರುವ ಈ ಮಸೂದೆಯ ಜತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸಿ ಮಂಡಿಸುವ ಕೇಂದ್ರದ ನಿಲುವಿಗೆ ವಿರೋಧ ಪಕ್ಷಗಳ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ಬೆಂಬಲವಾಗಿ ನಿಂತಿತ್ತು. ಆದರೆ ಈಗ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದರೆ ಕ್ಷೇತ್ರ ಮರುವಿಂಗಡಣೆಯನ್ನೂ ಅಂಗೀಕರಿಸಿದಂತೆ. ಈ ಕಾರಣದಿಂದಾಗಿ ವಿಪಕ್ಷಗಳು ಈ ಸಂವಿಧಾನ ತಿದ್ದುಪಡಿ ವಿರುದ್ಧವಾಗಿ ನಿಂತಿತು. ಚುನಾವಣಾ ಸಮಯದಲ್ಲಿ ಲಾಭಕ್ಕಾಗಿಯೇ ಈ ತಂತ್ರ ರೂಪಿಸಿದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈಗ ವಿಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸುವ ಯತ್ನ ಮಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ...

ಈ ದಿನ ಸಂಪಾದಕೀಯ | ರಾಷ್ಟ್ರಧ್ವಜ ವಿರುದ್ಧದ RSS ‘ಕುತಂತ್ರ’ ಸೋಲುತ್ತಲೇ ಇರುತ್ತದೆ!

ತ್ರಿವರ್ಣ ರಾಷ್ಟ್ರಧ್ವಜವನ್ನು ತಿರಸ್ಕರಿಸಿ, ಕೇಸರಿ ಧ್ವಜವೇ ಭಾರತದ ನಿಜವಾದ ರಾಷ್ಟ್ರಧ್ವಜವಾಗಬೇಕೆಂದು ಪ್ರತಿಪಾದಿಸುವ...