ದೇವನಹಳ್ಳಿ: ಕೈಗಾರಿಕಾ ಉದ್ದೇಶದ ಭೂಸ್ವಾಧೀನ, ಎಕರೆಗೆ ಗರಿಷ್ಠ 2.70 ಕೋಟಿ ಪರಿಹಾರ ನಿಗದಿ

Date:

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡುತ್ತಿರುವ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ ₹2.70 ಕೋಟಿ ಪರಿಹಾರ ನೀಡಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಭೂದರ ನಿರ್ಧಾರಣಾ ಸಲಹಾ ಸಮಿತಿ ನಿರ್ಧರಿಸಿದೆ.

- Advertisement -

ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್. ರಘುನಂದನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಗರದ ಅರವಿಂದ ಭವನದಲ್ಲಿ ನಡೆದ ಅಧಿಕಾರಿಗಳು ಹಾಗೂ ಭೂಮಾಲೀಕರ ಜಂಟಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ನಿಗದಿಯಾಗಿರುವ ಈ ಪರಿಹಾರ ಮೊತ್ತದ ತೀರ್ಮಾನವನ್ನು ಅಂತಿಮ ಅನುಮೋದನೆಗಾಗಿ ಕೆಐಎಡಿಬಿ ಆಡಳಿತ ಮಂಡಳಿಗೆ ಕಳುಹಿಸಿಕೊಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನು ಓದಿದ್ದೀರಾ? ಟಿಎಂಸಿ ಒಡಕು, ವರ್ತಮಾನ ಮತ್ತು ಭವಿಷ್ಯ: ಪಕ್ಷದ ಒಳಮರ್ಮ ಬಿಚ್ಚಿಟ್ಟ ಮಹುವಾ ಮೊಯಿತ್ರಾ

ಭೂಮಿ ಕಳೆದುಕೊಳ್ಳುವ ರೈತರಿಗೆ ಪರ್ಯಾಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಪರಿಹಾರವನ್ನು ನಗದು (ಹಣದ) ರೂಪದಲ್ಲಿ ಪಡೆಯಲು ಇಚ್ಛಿಸದ ರೈತರು, ತಾವು ಬಿಟ್ಟುಕೊಡುವ ಪ್ರತಿ ಎಕರೆ ಕೃಷಿ ಜಮೀನಿಗೆ ಪ್ರತಿಯಾಗಿ, ಅಭಿವೃದ್ಧಿಪಡಿಸಿದ ಕೈಗಾರಿಕಾ ಬಡಾವಣೆಯಲ್ಲಿ 10,781 ಚದರ ಅಡಿ ವಿಸ್ತೀರ್ಣದ ನಿವೇಶನವನ್ನು ಪಡೆದುಕೊಳ್ಳುವ ಆಯ್ಕೆಯನ್ನು ಒದಗಿಸಲಾಗಿದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ರಘುನಂದನ್ ತಿಳಿಸಿದ್ದಾರೆ.

ಈ ಜಮೀನುಗಳನ್ನು ರೈತರು ತಾವಾಗಿಯೇ ಮುಂದೆ ಬಂದು ನೀಡುತ್ತಿದ್ದು, ಈ ಸಂಬಂಧ ಕೆಐಎಡಿಬಿ ಕಾಯ್ದೆಯನ್ವಯ ಇದೇ ತಿಂಗಳ 16ರಂದು ಅಂತಿಮ ಅಧಿಸೂಚನೆ ಹೊರಡಿಸಿ, ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರಿಗೆ ಅತ್ಯಂತ ನ್ಯಾಯಯುತವಾದ ಪರಿಹಾರವನ್ನು ಒದಗಿಸಬೇಕು ಎಂಬುದು ಸರ್ಕಾರದ ಮುಖ್ಯ ಆಶಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಭೆಯಲ್ಲಿ ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಸೂರಜ್ ಸೇರಿದಂತೆ ಮಂಡಳಿಯ ಇತರ ಹಿರಿಯ ಅಧಿಕಾರಿಗಳು ಹಾಗೂ ಜಮೀನು ನೀಡಲು ಒಪ್ಪಿರುವ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...