ಭದ್ರಾ ನೀರು ಹಂಚಿಕೆಯಲ್ಲಿ ತಾರತಮ್ಯ: ಅಡಿಕೆ ಲಾಬಿಗೆ ಮಣಿದಿತೇ ಸರ್ಕಾರ?

Date:

ತುಂಗಭದ್ರಾ ಜಲಾಶಯದಿಂದ ರೈತರ ಬೆಳೆಗಳಿಗೆ ಕಾಲುವೆ ಮೂಲಕ ನೀರು ಹರಿಸಲಾಗುತ್ತಿದ್ದರೂ, ಶೇ 80ರಷ್ಟು ಭರ್ತಿಯಾಗಿರುವ ಭದ್ರಾ ಜಲಾಶಯದಿಂದ ನೀರು ಬಿಡದೆ ತಾರತಮ್ಯ ಮಾಡಲಾಗುತ್ತಿದೆ. ಅಡಿಕೆ ಬೆಳೆಗಾರರ ಲಾಬಿಗೆ ಮಣಿದು ಈ ರೀತಿ ಅನ್ಯಾಯ ಎಸಗಲಾಗುತ್ತಿದ್ದು, ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಭದ್ರ ಅಚ್ಚುಕಟ್ಟು ಪ್ರದೇಶದ ರೈತರಿಗೆ ಎರಡು ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತ ನಾಯಕ ಹಾಗೂ ನೀರಾವರಿ ತಜ್ಞ ಪ್ರೊ. ಸಿ. ನರಸಿಂಹಪ್ಪ ಆಗ್ರಹಿಸಿದ್ದಾರೆ.

- Advertisement -

​ಪ್ರಸ್ತುತ ಮುಂಗಾರು ಬೆಳೆಗೆ 30 ಟಿಎಂಸಿ ಹಾಗೂ ಬೇಸಿಗೆ ಬೆಳೆಗೆ 20 ಟಿಎಂಸಿ ನೀರು ಉಪಯೋಗಿಸಲು ಲಭ್ಯವಿದೆ. ರಾಜ್ಯದಲ್ಲಿ ಇನ್ನೂ ಆರು ವಾರಗಳ ಕಾಲ ಮಳೆಗಾಲವಿದ್ದು, ಜಲಾಶಯ ಪೂರ್ಣಗೊಳ್ಳಲು ಕೇವಲ 7 ಟಿಎಂಸಿ ನೀರಿನ ಕೊರತೆಯಿದೆ. ಹೀಗಿದ್ದರೂ ಮಳೆಗಾಲದ ಮಧ್ಯಭಾಗದಲ್ಲಿ ನೀರು ಬಿಡುವುದಿಲ್ಲ ಎನ್ನುವುದು ಸರ್ಕಾರದ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನವಾಗಿದೆ. ಈ ಕೂಡಲೇ ಗೊಂದಲ ಬಗೆಹರಿಸಿ, ಎಂದಿನಂತೆ ನೀರು ನಿರ್ವಹಣೆ ಮಾಡಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

​ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು ಒಂದೂವರೆ ಲಕ್ಷ ಎಕರೆ ಜಮೀನಿನಲ್ಲಿ ಭತ್ತ ಬೆಳೆಯಲಾಗುತ್ತದೆ. ಜೂನ್ ಮತ್ತು ಜುಲೈನಲ್ಲಿ ಮಳೆ ಕೈಕೊಟ್ಟ ಕಾರಣ ತೀವ್ರ ಬರ ಎದುರಾಗಿದ್ದು, ರೈತರು ಕೊಳವೆಬಾವಿ ನಂಬಿ ಕೇವಲ ಶೇ 25ರಷ್ಟು ಮಾತ್ರ ಭತ್ತ ನಾಟಿ ಮಾಡಿದ್ದಾರೆ. ಆಗಸ್ಟ್‌ನಲ್ಲಿ ಬಿದ್ದ ಅಲ್ಪಸ್ವಲ್ಪ ಮಳೆಯನ್ನೇ ನಂಬಿ, ಹಾಳಾದ ಮೆಕ್ಕೆಜೋಳವನ್ನು ಅಳಿಸಿ ರಾಗಿ ಬಿತ್ತನೆ ಮಾಡುತ್ತಿದ್ದಾರೆ. ಈಗ ನೀರು ಹರಿಸದಿದ್ದರೆ ಮುಂದಿನ ಬೇಸಿಗೆ ಬೆಳೆಗೂ ನೀರು ಸಿಗುವುದಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

