ಬಾಕಿ ಭರವಸೆಗಳ ಈಡೇರಿಕೆಗೆ ಆಗ್ರಹ: ಆ.5ರವರೆಗೆ ರಾಜ್ಯಾದ್ಯಂತ KRMO ಅಭಿಯಾನ

Date:

ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆ, ಪ್ರಚಾರ ಭಾಷಣಗಳು ಹಾಗೂ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಪ್ರಮುಖ ಹತ್ತು ಭರವಸೆಗಳನ್ನು ಈವರೆಗೂ ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ಮುಸ್ಲಿಂ ಸಂಘಟನೆಗಳ ಒಕ್ಕೂಟ (KRMO), ಬಾಕಿ ಇರುವ ಭರವಸೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಜುಲೈ 20ರಿಂದ ಆಗಸ್ಟ್ 5ರವರೆಗೆ ರಾಜ್ಯಾದ್ಯಂತ ಬೃಹತ್ ಆಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

- Advertisement -

ಈ ಕುರಿತು KRMO ಸಂಚಾಲಕರಾದ ಸುಹೇಲ್ ಅಹ್ಮದ್ ಮರೂರ್, ಯಹ್ಯಾ ದಾಮೂದಿ, ಹಾರಿಸ್ ಸಿದ್ದೀಕಿ ಹಾಗೂ ಝಹೂರ್ ಖಾಝಿ ಜಂಟಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದ್ದು, ಚುನಾವಣಾ ಸಮಯದಲ್ಲಿ ನೀಡಿದ್ದ ಹತ್ತು ಪ್ರಮುಖ ಭರವಸೆಗಳ ಪೈಕಿ ಹಿಜಾಬ್ ನಿರ್ಬಂಧ ವಾಪಸ್ ಪಡೆಯುವ ಒಂದು ಭರವಸೆ ಮಾತ್ರ ಇತ್ತೀಚೆಗೆ ಈಡೇರಿದೆ. 2B ಮೀಸಲಾತಿ ಮರುಸ್ಥಾಪನೆ, ದ್ವೇಷ ಭಾಷಣ ಹಾಗೂ ಅಪರಾಧಗಳ ವಿರುದ್ಧ ಕಠಿಣ ಕಾನೂನು ಕ್ರಮ, ಗೋಹತ್ಯಾ ನಿಷೇಧ ಕಾಯ್ದೆಗೆ ತಿದ್ದುಪಡಿ, ಮತಾಂತರ ನಿರ್ಬಂಧ ಕಾಯ್ದೆ ವಾಪಸ್, ಜಾತಿ ಸಮೀಕ್ಷೆ ವರದಿ ಜಾರಿ, ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ. ಬಜೆಟ್ ಹಂಚಿಕೆ, ವಕ್ಫ್ ಆಸ್ತಿಗಳ ರಕ್ಷಣೆ, ಮುಸ್ಲಿಮರಿಗೆ ಜನಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ, ಶೈಕ್ಷಣಿಕ ಏಳಿಗೆಗೆ ನೆರವು ಮತ್ತು ಎಸ್‌ಐಆರ್ (SIR) ವಿರುದ್ಧ ಸೂಕ್ತ ರಾಜಕೀಯ ರಣತಂತ್ರ ರೂಪಿಸುವುದು ಸೇರಿದಂತೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒಕ್ಕೂಟ ಒತ್ತಾಯಿಸಿದೆ.

ಮೇ 16ರಂದು ಬೆಂಗಳೂರಿನ ಪುರಭವನದಲ್ಲಿ ನಡೆದ ‘ಕರ್ನಾಟಕ ಮುಸ್ಲಿಂ ಸಮಾವೇಶ’ದಲ್ಲಿ ಸರ್ಕಾರದ ಮೂರು ವರ್ಷಗಳ ಕಾರ್ಯವೈಖರಿ ಕುರಿತ ಸಮಗ್ರ ವರದಿ ಹಾಗೂ ಭರವಸೆಗಳನ್ನೊಳಗೊಂಡ ಪುಸ್ತಕವನ್ನು ಬಿಡುಗಡೆ ಮಾಡಲಾಗಿತ್ತು. ಈ ಪುಸ್ತಕದ ಪ್ರಭಾವದಿಂದಲೇ ವಾರದೊಳಗೆ ಸರ್ಕಾರ ಹಿಜಾಬ್ ಮೇಲಿನ ನಿರ್ಬಂಧವನ್ನು ವಾಪಸ್ ಪಡೆದಿತ್ತು ಎಂದು KRMO ತಿಳಿಸಿದೆ.

