ಧರ್ಮಸ್ಥಳ ಪ್ರಕರಣ | ಬುರುಡೆ ತೆಗೆದಿದ್ದ ಜಾಗದಲ್ಲಿ ಶೋಧ ಕೆಲಸ ಆರಂಭ; ಕುತೂಹಲ ಹುಟ್ಟಿಸಿದ 2ನೇ ದಿನದ ಅಗೆತ

Date:

ಧರ್ಮಸ್ಥಳದಲ್ಲಿ ವ್ಯಕ್ತಿಯೊಬ್ಬರು ತಾನು ಹೂತಿದ್ದ ನೂರಾರು ಕಳೇಬರಗಳನ್ನು ತೆಗೆಯುತ್ತೇನೆಂದು ಹೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ ಹಾಗೂ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಎರಡನೇ ದಿನ ಅಗೆತ ಕಾರ್ಯ ಮುಂದುವರೆದಿದೆ. ಎಸ್‌ಐಟಿ ಅಧಿಕಾರಿ ಅನುಚೇತ್‌ ಸೇರಿದಂತೆ ಹಲವಾರು ಅಧಿಕಾರಿಗಳು ಸ್ಥಳದಲ್ಲಿ ನಿಂತು ಅಗೆತ ಕಾರ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಧರ್ಮಸ್ಥಳದ ಅಸಹಜ ಸಾವುಗಳಿಗೆ ಸಂಬಂಧಿಸಿದ ದೇಹಗಳನ್ನು ತಾನೇ 15 ವರ್ಷಗಳ ಹಿಂದೆ ಮಣ್ಣುಮಾಡಿದ್ದಾಗಿ ಹೇಳಿಕೊಂಡ ʼವ್ಯಕ್ತಿಯೊಬ್ಬರುʼ ತೋರಿಸಿದ ಜಾಗದಲ್ಲಿ ನಿನ್ನೆಯಿಂದ ಅಗೆತ ಶುರುವಾಗಿದೆ. ನಿನ್ನೆ ಯಾವುದೇ ದೇಹದ ಮೂಳೆ ತಲೆಬುರುಡೆಗಳು ಸಿಕ್ಕಿರಲಿಲ್ಲ. ಈ ವರೆಗೆ ತಾನು ದೇಹಗಳನ್ನು ಹೂತಿರುವ 20ಕ್ಕೂ ಹೆಚ್ಚು ಜಾಗಗಳನ್ನು ವ್ಯಕ್ತಿಯು ಎಸ್‌ಐಟಿ ತಂಡಕ್ಕೆ ತೋರಿಸಿದ್ದು ಅವುಗಳಿಗೆ ನಂಬರ್‌ ನೀಡಿ ಗುರುತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಎರಡನೇ ದಿನಾದ ಇಂದು ಅಗೆಯುತ್ತಿರುವ ಜಾಗದಿಂದಲೇ ಆ ವ್ಯಕ್ತಿಯು ತಲೆಬುರುಡೆಯೊಂದನ್ನು ಎತ್ತಿಕೊಂಡು ಹೋಗಿ ಪೊಲೀಸರ ಎದುರು ಹಾಜರುಪಡಿಸಿದ್ಧಾರೆ ಎನ್ನಲಾಗಿದೆ. ಅಲ್ಲದೆ ಅದೇ ಜಾಗದಲ್ಲಿ ಇನ್ನೂ ಐದಾರು ಹೆಣ್ಣುಮಕ್ಕಳ ದೇಹಗಳನ್ನು ಹೂಳಲಾಗಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಕಾರಣದಿಂದ ಇಂದು ಬೆಳಿಗ್ಗೆ 8 ಗಂಟೆಯಿಂದಲೇ ನಡೆಯುತ್ತಿರುವ ಅಗೆತ ಬಹಳ ಕುತೂಹಲ ಹುಟ್ಟಿಸಿದೆ.

ನಿನ್ನೆ ಇಡೀ ದಿನ ಒಂದು ಜಾಗದಲ್ಲಿ ಅಗೆತ ಮಾಡಲಾಗಿತ್ತು. ಮಧ್ಯಾಹ್ನದ ನಂತರ ಜೆಸಿಬಿ ಯಂತ್ರಗಳನ್ನು ಸಹ ತರಿಸಿ ಅಗೆಸಿಲಾಗಿತ್ತು. ಆದರೆ ಯಾವುದೇ ಕಳೇಬರದ ಅವಶೇಷಗಳು ಸಿಕ್ಕಿರಲಿಲ್ಲ. ʼವ್ಯಕ್ತಿʼಯು ಗುರುತು ಮಾಡಿರುವ ಎಲ್ಲ ಕಡೆಗಳಲ್ಲಿ ಎಸ್‌ಐಟಿ ಅಗೆತವನ್ನು ಅಗೆತವನ್ನು ನಡೆಸಲಿದ್ದು ಇಡೀ ರಾಜ್ಯವೇ ಇತ್ತ ಕುತೂಹಲದಿಂದ ಏನು ನಡೆಯುತ್ತದೆ ಎಂದು ಇದಿರು ನೋಡುತ್ತಿದೆ. ಇನ್ನು ಅಗೆತ ನಡೆಯುತ್ತಿರುವ ಜಾಗದ ಸುತ್ತಮುತ್ತ ಸ್ಥಳೀಯರು, ಹೊರ ಊರುಗಳ ಜನರು ಸಾವಿರಾರು ಸಂಖ್ಯೆಯಲ್ಲಿ ನೆರೆದು ದೂರದಿಂದಲೇ ವೀಕ್ಷಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...