ಧರ್ಮಸ್ಥಳ ಪ್ರಕರಣ | ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ: ಪ್ರಿಯಾಂಕ್‌ ಖರ್ಗೆ ಲೇವಡಿ

Date:

ಚಿವುಟುವುದೂ ಬಿಜೆಪಿ, ತೊಟ್ಟಿಲು ತೂಗುವುದೂ ಬಿಜೆಪಿ. ಧರ್ಮಸ್ಥಳ ಪ್ರಕರಣದಲ್ಲಿನ ಬಿಜೆಪಿಯ ದ್ವಿಪಾತ್ರಾಭಿನಯಕ್ಕೆ ಆಸ್ಕರ್ ಕೊಟ್ಟರೂ ಕಡಿಮೆಯೇ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಲೇವಡಿ ಮಾಡಿದ್ಗದಾರೆ.

- Advertisement -

ಧರ್ಮಸ್ಥಳ ಪ್ರಕರ ವಿಚಾರವಾಗಿ ಬಿಜೆಪಿ ನಡೆಯನ್ನು ಟೀಕಿಸಿ ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯ ಎಂಬ ಎರಡು ತಲೆಯ ಹಾವು ಎರಡು ಕಡೆಯೂ ಹೆಡೆ ಆಡಿಸುತ್ತಿದೆ. ಬಿಜೆಪಿ ಆರೋಪಿಸುತ್ತಿರುವ ವ್ಯಕ್ತಿಗಳೂ ಬಿಜೆಪಿಯವರೇ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗಿರೀಶ್ ಮಟ್ಟಣ್ಣನವರ್ ಬಿಜೆಪಿಯ ಸಕ್ರಿಯ ಕಾರ್ಯಕರ್ತ, ಯುವಮೋರ್ಚಾದ ಅಧ್ಯಕ್ಷರಾಗಿದ್ದವರು. 2013ರಲ್ಲಿ ಗುರ್ಮಿಟ್ಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು. ಹಾಗೆಯೇ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ಪಕ್ಷದಲ್ಲೇ ಇದ್ದವರು, ಸಂಘಪರಿವಾರದ ನಾಯಕರು, ಸದಾ ಸಾವರ್ಕರ್, ಗೋಲ್ವಾಲ್ಕರ್ ಫೋಟೋ ಇಟ್ಟುಕೊಂಡಿರುವವರು, ಕೇಸರಿ ಶಾಲು ಹಾಕಿಕೊಂಡಿರುವವರು. ಸಾವರ್ಕರ್ ಅನುಯಾಯಿಯ ಬಗ್ಗೆಯೇ ಬಿಜೆಪಿಗೆ ಅಸಹನೆ ಹೊಂದಿರುವುದು ಪರಮಾಶ್ಚರ್ಯ” ಎಂದು ಹೇಳಿದ್ದಾರೆ.

“ಇವರೆಲ್ಲಾ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಬಣದವರಲ್ಲವೇ? ಅವರ ಅಣತಿಯಂತೆಯೇ ಇವರ ಹೋರಾಟ ನಡೆಯುತ್ತಿರುವುದಲ್ಲವೇ? ಬಿಜೆಪಿ ನಾಯಕರು ಉತ್ತರಿಸಬೇಕು. ಬಿಜೆಪಿಯ “ಧರ್ಮಸ್ಥಳ ಚಲೋ” ವೇದಿಕೆಯಲ್ಲಿ ಕರಾವಳಿಯ ಭಾಗದ ನಾಯಕರು ಮಾತನಾಡದೆ ವೇದಿಕೆ ಬಿಟ್ಟು ಹೋಗಿದ್ದೇಕೆ? ಕಲ್ಲಡ್ಕ ಪ್ರಭಾಕರ್ ಭಟ್ ಕಾಣಿಸಿಕೊಂಡಿಲ್ಲ ಏಕೆ? ಇದುವರೆಗೂ ಪ್ರಭಾಕರ್ ಭಟ್ ಧರ್ಮಸ್ಥಳದ ಪರವಾಗಿ ಒಂದೇ ಒಂದು ಹೇಳಿಕೆ ನೀಡದಿರುವುದೇಕೆ? ಕಲ್ಲಡ್ಕ ಭಟ್ಟರಿಗೆ “ಧರ್ಮಸ್ಥಳ” ಬೇಡವಾಗಿದೆಯೇ? ಧರ್ಮಸ್ಥಳ ಇಂದು ಇಬ್ಬರು ಸಂಘಪರಿವಾರದ ಮುಖಂಡರ ಪ್ರತಿಷ್ಠೆಯ RSSvsRSS ಕಾಳಗದ ಕಣವಾಗಿದೆ, ಹೀಗಿರುವಾಗ ಬಿಜೆಪಿಯ ಹೋರಾಟ, ಹಾರಾಟ, ಚೀರಾಟ ಯಾರ ವಿರುದ್ಧ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...