ಪಕ್ಷದ ಶಿಸ್ತು ಮೀರಿದ್ದಲ್ಲಿ ಕ್ರಮ : ಡಿಸಿಎಂ ಡಿಕೆ ಶಿವಕುಮಾರ್‌

Date:

“ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಆದರೆ, ಅನಗತ್ಯವಾಗಿ ಹೇಳಿಕೆ ನೀಡಿದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾ‌ರ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಸಮೀಪ ವರದಿಗಾರರು ಕೇಳಿದ ಪ್ರಶ್ನೆಗಳಿಗೆ ಶಿವಕುಮಾ‌ರ್ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

25 ಮಂದಿ ಶಾಸಕರು ದೆಹಲಿಗೆ ತೆರಳಿರುವ ಬಗ್ಗೆ ವರದಿಗಾರೊಬ್ಬರು ಕೇಳಿದ ಪ್ರಶ್ನೆಗೆ, “ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳಲ್ಲಿ ಇಲ್ಲ” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಶಾಸಕರು ದಿಲ್ಲಿಗೆ ತೆರಳುವ ಮುಂಚೆ ನಿಮ್ಮ ಬಳಿ ಚರ್ಚೆ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದಾಗ, “ಒಂದಷ್ಟು ಜನ ಮಾಡಿದ್ದಾರೆ. ಹೈಕಮಾಂಡ್‌ ಬಳಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಹಾಗೂ ಎರಡನೇ ಬಾರಿ ಗೆದ್ದಿರುವವರೂ ಮಂತ್ರಿಗಳಾಗಬಹುದು. ಈ ಹಿಂದೆ ಈ ರೀತಿ ನಡೆದಿದೆ. ಆದರೆ ಇದು ಸಮಯವಲ್ಲ. ಇನ್ನೂ ಚುನಾವಣೆಗಳು ನಡೆಯುತ್ತಿವೆ. ಒಂದಷ್ಟು ಜನ ತಮಿಳುನಾಡಿಗೆ ತೆರಳಿದ್ದಾರೆ. ಮೊದಲು ಚುನಾವಣೆ ಆಗಲಿ, ಆನಂತರ ಇದರ ಬಗ್ಗೆ ಯೋಚಿಸೋಣ” ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷರಿಗೆ ವರದಿ :

“ಪಕ್ಷದಿಂದ ತಮಿಳುನಾಡಿಗೆ ತೆರಳುವಂತೆ ಸೂಚನೆ ನೀಡಿದ್ದರು. ಎಐಸಿಸಿ ಅಧ್ಯಕ್ಷರ ಭೇಟಿ ಮಾಡಿ ಬಂದಿದ್ದೇನೆ. ಮತ್ತೆ ವಾಪಾಸ್ ತೆರಳಬೇಕಾಗಿದೆ. ಆ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ವರದಿ ನೀಡಬೇಕಿತ್ತು. ಭೇಟಿ ಮಾಡಿ ವರದಿ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಬೀದರ್‌ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ದಲಿತ ಸಂಘಟನೆಗಳ ಒತ್ತಾಯ: ವಾರದ ಗಡುವು

ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್‌ಶಾಪ್‌ಗಳು ಹಾಗೂ ಬಾರ್ ಆ್ಯಂಡ್...

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ...