ಬೆಂಗಳೂರು | ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಸುಂದರ ತೆಂಕಿಲಾಯ ಎಂಬಾತನ ವಿರುದ್ಧ ದೂರು ದಾಖಲು

Date:

ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ ಸುಂದರ ತೆಂಕಿಲಾಯ ಎಂಬುವವರ ವಿರುದ್ಧ ದೂರು ದಾಖಲಾಗಿದೆ.  ಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಹರುವೇಗೌಡ ಅವರು ಬೆಂಗಳೂರು ನಗರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಸೋನಿಯಾ ಗಾಂಧಿ ಅವರ ಆತ್ಮಕಥನ ‘Belonging: A Journey of Love’ವನ್ನು ಓದುತ್ತಿರುವ ಚಿತ್ರಗಳನ್ನು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ, ತನ್ನ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವಿಕೃತ ಮೆರೆದಿದ್ದ ಸುಂದರ ತೆಂಕಿಲಾಯ, ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ, ಮಹಿಳೆಯ ಘನತೆಗೆ ಧಕ್ಕೆ ತರುವಂತಹ ರೀತಿಯಲ್ಲಿ ನಿಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಇದೀಗ, ಸುಂದರ ತೆಂಕಿಲಾಯ ವಿರುದ್ಧ ಕುಶಾಲ್ ಹರುವೇಗೌಡ ಅವರು ದೂರು ದಾಖಲಿಸಿದ್ದಾರೆ. ದೂರಿನಲ್ಲಿ; “ಸುಂದರ ತೆಂಕಿಲಾಯ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಸೋನಿಯಾ ಗಾಂಧಿ ಅವರ ಕುರಿತು ಪೋಸ್ಟ್ ಪ್ರಕಟಿಸಿದ್ದರು. ಅದರಲ್ಲಿ ಸೋನಿಯಾ ಗಾಂಧಿ ಅವರನ್ನು ಉಲ್ಲೇಖಿಸಲು ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿದೆ” ಎಂದು ಆರೋಪಿಸಿದ್ದಾರೆ.

“ಸೋನಿಯಾ ಗಾಂಧಿ ಅವರ ಜೀವನಾನುಭವ, ಕುಟುಂಬ, ಪ್ರೀತಿ ಮತ್ತು ರಾಜಕೀಯ ಬದುಕಿನ ಕುರಿತು ಪ್ರಕಟವಾಗಿರುವ ‘Belonging: A Journey of Love’ ಪುಸ್ತಕದ ನೆಪದಲ್ಲಿ ಅವರನ್ನು ಅವಮಾನಿಸುವ ಪ್ರಯತ್ನ ನಡೆದಿದೆ. ಅಲ್ಲದೆ, ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಕುಟುಂಬದ ಕುರಿತು ಕೂಡ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ” ಎಂದು ದೂರಿದ್ದಾರೆ.

“ಇಂತಹ ಹೇಳಿಕೆಗಳು ಕೇವಲ ರಾಜಕೀಯ ಟೀಕೆಗೆ ಸೀಮಿತವಾಗದೆ, ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ ತರುವ ಸ್ವರೂಪದಲ್ಲಿವೆ. ರಾಜಕೀಯ ವಿಚಾರಧಾರೆಗಳ ಕುರಿತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಮತ್ತು ನಾಯಕರನ್ನು ಟೀಕಿಸುವುದು ಪ್ರಜಾಪ್ರಭುತ್ವದಲ್ಲಿ ಸಹಜ. ಆದರೆ, ಮಹಿಳೆಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸುವುದು ಮತ್ತು ಅವರ ವೈಯಕ್ತಿಕ ಘನತೆಗೆ ಧಕ್ಕೆ ತರುವುದು ಸಮರ್ಥನೀಯವಲ್ಲ” ಎಂದು ಕುಶಾಲ್ ಹರುವೇಗೌಡ ದೂರಿನಲ್ಲಿ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಟ್ರಂಪ್‌ ಸೊಕ್ಕು ಮುರಿದ ಅಮೆರಿಕನ್ನರು; ಸರ್ವಾಧಿಕಾರದ ಮದಕ್ಕೆ ಜನಾದೇಶದ ಪೆಟ್ಟು!

“ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರ ವಿರುದ್ಧ ಇಂತಹ ಭಾಷೆಯನ್ನು ಬಳಸುವುದರಿಂದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗುತ್ತದೆ. ಮಾತ್ರವಲ್ಲದೆ, ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಅನಗತ್ಯ ದ್ವೇಷ ಮತ್ತು ವೈಮನಸ್ಸನ್ನು ಉಂಟುಮಾಡುವ ಸಾಧ್ಯತೆಯಿದೆ” ಎಂದು ಅವರು ಆಕ್ಷೇಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಂದರ ತೆಂಕಿಲಾಯ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲ್ ಒತ್ತಾಯಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನೆಂದು ನಂಬಿಸಿ 70 ಬಾಲಕಿಯರಿಗೆ ವಂಚನೆ: ಭಾರತೀಯ ಮೂಲದ ಬ್ರಿಟನ್ ಯುವಕನಿಗೆ 30 ವರ್ಷ ಜೈಲು

ಬ್ರಿಟನ್‌ನಲ್ಲಿ ಕನಿಷ್ಠ 70 ಅಪ್ರಾಪ್ತ ಬಾಲಕಿಯರನ್ನು ಆನ್‌ಲೈನ್ ಮೂಲಕ ವಂಚಿಸಿ, ಲೈಂಗಿಕ...

ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಹೊಸ ನಿಯಮ: 50,000 ಜನರಿಗೆ ಮಾತ್ರ ಅವಕಾಶ

ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯ ಪ್ರಸಿದ್ಧ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಗಳು ಮತ್ತು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...