ಧಾರವಾಡ | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ; ಪ್ರಲ್ಹಾದ್ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್

Date:

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಆಗಸ್ಟ್ 6ರಂದು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಬಿಎನ್‌ಎಸ್‌ ಸೆಕ್ಷನ್ 75(2) (ಲೈಂಗಿಕ ದೌರ್ಜನ್ಯ) ಮತ್ತು ಸೆಕ್ಷನ್ 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ತಾವು ಸಮಾಜ ಸೇವಕಿ ಎಂದು ಹೇಳಿಕೊಂಡಿರುವ ದೂರುದಾರ ಮಹಿಳೆ, ತಮ್ಮ ದೂರಿನಲ್ಲಿ ಜೋಶಿ ಸಹೋದರ ಗೋಪಾಲ ಜೋಶಿ ತಮಗೆ ದೀರ್ಘಕಾಲದಿಂದ ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಕಿರುಕುಳ ನೀಡುತ್ತಿದ್ದು, ತಮ್ಮ ಕುಟುಂಬಕ್ಕೂ ತೊಂದರೆ ಉಂಟುಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

“2022ರ ಮೇ 29ರಂದು ಧಾರವಾಡದ ಮಾಳಮಡ್ಡಿಯ ‘ಶ್ರೀ ಪೂರ್ಣ ಅಪಾರ್ಟ್‌ಮೆಂಟ್’ನಲ್ಲಿ ನನ್ನ ಮೇಲೆ ಆರೋಪಿ ಜೋಶಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದನ್ನು” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಆದಾಗ್ಯೂ, ತಮ್ಮ ಮೇಲಾದ ದೌರ್ಜನ್ಯದ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ದೂರು ದಾಖಲಿಸಲು ಕುಟುಂಬಸ್ಥರು ಸೂಚಿಸಿದ್ದು, ಅದರಂತೆ ತಡವಾಗಿ ದೂರು ದಾಖಲಿಸಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...