ಧರ್ಮಸ್ಥಳ ಪ್ರಕರಣ | ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡರ ಮೇಲೆ SIT ದೌರ್ಜನ್ಯ ಮಾಡುವಂತಿಲ್ಲ: ಹೈಕೋರ್ಟ್‌

Date:

ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಸಜ್ಜುಗೊಳಿಸಿದ್ದಾರೆಂದು ಎಸ್‌ಐಪಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ ಜಯಂತ್ ಹಾಗೂ ವಿಠಲಗೌಡ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ‘ಬಿಗ್‌ ರಿಲೀಫ್‌’ ದೊರೆತಿದೆ. ಈ ನಾಲ್ವರ ಮೇಲೆ ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

- Advertisement -

ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ಅಂದೇ, ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಲುವಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬೆನ್ನಲ್ಲೇ, ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಮತ್ತೊಂದು ನೋಟಿಸ್‌ ಜಾರಿ ಮಾಡಿದೆ.

ಇದೆಲ್ಲದರ ನಡುವೆ, ತಿಮರೋಡಿ, ಗಿರೀಶ್, ಜಯಂತ್, ವಿಠಲಗೌಡ ಅವರ ಮೇಲೆ ದೌರ್ಜನ್ಯ ಮಾಡದಂತೆ ಹೈಕೋರ್ಟ್‌ ಆದೇಶಿಸಿದೆ.

ಇನ್ನು, ಇನ್ನು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ‘ಅಕ್ರಮವಾಗಿ ಮಾರಕಾಸ್ತ್ರ ಇಟ್ಟುಕೊಂಡಿದ್ದಾರೆ’ ಎಂಬ ಪ್ರಕರಣಕ್ಕೆ ಇತ್ತೀಚೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...