ಕಾಫ್‌ ಸಿರಪ್ ದುರಂತ | ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ದಿನೇಶ್‌ ಗುಂಡೂರಾವ್‌

Date:

Advertisements

ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಪ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲ ಕಂಪನಿಗಳ ಕಾಫ್‌ ಸಿರ‌ಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕಾಫ್‌ ಸಿರಪ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್‌ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲ ಕಾಫ್‌ ಸಿರ‌ಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Advertisements

ಇದನ್ನು ಓದಿದ್ದೀರಾ?: ʼಹೊಸ ಓದುಗರಿಗೆ ಕುವೆಂಪುʼ -ಕೆ.ವಿ. ನಾರಾಯಣ ಅವರ ಪ್ರವೇಶಿಕೆ

ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ:
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್‌ ಸಿರಫ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

ಪೋಷಕರು ಎಚ್ಚರಿಕೆ ವಹಿಸಬೇಕು:
ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಪ್ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕಾಫ್‌ ಸಿರಪ್ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

ಕೇಂದ್ರಕ್ಕೆ ಪತ್ರ ಬರೆದಿದ್ದೆ: ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್‌ಸೈಟ್‌ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ರಾಜ್ಯ ಸರ್ಕಾರ ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 7 ಕೋಟಿ 12ಲಕ್ಷ ಬಿಡುಗಡೆ

ಕರ್ನಾಟಕ ರಾಜ್ಯದಲ್ಲಿ ನಕ್ಸಲರು ಶರಣಾದಾಗ ನಕ್ಸಲ್ ಮುಕ್ತ ರಾಜ್ಯ ಎಂದು ಬಿರುದು...

ಸಮಸಮಾಜವನ್ನು ಬಯಸದವರು ಸಮೀಕ್ಷೆ ವಿರೋಧಿಸುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ...

ವೀರಶೈವ-ಲಿಂಗಾಯತರು ಕೆಟ್ಟರೆ ರಾಜ್ಯವೇ ಕೆಡುತ್ತದೆ: ಸಚಿವ ಈಶ್ವರ ಖಂಡ್ರೆ

ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ...

ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ | 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣ: ಕೊಪ್ಪಳ ಪ್ರಥಮ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ...

Download Eedina App Android / iOS

X