ಧರ್ಮಸ್ಥಳ | 74 ಅಸಹಜ ಸಾವು: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

Date:

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.

- Advertisement -

ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, “ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು” ಎಂದು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅವರ ಅರ್ಜಿಯನ್ನು ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ನ್ಯಾಯಾಲಯದಲ್ಲಿ ಕುಸುಮಾವತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್, “ಧರ್ಮಸ್ಥಳದ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವುದಾಗಿ ವರದಿಯಾಗಿದೆ. ಈ ಪ್ರಕರಣಗಳ ತನಿಖೆ ಮಾಡಲೆಂದೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಆದರೆ, ಎಸ್ಐಟಿ ಕೇವಲ ಒಂದು ಎಫ್ಐಆರ್ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಅವರ ವಾದಕ್ಕೆ ಪ್ರತಿವಾದ ಮಂಡಿಸಿದ ಸರ್ಕಾರದ ಪರ ವಕೀಲರು, “ಸರ್ಕಾರಕ್ಕೆ ಇನ್ನೂ ಪ್ರಕರಣದ ದಾಖಲೆಗಳನ್ನು ಸಲ್ಲಿಸಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ?” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಪೀಠವು, “ಪ್ರಕರಣ ಇರುವುದು 74 ಅಸಹಜ ಸಾವುಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ ಎಂಬುದರ ಕುರಿತು. ಸರ್ಕಾರವು ನ್ಯಾಯಾಲಯದಲ್ಲಿ ಲಭ್ಯವಿರುವ ದಾಖಲೆಯನ್ನೇ ಪಡೆದುಕೊಂಡು ಅಭಿಪ್ರಾಯ ಸಲ್ಲಿಸಬೇಕು” ಎಂದು ಸೂಚಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಫೆಬ್ರವರಿ 03ಕ್ಕೆ ಮಂದೂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...