ಧರ್ಮಸ್ಥಳ | ಹಲ್ಲೆಗೆ ಒಳಗಾದ ಯೂಟ್ಯೂಬರ್‌ಗಳ ಭೇಟಿ ಮಾಡಿದ ಎಸ್‌ಡಿಪಿಐ ನಿಯೋಗ; ಕ್ರಮಕ್ಕೆ ಆಗ್ರಹ

Date:

ಧರ್ಮಸ್ಥಳದಲ್ಲಿ ಸೌಜನ್ಯ ಮನೆ ರಸ್ತೆಯ ಬಳಿ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಯುಟ್ಯೂಬರ್‌ಗಳನ್ನು ಭೇಟಿ ಮಾಡಿರುವ ಎಸ್‌ಡಿಪಿಐ ನಿಯೋಗ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಬೆನಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಮುಖಂಡರು ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, “ಇದೊಂದು ವ್ಯವಸ್ಥಿತವಾದ ಹಲ್ಲೆ. ಮಾಧ್ಯಮದವರು ಸುಳ್ಳನ್ನು ಮಾತ್ರವೇ ಪ್ರಸರಿಸುವ ಈ ಸಂದರ್ಭದಲ್ಲಿ ಕೆಲ ಯೂಟ್ಯೂಬರ್‌ಗಳು ಮುಂದೆ ಬಂದು ಸತ್ಯವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯೂಟ್ಯೂಬರ್‌ಗಳನ್ನು ತಡೆದು ಕ್ಯಾಮೆರಾಗಳನ್ನು ಪುಡಿಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಕಿಡಿಗೇಡಿಗಳ ವಿರುದ್ದ ಹಾಗೂ ಇದರ ಹಿಂದಿರುವ ಸೂತ್ರಧಾರಿಗಳ ಮೇಲೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸರಕಾರ ಯಾವುದೇ ರೀತಿಯಲ್ಲಿಯೂ ಬಲಾಢ್ಯರ ಪರವಾಗಿ ನಿಲ್ಲದೆ, ಹಸ್ತಕ್ಷೇಪ ಮಾಡದೆ ನ್ಯಾಯವನ್ನು ಎತ್ತಿ ಹಿಡಿಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನೂ ಓದಿರಿ: ಧರ್ಮಸ್ಥಳ | ಯೂಟ್ಯೂಬರ್ಸ್‌ ಮೇಲೆ ಹಲ್ಲೆ; ಬೆಂಗಳೂರಿನಲ್ಲಿ ಸಮಾನ ಮನಸ್ಕರಿಂದ ಖಂಡನೆ

ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ, ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಹಾಗೂ ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮೂನಿಶ್ ಅಲಿ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪೂಂಜಾಲ್ ಕಟ್ಟೆ, ಅಬೂಬಕ್ಕರ್ ಮದ್ದ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...