ಸಚಿವ ಸಂಪುಟ ಮತ್ತು ಆಡಳಿತದಲ್ಲಿ ಬದಲಾವಣೆಗಳಾಗಿರುವ ಕಾರಣ, ಹೊಸ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಕೆಲಸ ಆರಂಭಿಸಲು ಸಮಯಾವಕಾಶ ನೀಡಲಾಗಿತ್ತು. ಆದರೆ ಈಗ ಹೊಸ ಸರ್ಕಾರ ಬಂದು ತಿಂಗಳು ಕಳೆದಿದ್ದು, ಇನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಭರವಸೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಲಾಗಿದೆ.

ಜುಲೈ 20ರಿಂದ ಆಗಸ್ಟ್ 5ರವರೆಗೆ ನಡೆಯುವ ಆಗ್ರಹ ಅಭಿಯಾನದ ಭಾಗವಾಗಿ ರಾಜ್ಯದ ಶಾಸಕರು ಹಾಗೂ ಪ್ರಮುಖ ರಾಜಕೀಯ ನಾಯಕರಿಗೆ ಆಗ್ರಹಗಳ ಪುಸ್ತಕ ನೀಡುವುದು, ಉಲೆಮಾಗಳು ಹಾಗೂ ಧಾರ್ಮಿಕ ಸಂಘಟನೆಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವುದು, ಜಿಲ್ಲಾ ಕೇಂದ್ರಗಳಲ್ಲಿ ಪತ್ರಿಕಾಗೋಷ್ಠಿ ನಡೆಸುವುದು, ಶುಕ್ರವಾರ ಜುಮಾ ನಮಾಜ್ ಬಳಿಕ ಮಸೀದಿಗಳಲ್ಲಿ ಕರಪತ್ರ ವಿತರಣೆ ಹಾಗೂ ಸಹಿ ಸಂಗ್ರಹ ಅಭಿಯಾನ, ಗಣ್ಯರು ಮತ್ತು ಬುದ್ಧಿಜೀವಿಗಳಿಂದ ಸರ್ಕಾರಕ್ಕೆ ಪತ್ರ ಬರೆಯಿಸುವುದು, ಕ್ರೈಸ್ತ ಧಾರ್ಮಿಕ ಮುಖಂಡರು ಹಾಗೂ ರೈತ ಸಂಘಟನೆಗಳನ್ನು ಭೇಟಿ ಮಾಡಿ ಬೆಂಬಲ ಕೋರಲು ಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಎಸ್‌ಬಿಐ ವರದಿ | 126 ವರ್ಷಗಳಲ್ಲೇ 5ನೇ ಅತಿ ಒಣ ಮುಂಗಾರು; ಕರ್ನಾಟಕಕ್ಕೂ ಮಳೆ ಕೊರತೆ

ಅಭಿಯಾನದ ಬಳಿಕ ದಾವಣಗೆರೆಯಲ್ಲಿ ಮತ್ತೊಂದು ‘ಕರ್ನಾಟಕ ಮುಸ್ಲಿಂ ಸಮಾವೇಶ’ ಆಯೋಜಿಸಿ ಆಗ್ರಹಗಳ ಪುಸ್ತಕವನ್ನು ಬಿಡುಗಡೆ ಹಾಗೂ ಪರಿಚಯಿಸಲಾಗುವುದು. ನಂತರ ಮಂಗಳೂರಿನಲ್ಲಿಯೂ ಇದೇ ಮಾದರಿಯ ಸಮಾವೇಶ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯದ ಬೆಂಬಲ ಮಹತ್ವದ ಪಾತ್ರ ವಹಿಸಿದೆ. ಆದ್ದರಿಂದ ಕಾಂಗ್ರೆಸ್ ತನ್ನ ಚುನಾವಣಾ ಭರವಸೆಗಳನ್ನು ಶೀಘ್ರದಲ್ಲೇ ಈಡೇರಿಸಬೇಕು. ಸಾಮಾಜಿಕ ನ್ಯಾಯ ಮತ್ತು ನ್ಯಾಯಯುತ ಪ್ರಾತಿನಿಧ್ಯದ ಕುರಿತು ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಪ್ರತಿಪಾದಿಸುವ ಆಶಯವನ್ನು ರಾಜ್ಯ ಸರ್ಕಾರ ಕಾರ್ಯರೂಪಕ್ಕೆ ತರಬೇಕು ಎಂದು KRMO ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...