ಧರ್ಮಸ್ಥಳ ಪ್ರಕರಣ | ಅಕ್ಟೋಬರ್ 9ರಂದು ರಾಜ್ಯದ 60 ಕಡೆಗಳಲ್ಲಿ ಪ್ರತಿಭಟನೆ

Date:

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ನೂರಾರು ಜನರ ನಾಪತ್ತೆ ಮತ್ತು ಅಸಹಜನ ಸಾವು ಪ್ರಕರಣ ಮತ್ತು ಸೌರ್ಜನ್ಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಲು ಕರೆಕೊಟ್ಟಿದೆ. ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ನಡೆದಿದ್ದ ದಿನವಾದ ಅಕ್ಟೋಬರ್ 9ರಂದು ರಾಜ್ಯದ 60 ಕಡೆಗಳಲ್ಲಿ ‘ನ್ಯಾಯಕ್ಕಾಗಿ ಜನಾಗ್ರಹ’ ಪ್ರತಿಭಟನೆಗಳು ನಡೆಯಲಿವೆ ಎಂದು ವೇದಿಕೆ ತಿಳಿಸಿದೆ.

- Advertisement -

2012ರ ಅಕ್ಟೋಬರ್ 9ರಂದು ಸೌಜನ್ಯ ಮೇಲೆ ದುರುಳರು ಅತ್ಯಾಚಾರ ಎಸಗಿ, ಕೊಲೆಗೈದಿದ್ದರು. ಆಕೆಯ ಮೃತದೇಹವು ಧರ್ಮಸ್ಥಳದ ಪ್ರಾಕೃತಿಕ ಕೇಂದ್ರದ ಎದುರಿನ ತೊರೆಯಲ್ಲಿ ಪತ್ತೆಯಾಗಿತ್ತು. ಘಟನೆ ನಡೆದ 13 ವರ್ಷಗಳು ಕಳೆದಿವೆ. ಆದಾಗ್ಯೂ, ನೈಜ ಅಪರಾಧಿಯ ಬಂಧನವಾಗಿಲ್ಲ, ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ ಎಂದು ವೇದಿಕೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸೌಜನ್ಯ ಪ್ರಕರಣ ಮಾತ್ರವಲ್ಲದೆ, ಧರ್ಮಸ್ಥಳದಲ್ಲಿ ಅತ್ಯಾಚಾರ, ಕೊಲೆ, ಭೂಕಬಳಿಕೆ, ದಲಿತರ ಮೀಸಲು ಭೂಮಿ ಕಬಳಿಕೆ, ಮೈಕ್ರೋ ಫೈನಾನ್ಸ್ ಬಡ್ಡಿ ದಂಧೆ ಸೇರಿದಂತೆ ಹಲವಾರು ಕೃತ್ಯಗಳು ನಡೆದಿವೆ. ಈ ಎಲ್ಲ ಕೃತ್ಯಗಳನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಅಕ್ಟೋಬರ್ 9ರಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿದೆ ಎಂದು ವೇದಿಕೆ ವಿವರಿಸಿದೆ.

1980ರಿಂದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂಕಬಳಿಕೆಯ ವಿರುದ್ದ ಹೋರಾಟ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಒಂದೇ ದಿನದಲ್ಲಿ ಜನಾಗ್ರಹ ಸಭೆ, ಆಗ್ರಹ ಪತ್ರ ಸಲ್ಲಿಕೆ, ಸಮಾವೇಶ, ಪ್ರತಿಭಟನೆ, ಭಿತ್ತಿಪತ್ರ ಪ್ರದರ್ಶನಗಳು ನಡೆಯಲಿವೆ ಎಂದು ವೇದಿಕೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...