ಧರ್ಮಸ್ಥಳ | 74 ಅಸಹಜ ಸಾವು ಪ್ರಕರಣದ ಸಂಪೂರ್ಣ ತನಿಖಾ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

Date:

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. ಈ ಹಿಂದೆ ಜನವರಿಯಲ್ಲಿ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

- Advertisement -

ಧರ್ಮಸ್ಥಳದಲ್ಲಿ ನಡೆದಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಆಗ್ರಹಿಸಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಧರ್ಮಸ್ಥಳ 74 ಅಸಹಜ ಸಾವು | ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್: ಮತ್ತೆ ಮೂಡಿದ ಭರವಸೆಯ ಕಿರಣ

ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪೀಠವು ನಡೆಸಿದ್ದು, ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದಾರೆ. ಬಾಲನ್ ವಾದ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿಗಳು “ಎಲ್ಲಾ 74 ಪ್ರಕರಣಗಳ ತನಿಖೆ ಏನೇನಾಗಿದೆ ಎಂಬ ಬಗ್ಗೆ ಸಂಪೂರ್ಣ ವರದಿ ಸಲ್ಲಿಸಿ” ಎಂದು ಸರ್ಕಾರಕ್ಕೆ ಆದೇಶಿಸಿದೆ.

“74 ಅಸಹಜ ಸಾವು ಪ್ರಕರಣಗಳಲ್ಲಿ ಯುಡಿಆರ್ ದಾಖಲು ಮಾಡುವಾಗ ಸರಿಯಾಗಿ ನಿಯಮ ಪಾಲಿಸಿಲ್ಲ. ಹೆಣಗಳನ್ನು ಸುಟ್ಟು ಹಾಕಲಾಗಿದೆ‌. ಮರಣೋತ್ತರ ಪರೀಕ್ಷೆಯನ್ನೂ ನಡೆಸಿಲ್ಲ. ಶರಾವತಿ ಲಾಡ್ಜ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿಯೂ ಅಸಹಜ ಸಾವು ವರದಿ ದಾಖಲಿಸಿ ಹೆಣವನ್ನು ಸುಟ್ಟು ಹಾಕಿದ್ದಾರೆ. ಪೊಲೀಸರ ಮನವಿ ಮೇರೆಗೆ ಗ್ರಾಮ ಪಂಚಾಯತ್ ಎಲ್ಲಾ ಅಸಹಜವಾಗಿ ಸಾವನ್ನಪ್ಪಿದವರ ಶವಗಳನ್ನು ಸುಟ್ಟು ಹಾಕಿದೆ. ಆ ಬಗ್ಗೆ ಮಾಹಿತಿ ಹಕ್ಕಿನಲ್ಲಿ ಪಡೆದ ದಾಖಲೆ ಇದೆ” ಎಂದು ಬಾಲನ್ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ.

“ಕೊಲೆ ಪ್ರಕರಣ ದಾಖಲಿಸದೆಯೇ ಯುಡಿಆರ್ ದಾಖಲಿಸಿದ್ದಾರೆ. ಶವದ ವಿಡಿಯೋ ಮಾಡಿಲ್ಲ, ಛಾಯಾಚಿತ್ರವೂ ತೆಗೆದಿಲ್ಲ. ಸಂಬಂಧಿಕರ ಪತ್ತೆಗೆ ಪತ್ರಿಕಾ ಪ್ರಕಟಣೆಯನ್ನು ನೀಡಿಲ್ಲ. ಶರಾವತಿ ಲಾಡ್ಜ್‌ನಲ್ಲಿ ನಡೆದ ಕೊಲೆ ಸಂಬಂಧ ಲಾಡ್ಜ್ ಮಾಲೀಕರನ್ನು ವಿಚಾರಣೆ ನಡೆಸಿಲ್ಲ. ಲಾಡ್ಜ್ ಮತ್ತು ನದಿ ಬದಿಯಲ್ಲಿ ಪದೇ ಪದೇ ಶವ ಪತ್ತೆಯಾದರೂ ಲಾಡ್ಜ್ ಮಾಲೀಕರು ಮತ್ತು ಶವ ಪತ್ತೆಯಾದ ಜಮೀನು ಮಾಲೀಕರಿಗೆ ಒಂದೇ ಒಂದು ನೋಟಿಸ್ ನೀಡಿಲ್ಲ” ಎಂದೂ ಹಿರಿಯ ವಕೀಲ ಬಾಲನ್ ವಾದ ಮಂಡಿಸಿದ್ದಾರೆ.

ಎಲ್ಲಾ ವಾದ ಆಲಿಸಿದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ವಿಸ್ತೃತ ಆದೇಶ ಹೊರಡಿಸಿದ್ದಾರೆ. “ಶವ ಪತ್ತೆಯಾದಾಗ ಮರಣೋತ್ತರ ಪರೀಕ್ಷೆ ಮಾಡಿದ್ದೀರಾ? ನಾಪತ್ತೆಯಾದವರ ಪತ್ತೆಗೆ ಏನು ಕ್ರಮ ತೆಗೆದುಕೊಂಡಿದ್ದೀರಿ? ಈ ಎಲ್ಲಾ ದಾಖಲೆಗಳನ್ನು ಸಲ್ಲಿಸಿ” ಎಂದು ಸರ್ಕಾರಕ್ಕೆ ಆದೇಶಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ...