ಆ.17ರಿಂದ ದೇಶವ್ಯಾಪಿ ‘ಮತ ಕಳ್ಳತನ’ ವಿರುದ್ಧ ನೇರ ಹೋರಾಟ: ರಾಹುಲ್ ಗಾಂಧಿ ಘೋಷಣೆ

Date:

Advertisements

ಬಿಹಾರದಲ್ಲಿ ಆಗಸ್ಟ್ 17ರಿಂದ ಆರಂಭಗೊಳ್ಳುವ ‘ಮತದಾರ ಅಧಿಕಾರ ಯಾತ್ರೆ’ ಮೂಲಕ ದೇಶವ್ಯಾಪಿ “ಮತದಾನ ಕಳ್ಳತನ” ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ‘ಆಗಸ್ಟ್ 17ರಿಂದ ನಾವು ಬಿಹಾರದ ನೆಲದಲ್ಲಿ ಮತ ಕಳ್ಳತನದ ವಿರುದ್ಧ ನೇರ ಹೋರಾಟಕ್ಕಿಳಿಯಲಿದ್ದೇವೆ’ ಎಂದು ಹೇಳಿದ್ದಾರೆ.

“ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ – ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ” ಎಂದು ತಿಳಿಸಿದ್ದಾರೆ.

Advertisements

“ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ದೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು, ರೈತರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರಿಕರು ಈ ಹೋರಾಟದಲ್ಲಿ ಭಾಗವಹಿಸಬೇಕು. ಬಿಹಾರದ ಮಣ್ಣಿನಿಂದ ಪ್ರಾರಂಭವಾಗುವ ಈ ಯಾತ್ರೆ ಸೆಪ್ಟೆಂಬರ್ 1ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ ಮಹಾ ರ್‍ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಬಾರಿ, ಮತ ಕಳ್ಳರ ಸೋಲು – ಜನರ ಮತ್ತು ಸಂವಿಧಾನದ ಗೆಲುವು” ಎಂದು ಗಾಂಧಿ ಹೇಳಿದ್ದಾರೆ.

“ದೇಶದ ಪ್ರತಿಯೊಂದು ಮತದಾರರ ಪಟ್ಟಿಯೂ ಸರಿಯಾಗುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ. ಯುವಕರು, ಕಾರ್ಮಿಕರು, ರೈತರು ಮತ್ತು ಪ್ರತಿಯೊಬ್ಬ ನಾಗರಿಕರೂ ಈ ಹೋರಾಟದಲ್ಲಿ ಕೈಜೋಡಿಸಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X