​ಸದ್ಯ ಜಲಾಶಯದಲ್ಲಿ 172 ಅಡಿಯಷ್ಟು (54 ಟಿಎಂಸಿ) ನೀರಿದ್ದು, ಒಳಹರಿವು ಕೂಡ ಉತ್ತಮವಾಗಿದೆ. ಪ್ರಕೃತಿ ಕೃಪೆ ತೋರಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ತಕ್ಷಣವೇ ನಾಲೆಗಳಿಗೆ ನೀರು ಹರಿಸದಿದ್ದರೆ, ರಾಷ್ಟ್ರೀಯ ಹೆದ್ದಾರಿ ತಡೆ ಹಾಗೂ ‘ದಾವಣಗೆರೆ ಬಂದ್’ ಮಾಡುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ನೀರಿಗಾಗಿ ಜೈಲಿಗೆ ಹೋಗಲೂ ತಾವು ಸಿದ್ಧ ಎಂದು ರೈತಾಪಿ ವರ್ಗ ಎಚ್ಚರಿಕೆ ನೀಡಿದೆ.

​ಕುಡಿಯಲು ಮಾತ್ರ ನೀರು ಕಾಯ್ದಿರಿಸಿ, ಕೃಷಿಗೆ ಬಿಡದಿರುವ ಸರ್ಕಾರದ ಹಿಂದಿನ ನಿರ್ಧಾರದ ಹಿಂದೆ ಅಕ್ರಮ ಪಂಪ್‌ಸೆಟ್ ಬಳಕೆದಾರರ ಲಾಬಿ ಅಡಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಲಭ್ಯವಿರುವ ನೀರು ಹಾಗೂ ಜಲಾಶಯಕ್ಕೆ ಬರುತ್ತಿರುವ ನೀರಿನ ಒಳಹರಿವಿನ ಆಧಾರದ ಮೇಲೆ ವೈಜ್ಞಾನಿಕವಾಗಿ ನೀರು ನಿರ್ವಹಣೆ ಮಾಡುವುದು ಈಗಿನ ತುರ್ತು ಅಗತ್ಯವಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಅಚ್ಚುಕಟ್ಟು ಪ್ರದೇಶದ ಕೊನೆ ಭಾಗದ ರೈತರ ಸ್ಥಿತಿ ಇನ್ನಷ್ಟು ಶೋಚನೀಯವಾಗಿದೆ. ಡ್ಯಾಂ ತುಂಬಿದ್ದಾಗಲೂ ಕುಂದುವಾಡ, ಹಳೆಬಾತಿ, ಶಂಶೀಪುರ, ಬನ್ನಿಕೋಡು, ಮಲೆಬೆನ್ನೂರು ಸೇರಿದಂತೆ ಹಲವು ಗ್ರಾಮಗಳಿಗೆ ಕಳೆದ ಒಂದೂವರೆ ದಶಕದಿಂದ ಸರಿಯಾಗಿ ನೀರು ತಲುಪಿಲ್ಲ. ಅಧಿಕಾರಿಗಳು ಕೇವಲ ಮೇಲ್ಭಾಗದ ರೈತರಿಗೆ ಮಣೆ ಹಾಕದೆ, ಕೊನೆ ಭಾಗದ ರೈತರಿಗೂ ನೀರು ತಲುಪುವಂತೆ ವೈಜ್ಞಾನಿಕವಾಗಿ ನಿರ್ವಹಣೆ ಮಾಡಿ, ಭದ್ರಾ ಅಚ್ಚುಕಟ್ಟು ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...