ಧರ್ಮಸ್ಥಳ ಪ್ರಕರಣ |ಎಸ್‌ಐಟಿ ವರದಿ ಬೆಳಗಾವಿ ಅಧಿವೇಶನದಲ್ಲಿ ಬಹಿರಂಗ: ಪರಮೇಶ್ವರ್

Date:

ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸರ್ಕಾರಕ್ಕೂ ವರದಿ ನೀಡಲಿದೆ. ಬೆಳಗಾವಿ ಅಧಿವೇಶನದಲ್ಲಿ ವರದಿಯ ಅಂಶಗಳನ್ನು ಬಹಿರಂಗಪಡಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಧರ್ಮಸ್ಥಳ ಪ್ರಕರಣದಲ್ಲಿ ಏನು ಷಡ್ಯಂತ್ರ ನಡೆದಿದೆ, ಯಾರೆಲ್ಲಾ ಕಾರಣ ಎಂಬುದು ಗೊತ್ತಾಗಲಿದೆ” ಎಂದು ಹೇಳಿದರು.

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ. ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದರೋ ಎಂಬುದರ ಬಗ್ಗೆ ಈವಾಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ‌ ಎಂದರು.

“ಬೆಂಗಳೂರಿನಲ್ಲಿ ಹಾಡುಹಗಲಲ್ಲೇ ಇಂತಹ ಘಟನೆ ನಡೆದಿಲ್ಲ. ಏಳು‌ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಣ ರಾಬರಿಯಾಗಿದೆ. ವಾಹನ ಸಂಖ್ಯೆ ಎಲ್ಲ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದಲ್ಲಿಯವರಾ ತನಿಖೆ ನಡೆಯುತ್ತಿದೆ” ಎಂದರು.

“ಪೊಲೀಸರು ಎಲ್ಲ ಮಾಹಿತಿ ಪಡೆದುಕೊಂಡಿದ್ದಾರೆ. ದರೋಡೆಕೋರರು ಕರ್ನಾಟಕದವರಾ, ಹೊರಗಿನವರಾ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದರೋಡೆಕೋರರು ಕಾರಿಗೆ ನಕಲಿ ನಂಬರ್ ಫಲಕ ಹಾಕಿಕೊಂಡಿದ್ದರು. ಅವರು ಹೊರಗೆ ದಾಟಿದ್ದಾರಾ? ಯಾವ ವಾಹನದಲ್ಲಿ ಹಣ ಸಾಗಿಸಿದ್ದಾರೆ? ವಾಹನವು ರಾಜ್ಯದ ಹೊರಗೆ ಹೋಗಿದೆಯೇ ಎಂದೂ ಹುಡುಕುತ್ತಿದ್ದಾರೆ” ಎಂದು ತಿಳಿಸಿದರು.

“ದರೋಡೆಕೋರರು ವಾಹನ ಬದಲಾಯಿಸಿದ್ದಾರೆ ಎಂಬುದು ಗೊತ್ತಾಗಿದೆ. ಖಂಡಿತಾ ಅವರನ್ನು ಹಿಡಿಯುತ್ತೇವೆ. ಘಟನೆ ವೇಳೆ ಯಾವೆಲ್ಲಾ ವಾಹನಗಳು ಓಡಾಡಿದ್ದವು? ರಾಜ್ಯದ ಹೊರಗೆ ಹೋಗಿರುವ ವಾಹನಗಳೆಷ್ಟು? ಎಲ್ಲದರ ಸಿಸಿಟಿವಿ ಕ್ಯಾಮೆರಾ ದೃಶ್ಯ ಪರಿಶೀಲಿಸುತ್ತಿದ್ದೇವೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...