ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ವಿಶ್ವಾಸ

Date:

ಕೇಂದ್ರ ಬಜೆಟ್‌ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ. ಮೇಟಿಯವರು ತಮ್ಮತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬಂದಿವೆ ಎಂದರು.

ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ

ಬಿಜೆಪಿಯವರು ಬಡವರ ಯೋಜನೆಗಳಾದ ಗ್ಯಾರಂಟಿಗಳನ್ನು ವಿರೋಧಿಸುತ್ತಾರೆ. ಒಟ್ಟು ಗ್ಯಾರಂಟಿ ಯೋಜನೆಗೆ ಸುಮಾರು 1,31,000 ಕೋಟಿ ರೂ.ಗಳನ್ನು ನಾವು ವ್ಯಯ ಮಾಡಿ ಜನ ಸಾಮಾನ್ಯರ ಬದುಕಿಗೆ ಅರ್ಪಿಸಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರ ಒಂದರಲ್ಲಿ 535 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಲ್ಲಿ ನಂಬಿಕೆಯಿರಿಸಿ, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ಸಮಾಜದ ಕಟ್ಟಕಡೆಯ ಕಷ್ಟಗಳಿಗೆ ಸ್ಪಂದಿಸುವುದು ಮುಖ್ಯ ಎಂದರು.

ಗ್ಯಾರಂಟಿಗಳ ಮೂಲಕ ಸಮಾಜದ ವಿವಿಧ ಜಾತಿಧರ್ಮ ಭಾಷೆಗಳ ಬಡವರಿಗೆ, ಮಧ್ಯವರ್ತಿಗಳ ಹಾವಳಿಯಿಲ್ಲದೇ, ನೇರವಾಗಿ ಅವರ ಖಾತೆಗೆ ಆರ್ಥಿಕ ಲಾಭ ನೀಡಲಾಗುತ್ತಿದೆ ಎಂದರು.

ಬಿಜೆಪಿ ತನ್ನ ಅವಧಿಯಲ್ಲಿ ಹೆಚ್ಚು ಸಾಲ ಮಾಡಿದೆ

ಬಿಜೆಪಿಯವರು ಗ್ಯಾರಂಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತದೆ, ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸುತ್ತಾರೆ. ಆದರೆ ಜನರ ಖಾತೆಗೆ ನೇರವಾಗಿ ಹಣ ತಲುಪುದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಅಂದರೆ 2023ರ ಮಾರ್ಚ್‌ವರೆಗೆ 5,30,000 ಕೋಟಿಗೂ ಹೆಚ್ಚು ಸಾಲ ಮಾಡಿದ್ದರೆ, ನಮ್ಮ ಕಾಂಗ್ರೆಸ್ ಸರ್ಕಾರ, ಕಳೆದ ನಾಲ್ಕು ವರ್ಷದಲ್ಲಿ 2,56,000 ಕೋಟಿ ರೂ. ಸಾಲ ಮಾಡಿದೆ. ಅಂತೆಯೇ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದಾಗ ದೇಶದ ಮೇಲೆ 53.11 ಲಕ್ಷ ಕೋಟಿ ಸಾಲವಿತ್ತು. ಈಗ 218 ಲಕ್ಷ ಕೋಟಿ ಸಾಲವಿದೆ, ಅಂದರೆ ಪ್ರಧಾನಿ ಮೋದಿಯವರ 12 ವರ್ಷದ ಅಧಿಕಾರದ ಅವಧಿಯಲ್ಲಿ 165 ಲಕ್ಷ ಕೋಟಿಯಷ್ಟು ಸಾಲ ಮಾಡಿದ್ದಾರೆ. ಈ ಸಂಖ್ಯೆಯು ಬಿಜೆಪಿ ಸರ್ಕಾರ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಹೆಚ್ಚು ಸಾಲ ಮಾಡಿದೆ ಎಂಬುದನ್ನು ಸೂಚಿಸುತ್ತದೆ ಎಂದರು.

ಕೇಂದ್ರ ಬಜೆಟ್‌ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಅಧಿವೇಶನದಲ್ಲಿ ಬಜೆಟ್‌ನ ಬಗ್ಗೆ ವಿಸ್ತೃತ ಚರ್ಚೆಗಳಾಗಿದ್ದು, ಈಗಾಗಲೇ ಸುದೀರ್ಘ ಉತ್ತರವನ್ನೂ ನೀಡಲಾಗಿದೆ. ದೇಶದ ಜಿಡಿಪಿಯು 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ರಾಜ್ಯದ ಬಜೆಟ್‌ನ ಗಾತ್ರ ಈ ಬಾರಿ ಕಳೆದ ವರ್ಷಕ್ಕಿಂತ 9.4 ರಷ್ಟು ಹೆಚ್ಚಿದೆ. ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ. ರಾಜ್ಯ ಜಿಎಸ್‌ಟಿ ಸಂಗ್ರಹಣೆಯಲ್ಲಿ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ, ಬಂಡವಾಳ ಹೂಡಿಕೆಯಲ್ಲಿಯೂ ರಾಜ್ಯ 2 ನೇ ಸ್ಥಾನದಲ್ಲಿದೆ. ಆದಾಗ್ಯೂ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಇಂದಿನಿಂದ IPL ಹಬ್ಬ ಶುರು; ತವರು ಮೈದಾನದಲ್ಲಿ ಕಪ್ ಉಳಿಸಿಕೊಳ್ಳಲು ಸಮರಕ್ಕಿಳಿಯಲಿದೆ RCB

