ದೆಹಲಿ ಕಾರ್ ಸ್ಫೋಟ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು: ಬಿ ಕೆ ಹರಿಪ್ರಸಾದ್‌

Date:

ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ದಾಳಿಯನ್ನು ಖಂಡಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಷ್ಟ್ರದ ರಾಜಧಾನಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸರ್ಕಾರದ ಭದ್ರತಾ ವ್ಯವಸ್ಥೆಯ ವಿಫಲತೆಯ ಸ್ಪಷ್ಟ ನಿದರ್ಶನ. ದೆಹಲಿಯಂತಹ ಉನ್ನತ ಭದ್ರತಾ ವಲಯದಲ್ಲಿ ಸ್ಫೋಟ ಸಂಭವಿಸಿರುವುದು ಕೇವಲ ಕಾನೂನು ಸುವ್ಯವಸ್ಥೆಯ ವಿಷಯವಲ್ಲ — ಇದು ರಾಷ್ಟ್ರದ ಆಂತರಿಕ ಭದ್ರತೆಯ ಮೇಲಿನ ನಂಬಿಕೆಗೆ ಬಿದ್ದ ಭಾರಿ ಹೊಡೆತ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

“ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ ರಾಜಧಾನಿಯೇ ಸುರಕ್ಷಿತವಾಗಿರದಿದ್ದರೆ, ಇಡೀ ಭಾರತವು ಹೇಗೆ ಸುರಕ್ಷಿತವಾಗಿರಲು ಸಾಧ್ಯ? ಗೃಹ ಸಚಿವರ ಅಸಮರ್ಥತೆ ಮತ್ತು ನಿರ್ಲಕ್ಷ್ಯದಿಂದಲೇ ಇಂತಹ ದಾರುಣ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ. ಪುಲ್ವಾಮಾ ಬಳಿ 40 ಭಾರತೀಯ ವೀರ ಯೋಧರನ್ನ ಬಲಿ ಪಡೆದುಕೊಂಡಿದ್ದು, ಪಹಲ್ಗಾಮ್‌ನಲ್ಲಿ ಅಮಾಯಕ 26 ಪ್ರವಾಸಿಗರ ಬಲಿ, ರಾಷ್ಟ್ರ ರಾಜಧಾನಿಯಲ್ಲೇ ಭೀಕರ ಬಾಂಬ್ ಸ್ಪೋಟ ಹೀಗೆ ಸಾಲು ಸಾಲು ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದ್ದರು ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಅಮಾಯಕ ಜನರ ಪ್ರಾಣಗಳು ರಾಜಕೀಯ ಆಟಗಳಿಗೆ ಬಲಿಯಾಗುತ್ತಿರುವುದು ಅಕ್ಷಮ್ಯ. ಜನರ ಜೀವ ಮತ್ತು ಸುರಕ್ಷತೆಯ ಖಾತ್ರಿ ನೀಡಬೇಕಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿರುವ ಭದ್ರತಾ ವ್ಯವಸ್ಥೆ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿರುವಾಗ, ನೈತಿಕ ಹೊಣೆಹೊತ್ತು ಗೃವ ಸಚಿವ ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ದೆಹಲಿಯ ಜನತೆಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು, ಮತ್ತು ಭದ್ರತಾ ವ್ಯವಸ್ಥೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...