ಆರ್‌ಟಿಇ ಜಾರಿ, ದತ್ತು ನೀತಿ ರದ್ದತಿಗೆ ಆಗ್ರಹ: ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಅಹೋರಾತ್ರಿ ಹೋರಾಟ

Date:

ಶಿಕ್ಷಣ ಹಕ್ಕು ಕಾಯಿದೆಯನ್ನು (ಆರ್‌ಟಿಇ) ಸಮರ್ಪಕವಾಗಿ ಜಾರಿಗೊಳಿಸಿ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು ಹಾಗೂ ಸರ್ಕಾರಿ ಶಾಲೆಗಳ ದತ್ತು ನೀತಿಯನ್ನು ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ, ಕರ್ನಾಟಕದ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಶನಿವಾರವೂ (ನ. 28) ಮುಂದುವರಿಯಿತು. ಇದೇ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆಗೆ ವೇದಿಕೆ ಆಗ್ರಹಿಸಿದ್ದು, ದತ್ತು ನೀತಿ ಕೈಬಿಡುವವರೆಗೆ ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಭೆ ನಿಗದಿಯಾಗಿ ಸ್ಪಷ್ಟ ಲಿಖಿತ ಭರವಸೆ ದೊರೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

- Advertisement -

ನವೆಂಬರ್ 26ರಿಂದ ಆರಂಭವಾಗಿರುವ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಕ್ಕೂ ಹೆಚ್ಚು ಕೂಲಿ ಕಾರ್ಮಿಕ ಮಹಿಳೆಯರು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ಹಕ್ಕು ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಸಂವಿಧಾನಬದ್ಧ ಜವಾಬ್ದಾರಿಯಾಗಿದ್ದು, ಅದನ್ನು ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್‌ಗಳ ಅವಲಂಬನೆಗೆ ಒಡ್ಡಬಾರದು ಎಂಬುದು ಹೋರಾಟಗಾರರ ಪ್ರಮುಖ ನಿಲುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸಣ್ಣ ನೀರಾವರಿ ಸಚಿವ ಡಾ. ಅಜಯ್ ಸಿಂಗ್ ಅವರು ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿದರು. ‘ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಿದೆ. ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲು ವ್ಯವಸ್ಥೆ ಮಾಡಲಾಗುವುದು’ ಎಂದು ಅವರು ಭರವಸೆ ನೀಡಿದರು. ಸಚಿವರ ಭರವಸೆಯನ್ನು ಸ್ವಾಗತಿಸಿದ ಹೋರಾಟಗಾರರು, ತಮ್ಮ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ನೇರ ಸಭೆ ನಡೆದು, ಸ್ಪಷ್ಟವಾದ ಲಿಖಿತ ಭರವಸೆ ದೊರೆಯುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅದರಂತೆ, ಮುಖ್ಯಮಂತ್ರಿಗಳೊಂದಿಗಿನ ಸಭೆ ನಿಗದಿಯಾಗುವವರೆಗೂ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿಯನ್ನು ಮುಂದುವರಿಸಲು ವೇದಿಕೆ ನಿರ್ಧರಿಸಿದೆ.

ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ ಅವರು, ಕಳೆದ ಮೂರು ದಿನಗಳಿಂದ ಕೂಲಿ ಮಾಡುವ ಹೆಣ್ಣುಮಕ್ಕಳು ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಅಹೋರಾತ್ರಿ ಧರಣಿಯಲ್ಲಿ ತೊಡಗಿಸಿಕೊಂಡಿದ್ದರೂ ಅವರ ಹಕ್ಕೊತ್ತಾಯವನ್ನು ಕೇಳಲು ಬಾರದ ಮತ್ತು ಕನಿಷ್ಠ ಸ್ಪಂದಿಸದೆ ಇರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನಡೆ ಪ್ರಜಾತಂತ್ರ ವ್ಯವಸ್ಥೆಗೆ ಸ್ಫೂರ್ತಿದಾಯಕವಾದ ವಿಚಾರವಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಶಿಕ್ಷಕರು, ಮೂಲಸೌಕರ್ಯ ಮತ್ತು ಅನುದಾನವನ್ನು ಒದಗಿಸುವ ಬದಲು ಅವುಗಳನ್ನು ಖಾಸಗಿ ಸಂಸ್ಥೆಗಳ ದತ್ತು ಅಥವಾ ಮೆಂಟರ್‌ಶಿಪ್‌ಗೆ ನೀಡುವ ನೀತಿಯು ಸಾರ್ವಜನಿಕ ಶಿಕ್ಷಣದ ಆಶಯಕ್ಕೆ ವಿರುದ್ಧವಾಗಿದ್ದು, ಆರ್‌ಟಿಇ ಅನುಷ್ಠಾನಕ್ಕೆ ಕನಿಷ್ಠ ಕ್ರಿಯಾ ಯೋಜನೆಯನ್ನೂ ರೂಪಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ರಾಜ್ಯದ ಪ್ರತಿಯೊಂದು ಮಗುವಿಗೂ ಶಿಕ್ಷಣದ ಹಕ್ಕನ್ನು ಖಚಿತಪಡಿಸಲು ಶಿಕ್ಷಣ ಹಕ್ಕು ಕಾಯಿದೆಯನ್ನು ಸಮಗ್ರವಾಗಿ ಜಾರಿಗೊಳಿಸಬೇಕು ಎಂಬುದು ಹೋರಾಟದ ಪ್ರಮುಖ ಹಕ್ಕೊತ್ತಾಯವಾಗಿದೆ. ಇದಕ್ಕಾಗಿ ಶಾಲಾವಾರು ಅಗತ್ಯಗಳು, ಶಿಕ್ಷಕರ ನೇಮಕಾತಿ, ಮೂಲಸೌಕರ್ಯ, ಅನುದಾನ ಮತ್ತು ಅನುಷ್ಠಾನದ ಕಾಲಮಿತಿಯನ್ನು ಒಳಗೊಂಡ ಸಮಗ್ರ ಕ್ರಿಯಾ ಯೋಜನೆಯನ್ನು ಸರ್ಕಾರ ರೂಪಿಸಿ ಪ್ರಕಟಿಸಬೇಕು ಎಂದು ವೇದಿಕೆ ಒತ್ತಾಯಿಸಿದೆ.

