ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತುಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇದ್ದಲ್ಲಿ ದಾಖಲೆಯಲ್ಲಿ ಸಲ್ಲಿಸಲು ಧರ್ಮಸ್ಥಳದ ಗ್ರಾಮದ ಪುರಂದರ ಗೌಡ ಮತ್ತು ತುಕಾರಾಂ ಗೌಡಗೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
‘ನಾವು ತೋರಿಸುವ ಸ್ಥಳಗಳಲ್ಲಿ ಎಸ್‌ಐಟಿ ಅವರು ಅಗೆಯಬೇಕು’ ಎಂದು ಕೋರಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಬೇಕು ಎಂದು ಪುರಂದರ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು.
ಮೂಲ ದೂರುದಾರನಾಗಿದ್ದ ಸಿ ಎನ್ ಚಿನ್ನಯ್ಯನೇ ಆರೋಪಿಯಾಗಿರುವುದರಿಂದ ಆತನ ಬಳಿ ಇದ್ದ ಮಾಹಿತಿಗೆ ಹೊರತಾದ ಹೆಚ್ಚಿನ ಮಾಹಿತಿ ಇದ್ದರೆ ಮೆಮೊದ ಜೊತೆ ಪಾಂಡುರಂಗ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.
