ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

Date:

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.

- Advertisement -

ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಫೌಜಿಯಾ ವಿರುದ್ಧ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದರೂ ರವಿಕುಮಾರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ಕ್ರಮ ಕೈಗೊಂಡು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.

ಇದನ್ನೂ ಓದಿ: ಎಚ್-1ಬಿ ವೀಸಾ ಶುಲ್ಕ 1 ಲಕ್ಷ ಡಾಲರ್‌ಗೆ ಏರಿಕೆ ಪ್ರಸ್ತಾವನೆ: ಅಮೆರಿಕ ತೆರಳುವ ಭಾರತೀಯರಿಗೆ ಬಿಗ್ ಶಾಕ್

ಇದೇ ವೇಳೆ, ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಅಧೀನ ನ್ಯಾಯಾಲಯದ ಸಮನ್ಸ್‌ಗೂ ಗೈರಾದ ಹಿನ್ನೆಲೆಯಲ್ಲಿ ಎಸಿಜೆಎಂ ನ್ಯಾಯಾಲಯದಿಂದ ಇದೀಗ ಜಾಮೀನು ರಹಿತ ಬಂಧನ ವಾರಂಟ್ ಹೊರಬಿದ್ದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...