ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆ ಪತ್ತೆ, ವ್ಯಾಪಕ ಶೋಧಕ್ಕೆ ಮುಂದಾದ ಎಸ್‌ಐಟಿ

Date:

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತೆ ವ್ಯಾಪಕ ಶೋಧ ಕಾರ್ಯಕ್ಕೆ ಮುಂದಾಗಿದೆ.

- Advertisement -

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿರುವುದರಿಂದ ಇಂದು (ಸೆ.17) ಮತ್ತೆ ಬಂಗ್ಲೆಗುಡ್ಡೆ ಸ್ಥಳ ಮಹಜರು ಮಾಡಲು ಎಸ್ಐಟಿ ತಂಡ ಆಗಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...
SIT 2

ಎಸ್ಐಟಿ ತಂಡದೊಂದಿಗೆ ಧರ್ಮಸ್ಥಳ ಗ್ರಾಮ ಪಂಚಾಯತಿ, soco ತಂಡ, ತಂಡದ ಎಸ್‌ಪಿಗಳಾದ ಜಿತೇಂದ್ರ ಕುಮಾರ್‌ ದಯಾಮ, ಸಿ.ಎ ಸೈಮನ್ ನೇತೃತ್ವದಲ್ಲಿ ಮೂಳೆಗಾಗಿ ಶೋಧ ಕಾರ್ಯಾಚರಣೆ ನಡೆಯಲಿದೆ. ಒಟ್ಟು 40 ಜನರಿಂದ ಕೂಡಿದ ತಂಡ ಇಂದು ಕಾರ್ಯ ನಿರ್ವಹಿಸಲಿದೆ.

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿಗೆ, ಇದುವರೆಗೆ 30ಕ್ಕೂ ಹೆಚ್ಚು ದೂರುಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ ಅರ್ಹ ದೂರುಗಳ ಬಗ್ಗೆ ಎಸ್‌ಐಟಿ ಸಮಗ್ರ ತನಿಖೆ ನಡೆಸಲಿದೆ.

ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು ಎನ್ನಲಾಗಿದೆ. ತಲೆಬುರುಡೆ ಇದ್ದ ಆ ಜಾಗವನ್ನು ತೋರಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಈಚೆಗೆ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಆ ಜಾಗವು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ವ್ಯಾಪ್ತಿಯಲ್ಲಿದೆ.

ಎಸ್‌ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಕೆಲ ಅಧಿಕಾರಿಗಳನ್ನು ಬೆಳ್ತಂಗಡಿ ಕಚೇರಿಗೆ ಸೋಮವಾರ ಕರೆಸಿಕೊಂಡು ಚರ್ಚಿಸಿದ್ದರು. ಸಾಕ್ಷಿ ದೂರುದಾರ ತಂದೊಪ್ಪಿಸಿರುವ ತಲೆಬುರುಡೆಯನ್ನು ಹೊರತೆಗೆದ ಕಾಡಿನಲ್ಲಿ ಮತ್ತಷ್ಟು ಶೋಧ ನಡೆಸುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಎಸ್‌ಐಟಿ ಸಮಾಲೋಚನೆ ನಡೆಸಿತ್ತು.

Dharmastala 1 1

ವಿಡಿಯೋದಲ್ಲಿ ವಿಠಲಗೌಡ ಹೇಳಿದ್ದೇನು?

“ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆಯಲ್ಲಿ ಅಲ್ಲೆ, 3 ಮನುಷ್ಯರ ಕಳೆಬರ ಹತ್ತು ಹತ್ತು ಫೀಟ್‌ನಲ್ಲೇ ಸಿಗುತ್ತದೆ. ಎರಡನೇ ಬಾರಿ ಸ್ಥಳ ಮಹಜರಿಗೆ ಹೋಗುವಾಗ ಕೆಳಗಡೆ ಹೆಣಗಳ ರಾಶಿ. ನಮಗೆ ಕಣ್ಣಿಗೆ ಕಾಣುವುದು ಐದು ಇದ್ದವು, ಇದರಲ್ಲಿ ಒಂದು ಮಗುವಿನ ಎಲುಬುಗಳು ಎಂಬುದು ಗೋಚರ ಆಗ್ತಿತ್ತು, ಪಕ್ಕದಲ್ಲೇ ವಾಮಾಚಾರಕ್ಕೆ ಬಳಸುವ ಸಣ್ಣಸಣ್ಣ ಕಲಶಗಳು ಐದಾರು ಇದ್ದವು, ಇದನ್ನು ನಾನೂ ನೋಡಿದ್ದೇನೆ, ಅಧಿಕಾರಿಗಳಿಗೂ ತೋರಿಸಿದ್ದೇನೆ. ಮತ್ತೆ ಹೆಣ ಮುಚ್ಚಿಹಾಕಲು ಗುಡ್ಡ ಜರಿದ ರೀತಿ, ಮಣ್ಣು ಎಳೆದು ಹಾಕಿದ ರೀತಿ ಕಾಣುತ್ತದೆ. ಐದಾರು ಫೀಟ್‌ ದೂರದಲ್ಲಿ ಬುರುಡೆಗಳ ರಾಶಿ ಇದೆ” ಎಂದು ವಿಠಲಗೌಡ ಹೇಳಿದ್ದರು.

ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಕರ್ನಾಟಕ ಹೈಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಧರ್ಮಸ್ಥಳ ಗ್ರಾಮದ ಪಾಂಗಾಳ ಮನೆಯ ನಿವಾಸಿ ಪಾಂಡುರಂಗ ಗೌಡ ಮತ್ತು ತುಕಾರಾಂ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಮಾಹಿತಿ ಒದಗಿಸಲು ನಿರ್ದೇಶಿದ್ದನ್ನು ಇಲ್ಲಿ ಗಮನಿಸಬಹುದು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2047ರ ವೇಳೆಗೆ ರಾಜ್ಯದ ನಗರ ಜನಸಂಖ್ಯೆ 70%ಗೆ ಏರಿಕೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕದ ನಗರ ಪ್ರದೇಶಗಳ ಜನಸಂಖ್ಯೆಯು ಪ್ರಸ್ತುತ 46% ಇದ್ದು, 2047ರ ವೇಳೆಗೆ...

ನಗರಗಳ ಬೆಳವಣಿಗೆಯೇ ಗ್ರಾಮೀಣಾಭಿವೃದ್ಧಿಗೆ ಶಕ್ತಿ: ಸಿಎಂ ಡಿ ಕೆ ಶಿವಕುಮಾರ್

“ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ...

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...