ಸಿಎಸ್‌ ವಿರುದ್ಧ ಅವಹೇಳನ, ಬಿಜೆಪಿಯ ಎ‌ನ್ ‌ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಸಭಾಪತಿಗೆ ಆಗ್ರಹ

Date:

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್‌ ರವಿಕುಮಾರ್‌ ವಿರುದ್ಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದ ವಿಧಾನ ಪರಿಷತ್ ಮುಖ್ಯ‌ ಸಚೇತಕ ಸಲೀಂ ಅಹಮದ್ ನಿಯೋಗ ಮನವಿ ಸಲ್ಲಿಸಿದೆ.

- Advertisement -

ಗುರುವಾರ ಸಭಾಪತಿಗಳನ್ನು ಭೇಟಿಯಾದ ಸಲೀಂ ಅಹ್ಮದ್‌ ನಿಯೋಗವು, ಎನ್‌ ರವಿಕುಮಾರ್‌ ಹೇಳಿಕೆ ಸಾರ್ವಜನಿಕವಾಗಿ ಮತ್ತು ಮಾಧ್ಯಮ/ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಗೊಂಡಿದ್ದು, ಅಧಿಕಾರಿಕ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿ ವ್ಯಕ್ತಿತ್ವವನ್ನು ಅವಹೇಳನಗೊಳಿಸುವ ಕೆಲಸವಾಗಿದೆ. ಈ ರೀತಿಯ ಹೇಳಿಕೆಗಳು ಸರ್ಕಾರದ ಅತೀ ಉನ್ನತ ಪದವಿಯ ನಾಗರಿಕ ಸೇವಾಧಿಕಾರಿಗಳ ಧೈರ್ಯ ಮತ್ತು ಪ್ರಾಮಾಣಿಕತೆಗೆ ಚ್ಯುತಿ ತರುತ್ತದೆ” ಎಂದು ಮನವರಿಕೆ ಮಾಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎನ್‌ ರವಿಕುಮಾರ್‌ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಧಾನ ಪರಿಷತ್‌ನ ನಿಯಮಗಳು ಹಾಗೂ ನೈತಿಕ ಮಾರ್ಗಸೂಚಿಗಳ ಪ್ರಕಾರ ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸಭಾಪತಿಗಳನ್ನು ನಿಯೋಗ ಆಗ್ರಹಿಸಿತು.

“ತ್ವರಿತ ಕ್ರಮ ಕೈಗೊಂಡಲ್ಲಿ ಸಾರ್ವಜನಿಕ ಸೇವೆಯ ಗೌರವ ಮತ್ತು ಪರಿಷತ್ತಿನ ಪವಿತ್ರತೆಯನ್ನು ಕಾಪಾಡಲು ಸಾಧ್ಯವಾಗುತ್ತದೆ. ಈ ನಡೆ ಸಂಸತ್ತಿನ ನೀತಿ ಸಂಹಿತೆಯ ನಿಯಮಗಳಿಗೆ ವಿರುದ್ಧವಾಗಿದ್ದು, ಮಹಿಳಾ ಅಧಿಕಾರಿಗಳಿಗೆ ಅಗೌರವ ಪ್ರದರ್ಶಿಸುವ ಪ್ರವೃತ್ತಿಯಾಗಿರುತ್ತದೆ. ವ್ಯಕ್ತಿಗತ ನಿಂದನೆ ಮಾಡುವ ಮೂಲಕ, ಸಮಾಜದಲ್ಲಿ ಕೀಳು ಅಭಿರುಚಿ ಎಬ್ಬಿಸುವ ಈ ಹೇಳಿಕೆ ವಿಧಾನ ಪರಿಷತ್ ಸದಸ್ಯನ ಸ್ಥಾನಕ್ಕೆ ಒಪ್ಪದಂತಹ ಹಾಗೂ ಪರಿಷತ್ತಿನ ಗೌರವವನ್ನು ಕುಗ್ಗಿಸುವ ಪ್ರವೃತ್ತಿಯಾಗಿರುತ್ತದೆ” ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಸಲೀಂ ಅಹಮದ್ ನಿಯೋಗದಲ್ಲಿ ಬಿ ಕೆ ಹರಿಪ್ರಸಾದ್, ಮಂಜುನಾಥ್ ಭಂಡಾರಿ, ನಾಗರಾಜ ಯಾದವ್, ಬಲ್ಕಿಸ್ ಬಾನು
ಮಲ್ಲಾಜಮ್ಮ, ರಾಮೋಜಿ ಗೌಡ, ಡಿಟಿ ಶ್ರೀನಿವಾಸ್ ಹಾಗೂ ರಮೇಶ್ ಬಾಬು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...