ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

Date:

Advertisements

ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ, ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ನಟ ದರ್ಶನ್ ಅವರ 43 ಅಭಿಮಾನಿಗಳ ವಿರುದ್ಧ ಬೆಂಗಳೂರು ಪೊಲೀಸರು ಸೋಮವಾರ ರಾತ್ರಿ ಎಫ್ಐಆರ್ ದಾಖಲಿಸಿದ್ದಾರೆ.

ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ನಟಿ ರಮ್ಯಾ ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್‌ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ್ದರು. ಈ ಕಾಮೆಂಟ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿತ್ತು.

ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗ ದೂರು

ಹಾಗೆಯೇ ತಮ್ಮ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಿಡಿಕಾರಿರುವ ನಟಿ ರಮ್ಯಾ ಅವರು, ಮಹಿಳಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ರಮ್ಯಾ ದೂರಿನ ಆಧಾರದ ಮೇಲೆ ಪ್ರಮೋದ ಗೌಡ ಎಂಬ ವ್ಯಕ್ತಿ ಸೇರಿ 43 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇನ್ನು ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದ ರಾಜ್ಯ ಮಹಿಳಾ ಆಯೋಗ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಿ, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X