ಪರಿಶಿಷ್ಟರ ಮೇಲೆ ನಿಲ್ಲದ ಶೋಷಣೆ; ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳು ದಾಖಲು

Date:

ದಲಿತರ ಮೇಲಿನ ದೌರ್ಜನ್ಯ ತಡೆಗಾಗಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ಜಾಗೃತಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೂ, ಹಲವು ರೀತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ದೌರ್ಜನ್ಯ, ಶೋಷಣೆಗಳು ಮುಂದುವರಿದಿವೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 461 ದೌರ್ಜನ್ಯ ಪ್ರಕರಣಗಳಲ್ಲಿ ದೂರು (ಎಫ್‌ಐಆರ್‌) ದಾಖಲಾಗಿದೆ.

ಈ ಒಟ್ಟು ಪ್ರಕರಣಗಳಲ್ಲಿ 643 ಮಂದಿ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ಪೈಕಿ 10 ಕೊಲೆ ಮತ್ತು 9 ಅತ್ಯಾಚಾರದಂತಹ ಗಂಭೀರ ಪ್ರಕರಣಗಳೂ ಇವೆ. ಬೆಂಗಳೂರು ನಗರದಲ್ಲಿ 98, ಚಿಕ್ಕಮಗಳೂರು 66, ಧಾರವಾಡ 53, ತುಮಕೂರು 43 ಪ್ರಕರಣಗಳು ನಡೆದರೆ, ವಿಜಯನಗರ, ಹಾವೇರಿ, ಕಲಬುರಗಿ, ಕೋಲಾರ, ಕೊಡಗು, ಚಿತ್ರದುರ್ಗ, ಯಾದಗಿರಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮೀಣ, ಚಾಮರಾಜನಗರ ಹಾಗೂ ಬಳ್ಳಾರಿಯಲ್ಲಿ ಯಾವ ಪ್ರಕರಣವೂ ದಾಖಲಾಗಿಲ್ಲ. ಸಂತ್ರಸ್ತರಿಗೆ ಒಟ್ಟು 5.16 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ವರದಿಯಾಗಿದೆ.

“ಅತ್ಯಂತ ಪ್ರಬಲವಾದ ಕಾಯ್ದೆಯನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ತಮ್ಮ ಹಕ್ಕುಗಳನ್ನು ಚಲಾಯಿಸಲು ಈ ಸಮುದಾಯಗಳು ಹಿಂಜರಿಯುತ್ತವೆ. ಈ ಎಲ್ಲ ಕಾರಣಗಳಿಂದ ದೌರ್ಜನ್ಯಗಳು ನಿಯಂತ್ರಣಕ್ಕೆ ಬಂದಿಲ್ಲ” ಎನ್ನುತ್ತಾರೆ ಸಮತಾ ಸೇನಾ ಕರ್ನಾಟಕ ಸಂಘಟನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ನು ಈ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಂ.ಬಿ. ಸಣ್ಣೇರ, ” ದೌರ್ಜನ್ಯದ ಸತ್ಯಾಸತ್ಯತೆ ಬಗ್ಗೆ ವರದಿ ಸಲ್ಲಿಕೆಯಾದ ನಂತರ ದೌರ್ಜನ್ಯಕ್ಕೆ ಒಳಗಾದವರಿಗೆ ಹಂತ ಹಂತವಾಗಿ ಪರಿಹಾರ ಕಲ್ಪಿಸಲಾಗುತ್ತದೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಲ್ಲ ಸಮುದಾಯದವರ ಸಭೆ ನಡೆಸಿ, ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

ನಿವೃತ್ತ ಐಎಎಸ್‌ ಅಧಿಕಾರಿ, ಸ್ಯಾಂಡಲ್‌ವುಡ್‌ ನಟ ಕೆ ಶಿವರಾಮ್ ಅವರು ತೀವ್ರ...

ವಿದ್ಯುತ್ ದರ ಇಳಿಕೆ; 100 ಯೂನಿಟ್​ಗಿಂತ ಹೆಚ್ಚು ಬಳಸುವ ಗ್ರಾಹಕರಿಗೆ ಮಾತ್ರ ಅನ್ವಯ

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ...

ಬಾಗಲಕೋಟೆ | ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ ನಾಮಫಲಕಗಳ ತೆರವಿಗೆ ಆಗ್ರಹ

ರಾಜ್ಯ ಸರ್ಕಾರದ ಆದೇಶದಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ, ಅನ್ಯ ಭಾಷೆಯ...