ಧಾರವಾಡ | ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

Date:

ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ತ್ವರಿತ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಭಾರೀ ಪ್ರತಿಭಟನಾ ಮೆರವಣಿಗೆ ನಡೆಸಿದರು.

- Advertisement -

ನಗರದ ಶ್ರೀನಗರ ವೃತ್ತದಿಂದ ಆರಂಭವಾದ ಈ ಪ್ರತಿಭಟನೆ, ಸಪ್ತಾಪುರ ಹಾಗೂ ಜುಬ್ಲಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯತ್ತ ಸಾಗಿತು. ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಪ್ರತಿಭಟನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಪೊಲೀಸರು ಹರಸಾಹಸ ಪಟ್ಟರು. ಪ್ರತಿಭಟನಾ ಮೆರವಣಿಗೆ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಡಿಸಿಪಿ ರವೀಶ ಹಾಗೂ ಧಾರವಾಡ ಎಸಿಪಿ ಪ್ರಶಾಂತ್ ಭೇಟಿ ನೀಡಿ, ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಸರ್ಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬದಿಂದ ಯುವಜನರು ತೀವ್ರ ನಿರಾಸೆಗೊಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಉದ್ಯೋಗಾಕಾಂಕ್ಷಿಗಳ ಈ ಪ್ರತಿಭಟನೆಗೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸರ್ಕಾರ ತಕ್ಷಣವೇ ಯುವಜನರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...