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ

ಬಿಜೆಪಿಯವರ ಪ್ರಣಾಳಿಕೆಯಲ್ಲಿ ಸರ್ಕಾರದ ಬೆಲೆಏರಿಕೆಯನ್ನು ಟೀಕಿಸಲಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲ್ ಪಿ ಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ ಸುಮಾರು 1ಸಾವಿರವಾಗಿದೆ. ಅಂತೆಯೇ ಪೆಟ್ರೋಲ್, ಡೀಸೆಲ್ ನ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೆಲೆ ಏರಿಕೆಯನ್ನು ಹೋಲಿಸಿದರೆ, ರಾಜ್ಯದಲ್ಲಿ ಗಣನೀಯವಾಗಿ ಬೆಲೆಗಳು ಕಡಿಮಿಯಿದೆ. ಆದ್ದರಿಂದ ಕರ್ನಾಟಕದ ಹಣಕಾಸಿನ ಸ್ಥಿತಿ ಸುಭದ್ರವಾಗಿದ್ದು, ಬಿಜೆಪಿಯವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.

ಪ್ರಧಾನಿ ಮೋದಿಯವರ ಅವಧಿಯಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿದೆ

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಡಾಲರ್ ಬೆಲೆ ಹೆಚ್ಚುತ್ತಿದ್ದು, ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಅವರ ಅಚ್ಛೇ ದಿನಗಳು ಬರಲೇ ಇಲ್ಲ. ರೈತರ ಆದಾಯ ದುಪ್ಪಟ್ಟು, 2 ಕೋಟಿ ಉದ್ಯೋಗ, 15 ಲಕ್ಷ ಖಾತೆಗೆ ಹಣ ಎಂದಿದ್ದರೂ, ಒಂದು ಭರವಸೆಯನ್ನು ಈಡೇರಿಸಲಿಲ್ಲ ಎಂದರು.

ಬಿಜೆಪಿಯ ಅಪಪ್ರಚಾರದ ನಡುವೆಯೂ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು

ಬಿಜೆಪಿಯವರು ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ, ದಾವಣಗೆರೆ, ಬಾಗಲಕೋಟೆಗೆ ಯಾವ ಕೊಡುಗೆಯನ್ನೂ ನೀಡಿಲ್ಲ. ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನವನ್ನು ಜಿಲ್ಲೆಗಳಿಗೆ ನೀಡಲಿದೆ. ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತವನ್ನು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು ಎಂದರು.

ಮತಪಟ್ಟಿಗಳನ್ನು ವ್ಯತ್ಯಾಸಗೊಳಿಸುವ ಅಧಿಕಾರ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೇಂದ್ರ ಚುನಾವಣಾ ಆಯೋಗಕ್ಕೆ ಸೇರಿದೆ. ಇಂತಹ ಕೃತ್ಯಗಳಲ್ಲಿ ಕಾಂಗ್ರೆಸ್ ಎಂದಿಗೂ ಒಳಗೊಂಡಿಲ್ಲ. ಹಿಂದೆ ಎಂದಿಗೂ ಇರದಿದ್ದ ವೋಟ್ ಚೋರಿಯ ವಿಷಯ, ಪ್ರಧಾನಿ ಮೋದಿಯವರ ಅವಧಿಯಲ್ಲಿ ಕೇಳಿಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿದೆ. ಜನರು ಬೆಂಬಲಿಸುವ ವಿಶ್ವಾಸವೂ ಇದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಲ್ಲಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುವ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಮತ್ತು ದೇವೇಗೌಡರ ಕುಟುಂಬಗಳನ್ನು ಉಲ್ಲೇಖಿಸಿ ಜೆಡಿಎಸ್ ಹಾಗೂ ಬಿಜೆಪಿಯವರು ಕುಟುಂಬ ರಾಜಕಾರಣದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲಿ ಸಕ್ರಿಯವಾಗಿರುವುದನ್ನು ಕಾಣಬಹುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...