ಡೆಂಘೀ ಸಾಂಕ್ರಾಮಿಕ ಕಾಯಿಲೆ: ರಾಜ್ಯ ಸರ್ಕಾರದಿಂದ ಅಧಿಸೂಚನೆ

Date:

Advertisements

ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ.

ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲವಾಗುವವರಿಗೆ ದಂಡ ವಿಧಿಸಲಾಗುತ್ತದೆ. ಕಟ್ಟಡ ಅಥವಾ ಜಮೀನಿನ ಮಾಲೀಕರು, ಬಾಡಿಗೆದಾರರು ತಮ್ಮ ವಾಸಸ್ಥಳಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಕಟ್ಟಡ, ಜಮೀನಿನಲ್ಲಿ ನೀರು ಶೇಖರಣೆ, ಅನುಪಯುಕ್ತ ಟ್ಯಾಂಕ್‌ಗಳು ಇಲ್ಲದಂತೆ ಎಚ್ಚರವಹಿಸಬೇಕು ಎಂದು ಸೂಚಿಸಲಾಗಿದೆ.

ಜಮೀನು, ಕಟ್ಟಡ, ನೀರಿನ ಟ್ಯಾಂಕ್‌ಗಳು, ಉದ್ಯಾನ, ಆಟದ ಮೈದಾನ ಸೇರಿದಂತೆ ಇತರೆ ಸ್ವತ್ತುಗಳ ಮಾಲೀಕರು, ಸ್ವಾಧೀನಾನುಭವದಲ್ಲಿ ಇರುವವರು ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಕಡ್ಡಾಯ. ನೀರಿನ ಶೇಖರಣಾ ಪಾತ್ರೆಗಳು, ಸಂಪ್‌ ಮತ್ತು ಓವರ್‌ಹೆಡ್‌ ಟ್ಯಾಂಕ್‌ಗಳನ್ನು ಸುರಕ್ಷಿತವಾಗಿ ಮುಚ್ಚಿರುವುದನ್ನು ಖಚಿತಪಡಿಸಿಕೊಂಡು ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಬೇಕು ಎಂದು ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ಡೆಂಘೀ ನಿಯಂತ್ರಣಾ ಕ್ರಮಗಳನ್ನು ಜಾರಿಗೆ ತರುವುದು, ಕಾಲ ಕಾಲಕ್ಕೆ ಅದನ್ನು ಪರಿಶೀಲಿಸುವ ಜತೆಗೆ ನಿಯಮ ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬೆಂಗಳೂರು ಹೊರತುಪಡಿಸಿ, ಉಳಿದ ಜಿಲ್ಲೆಗಳ ಅಧಿಕಾರ ವ್ಯಾಪ್ತಿಗೆ ಮಾತ್ರ ಸಕ್ಷಮ ಪ್ರಾಧಿಕಾರ ರಚಿಸಲಾಗುತ್ತದೆ. ಸಕ್ಷಮ ಪ್ರಾಧಿಕಾರ ಜಾರಿಗೊಳಿಸುವ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಪಾಲನೆ ಮಾಡದಿದ್ದರೆ, ಅಂಥವರಿಗೆ ದಂಡ ಹಾಕುವ ಅಧಿಕಾರ ಪ್ರಾಧಿಕಾರಕ್ಕಿದೆ.

ನಿಯಮ ಪಾಲಿಸದಿದ್ದರೆ ದಂಡ

ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಟುಂಬಗಳಿಗೆ ಕ್ರಮವಾಗಿ 800 ರೂ. ಮತ್ತು 400 ರೂ., ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲಾ-ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳಿಗೆ ಕ್ರಮವಾಗಿ 2 ಸಾವಿರ ಮತ್ತು 1,500 ರೂ., ಪ್ರಗತಿಯಲ್ಲಿರುವ ಅಥವಾ ಸ್ಥಗಿತಗೊಂಡ ನಿರ್ಮಾಣ ಸ್ಥಳಗಳು, ಖಾಲಿ ಜಾಗಗಳಿಗೆ ಕ್ರಮವಾಗಿ 4 ಸಾವಿರ ರೂ. ಮತ್ತು 2 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಸಕ್ಷಮ ಪ್ರಾಧಿಕಾರವು ಸೂಚನೆ ನೀಡಿದ ನಂತರವೂ ನಿಯಮ ಪಾಲಿಸದಿದ್ದರೆ ಹೆಚ್ಚುವರಿಯಾಗಿ ಶೇ 50ರಷ್ಟು ದಂಡ ಹಾಕಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಡೆಂಘೀ ಪ್ರಕರಣಗಳ ಸಂಖ್ಯೆ

ಆರೋಗ್ಯ ಇಲಾಖೆಯ ನೀಡಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಈವರೆಗೆ 30,719 ಜನರಲ್ಲಿ ಡೆಂಘೀ ಜ್ವರ ಪತ್ತೆಯಾಗಿದ್ದು, ಆ ಪೈಕಿ 30,336 ಮಂದಿ ಗುಣಮುಖರಾಗಿದ್ದಾರೆ. ಸದ್ಯ, ರಾಜ್ಯಾದ್ಯಂತ 367 ಸಕ್ರಿಯ ಪ್ರಕರಣಗಳಿವೆ. ಒಟ್ಟು 16 ಜನರು ಮೃತಪಟ್ಟಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X