ಧರ್ಮಸ್ಥಳ | ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕ್ರಮಕ್ಕೆ ಎಸ್‌ಐಟಿಗೆ ಆಗ್ರಹ

Date:

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯ ಹಾದಿ ತಪ್ಪಿಸುವ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ, ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ದಿನೇಶ್‌ ಅವರು ಎಸ್‌ಐಟಿ ಗೆ ಇಂದು (ಆ. 4) ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ

- Advertisement -

ಅನಾಮಿಕ ವ್ಯಕ್ತಿಯೊಬ್ಬನ ದೂರಿನಂತೆ ಮಾನ್ಯ ನ್ಯಾಯಾಲಯದ ಆದೇಶದಂತೆ ಧರ್ಮಸ್ಥಳ ಠಾಣೆಯಲ್ಲಿ ಕ್ರಮ ಸಂಖ್ಯೆ 39/2025ರಂತೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಈ ಮಧ್ಯೆ ವ್ಯಕ್ತಿಯೊಬ್ಬ ತೋರಿಸಿದ ಜಾಗದಲ್ಲಿ ಹೆಣಗಳನ್ನು ಉತ್ಖನನ ಮಾಡುವ ಮಾಹಿತಿ ಇದೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಕೇಶವಗೌಡ ಮತ್ತು ಈಗಿನ ಉಪಾಧ್ಯಕ್ಷ ಪಿ ಶ್ರೀನಿವಾಸ ಮತ್ತು ಮಂಗಳೂರಿನ ಕೆ ಎಸ್‌ ಹೆಗ್ಡೆ ಆಸ್ಪತ್ರೆಯ ವೈದ್ಯರಾದ ಡಾ ಮಹಾಬಲ ಶೆಟ್ಟಿ ಅವರು ಈಗ ಅನಾಮಿಕ ತೋರಿಸಿದ ಜಾಗದಲ್ಲಿ ನಾವು ಈ ಹಿಂದೆ ಹಲವಾರು ಅಸ್ವಾಭಾವಿಕ ಶವಗಳನ್ನು ಹೂತಿದ್ದೇವೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೇ ಈಗ ಅನಾಮಿಕ ವ್ಯಕ್ತಿ ತೋರಿಸುತ್ತಿದ್ದಾನೆ ಅದೇ ಸ್ಥಳದಲ್ಲಿ ನಾವೂ ಕೂಡ ಶವಗಳನ್ನು ಹೂತಿದ್ದೇವೆ ಎಂದು ಹೇಳುತ್ತಿದ್ದಾರೆ. ಇದು ಇಡೀ ಪ್ರಕರಣ ತನಿಖೆಗೆ ತೊಂದರೆಯಾಗುತ್ತಿರುವುದು ಕಂಡು ಬರುತ್ತಿದೆ. ಅವರ ಬಳಿ ಯಾವುದೇ ದಾಖಲಾತಿ ಇದ್ದರೆ ಅದನ್ನು ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರುಪಡಿಸಲು ತಿಳಿಸಬೇಕು. ಅಲ್ಲದೆ ಇವರೆಲ್ಲರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಅವರು ಇನ್ನೂ ಬೇರೆ ಕಡೆ ಶವಗಳನ್ನು ಹೂತಿದ್ದರೆ ಮೊದಲು ಪಂಚಾಯತ್‌ ಮಾಜಿ ಅಧ್ಯಕ್ಷ ಕೇಶವ ಗೌಡ, ಉಪಾಧ್ಯಕ್ಷ ಪಿ ಶ್ರೀನಿವಾಸ ಹಾಗೂ ಡಾ ಮಹಾಬಲ ಶೆಟ್ಟಿಯವರು ಹೇಳುವ ಸ್ಥಳವನ್ನು ತೋರಿಸಿ ಆ ಸ್ಥಳವನ್ನು ಉತ್ಖನನ ಮಾಡಬೇಕಾಗಿ ತಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇನೆ. ಇಲ್ಲವಾದಲ್ಲಿ ಭೀಮ ಮೊದಲು ತೋರಿಸಿದಲ್ಲಿ, ನಾವೂ ಕೂಡ ಶವ ಹೂತಿದ್ದೇವೆ ಎಂದು ಹೇಳಿ ತನಿಖೆಯ ದಿಕ್ಕನ್ನು ತಪ್ಪಿಸುವ ಸಾಧ್ಯತೆ ಇದೆ. ಆದುದರಿಂದ ತಾವು ಈ ಕೂಡಲೇ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ತಮ್ಮಲ್ಲಿ ಕೋರಿಕೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ಪ್ರಕರಣ ಇಡೀ ದೇಶವೇ ಬೆಚ್ಚಿಬೀಳುವಂತಹ ಪ್ರಕರಣವಾಗಿದ್ದು ದೇಶದ ಜನತೆ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ನೀವು ನ್ಯಾಯ ಕೊಡಿಸುತ್ತೀರಿ ಎಂಬ ನಂಬಿಕೆ ಭರವಸೆ ದೇಶದ ಜನತೆಗೆ ಇದೆ.

ಎಸ್‌ಐಟಿಗೆ ಪತ್ರ
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...