ಇದರೊಂದಿಗೆ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳು ಮತ್ತು ಕಾರ್ಪೊರೇಟ್‌ಗಳ ದತ್ತು ಅಥವಾ ಮೆಂಟರ್‌ಶಿಪ್‌ಗೆ ನೀಡುವ ಯೋಜನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಲಾಗಿದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಹಾಗೂ ಸಾರ್ವಜನಿಕ ಶಿಕ್ಷಣದ ಆಡಳಿತ, ಹೊಣೆಗಾರಿಕೆ ಮತ್ತು ನಿಯಂತ್ರಣ ಸರ್ಕಾರದ ಬಳಿಯೇ ಉಳಿಯಬೇಕು ಎಂಬ ಬೇಡಿಕೆಯನ್ನು ಪ್ರತಿಭಟನಕಾರರು ಮುಂದಿಟ್ಟಿದ್ದಾರೆ.

ಶಿಕ್ಷಣವು ದಾನವಲ್ಲ, ಅದು ಪ್ರತಿಯೊಂದು ಮಗುವಿನ ಸಂವಿಧಾನಬದ್ಧ ಹಕ್ಕಾಗಿದ್ದು, ಸರ್ಕಾರಿ ಶಾಲೆಗಳನ್ನು ಖಾಸಗಿ ದಯೆ ಮತ್ತು ಕಾರ್ಪೊರೇಟ್‌ಗಳ ಔದಾರ್ಯಕ್ಕೆ ಬಿಡದೆ ಸರ್ಕಾರವೇ ಅವುಗಳನ್ನು ಸಮರ್ಥವಾಗಿ ಬಲಪಡಿಸಬೇಕು ಹಾಗೂ ಈ ಆಶಯ ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ಸ್ಪಷ್ಟಪಡಿಸಿದೆ. ಧರಣಿಯಲ್ಲಿ ಶಿಕ್ಷಣ ತಜ್ಞ ನಿರಂಜನಾರಾಧ್ಯ, ಗ್ರಾಕೂಸ ಸಂಘಟನೆಯ ಮುಖ್ಯಸ್ಥರಾದ ವಿದ್ಯಾ ಪಾಟೀಲ್, ಅಭಯ್, ಪೋಷಕ ಸಂಘಟನೆಯ ಅಧ್ಯಕ್ಷ ಯೋಗಾನಂದ, ಎಸ್‌ಡಿಎಂಸಿ (SDMC) ಸಮನ್ವಯ ವೇದಿಕೆಯ ಕೆ.ಆರ್. ಸೌಮ್ಯ ಸೇರಿದಂತೆ ಹಲವು ಶಿಕ್ಷಣ ಹಕ್ಕು ಹೋರಾಟಗಾರರು, ಪೋಷಕರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಎಸ್ಟೇಟ್ ಮಾಲೀಕರಿಂದ ಬಂದೂಕು ತೋರಿಸಿ ಮಹಿಳೆ,ಕಾರ್ಮಿಕರಿಗೆ ಮಾರಣಾಂತಿಕ ಹಲ್ಲೆ 

ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಬಂದೂಕು ತೋರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ...

ರಾಜ್ಯದ 16 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ದಕ್ಷಿಣ...

ಸಂಸತ್ತಿನ ಈ ವಿಶೇಷ ಅಧಿವೇಶನ ಮಹಿಳೆಯರಿಗಾಗಿ ಅಲ್ಲ; ಕ್ಷೇತ್ರ ಮರುವಿಂಗಡಣೆಗಾಗಿ!

ಮಹಿಳಾ ಮೀಸಲಾತಿಯನ್ನು ಯಾರೂ ವಿರೋಧಿಸಲು ಧೈರ್ಯ ಮಾಡುವುದಿಲ್ಲ ಎಂಬುದು ಸರ್ಕಾರದ ಲೆಕ್ಕವಾಗಿದೆ....

ಬಸವಣ್ಣನವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಮಾಅತೆ ಇಸ್ಲಾಮೀ ಹಿಂದ್ ತೀವ್ರ ಖಂಡನೆ

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ವಿರುದ್ಧ ಇತ್ತೀಚೆಗೆ ಆಡಿರುವ ಅವಹೇಳನಕಾರಿ...