ರಾಜ್ಯ ಪ್ರವಾಸೋದ್ಯಮಕ್ಕೆ ಡಿಜಿಟಲ್ ಸ್ಪರ್ಶ: ʼನಮ್ಮ ಗೈಡ್ʼ ವೆಬ್‌ಸೈಟ್, ಆ್ಯಪ್‌ಗೆ ಚಾಲನೆ

Date:

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ವಿನೂತನ ‘ನಮ್ಮ ಗೈಡ್’ (Namma Guide) ಆನ್‌ಲೈನ್ ವೇದಿಕೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಈ ಸಂಬಂಧ ನೂತನ ವೆಬ್‌ಸೈಟ್ ಮತ್ತು ಆ್ಯಪ್ ಸಿದ್ಧಪಡಿಸಲು ಇಲಾಖೆ ಯೋಜಿಸಿದೆ.

- Advertisement -

ಈ ಕುರಿತು ಮಾಹಿತಿ ನೀಡಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, “ರಾಜ್ಯದ ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವಲ್ಲಿ ಸ್ಥಳೀಯ ಗೈಡ್‌ಗಳ ಪಾತ್ರ ಬಹಳ ದೊಡ್ಡದು. ವಿದೇಶಗಳ ಮಾದರಿಯಲ್ಲಿ ಪಾರದರ್ಶಕವಾಗಿ ಗೈಡ್‌ಗಳ ಸೇವೆ ಪಡೆಯಲು ‘ನಮ್ಮ ಗೈಡ್’ ವೇದಿಕೆ ಅನುಕೂಲವಾಗಲಿದೆ. ಇದು ಪ್ರವಾಸಿಗರಿಗೆ ಉತ್ತಮ ಅನುಭವ ನೀಡುವುದಲ್ಲದೆ, ಐತಿಹಾಸಿಕ ತಾಣಗಳ ನಿರ್ವಹಣೆಗೂ ಬಲ ತುಂಬಲಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಪ್ರಸ್ತುತ ವಿದೇಶಗಳಲ್ಲಿ ಚಾಲ್ತಿಯಲ್ಲಿರುವ ಆನ್‌ಲೈನ್ ಗೈಡ್ ಬುಕಿಂಗ್ ಮಾದರಿಯನ್ನೇ ಕರ್ನಾಟಕದಲ್ಲೂ ಜಾರಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಐತಿಹಾಸಿಕ ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶ-ವಿದೇಶಗಳ ಪ್ರವಾಸಿಗರಿಗೆ, ಆಯಾ ಪ್ರದೇಶದ ಇತಿಹಾಸ, ಸಂಸ್ಕೃತಿ ಮತ್ತು ಮಹತ್ವದ ಬಗ್ಗೆ ನಿಖರವಾದ ಮಾಹಿತಿ ನೀಡಲು ಸ್ಥಳೀಯ ಗೈಡ್‌ಗಳ ಸೇವೆ ಅತ್ಯಗತ್ಯ. ಈ ಆನ್‌ಲೈನ್ ವೇದಿಕೆಯ ಮೂಲಕ ಪ್ರವಾಸಿಗರು ತಮಗೆ ಬೇಕಾದ ಗೈಡ್‌ಗಳನ್ನು ಮನೆಯಲ್ಲೇ ಕುಳಿತು ಸುಲಭವಾಗಿ ಕಾಯ್ದಿರಿಸಬಹುದಾಗಿದೆ.

ಇದನ್ನೂ ಓದಿ: ಫ್ಲೈಓವರ್ ಬರುವ ರಸ್ತೆಗೆ ವೈಟ್‌ಟಾಪಿಂಗ್ ಯಾಕೆ?: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣ ಬೈರೇಗೌಡ

ಈ ಯೋಜನೆಯು ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ, ಪ್ರವಾಸೋದ್ಯಮ ಇಲಾಖೆಯಲ್ಲಿ ಈಗಾಗಲೇ ನೋಂದಣಿಯಾಗಿರುವ ಗೈಡ್‌ಗಳಿಗೆ ಹೆಚ್ಚಿನ ಉದ್ಯೋಗಾವಕಾಶವನ್ನು ಸೃಷ್ಟಿಸಲಿದೆ. ಅಲ್ಲದೆ, ಪ್ರವಾಸಿ ತಾಣಗಳ ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಗೈಡ್‌ಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇದು ಸಹಕಾರಿಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಾಕಾರಗೊಳಿಸಲು ರಾಜ್ಯದ ಪ್ರತಿಭಾವಂತ ಸ್ಟಾರ್ಟ್-ಅಪ್‌ಗಳು (Startups) ಹಾಗೂ ತಂತ್ರಜ್ಞಾನ ಸಂಸ್ಥೆಗಳಿಗೆ ಅವಕಾಶ ನೀಡಲು ಇಲಾಖೆ ಆಹ್ವಾನ ನೀಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ...

33 ಲಕ್ಷ ಮತದಾರರಿಗೆ ನೋಟಿಸ್: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಮರಾಠಾ ಸಮುದಾಯದ ಸಮಗ್ರ ಸಮೀಕ್ಷೆಗೆ ಡಿಜಿಟಲ್ ಆ್ಯಪ್

ಕರ್ನಾಟಕದಲ್ಲಿರುವ ಮರಾಠಾ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸ್ಥಿತಿಗತಿಗಳನ್ನು...