ಧರ್ಮಸ್ಥಳ ಪ್ರಕರಣ | 13 ಉತ್ಖನನ ಮಾಡಿದ ಜಾಗದಲ್ಲಿ ಈವರೆಗೆ ಏನೂ ಸಿಕ್ಕಿಲ್ಲ: ಪ್ರಲ್ಹಾದ ಜೋಶಿ

Date:

ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, SIT ರಚಿಸಿದ್ದು ತಾವೇ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಧರ್ಮಸ್ಥಳದ 13 ಉತ್ಖನನ ಮಾಡಿದ ಜಾಗಗಳಲ್ಲಿ ಈವರೆಗೂ ಮಣ್ಣು ಅಗೆದಿದ್ದೊಂದೇ ಬಂತು. ಅನಾಮಿಕ ಆರೋಪಿಸಿದಂತೆ ಏನೊಂದೂ ಗುರುತರ ಸಾಕ್ಷಿ, ಶವಗಳ ಅವಶೇಷ ಸಿಗದಾಯಿತು. ಹೀಗಾಗಿ ಸಿಎಂ ಈಗ ತಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ‌ದಿನ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...