ಧಾರವಾಡದಲ್ಲಿ ಪ್ರಕಾಶ್ ರಾಜ್ ಉಪಸ್ಥಿತರಿದ್ದ ‘ಸಮುದಾಯ’ ಸಮಾರಂಭಕ್ಕೆ ಸಂಘ ಪರಿವಾರದಿಂದ ಅಡ್ಡಿ: ಸಾಹಿತಿಗಳ ಖಂಡನೆ

Date:

ಧಾರವಾಡದ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಆಗಸ್ಟ್ 30ರಂದು ನಡೆದ ‘ಸಮುದಾಯ – 50: ಮನುಷ್ಯತ್ವದಡೆಗೆ ಸಮುದಾಯ ಜಾಥಾ’ ಸಮಾರೋಪ ಸಮಾರಂಭಕ್ಕೆ ಸಂಘ ಪರಿವಾರದವರು ಅಡ್ಡಿಪಡಿಸಿರುವುದನ್ನು ‘ಸಮುದಾಯ ಕರ್ನಾಟಕ’ ಸಂಘಟನೆ ಹಾಗೂ ನಾಡಿನ ಗಣ್ಯ ಸಾಹಿತಿಗಳು, ಕಲಾವಿದರು ತೀವ್ರವಾಗಿ ಖಂಡಿಸಿದ್ದಾರೆ.

- Advertisement -

​ಸಮುದಾಯ ಸಾಂಸ್ಕೃತಿಕ ಸಂಘಟನೆ ಆರಂಭವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಗಸ್ಟ್ 28 ರಿಂದ 30ರವರೆಗೆ ಧಾರವಾಡದಲ್ಲಿ ವಿಚಾರ ಸಂಕಿರಣ, ರಂಗ ಮತ್ತು ಬೀದಿ ನಾಟಕಗಳೊಂದಿಗೆ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಆಗಸ್ಟ್ 30ರಂದು ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಡಾ. ಎಚ್.ಎನ್. ನಾಗಮೋಹನ ದಾಸ್ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ನಟ ಪ್ರಕಾಶ್ ರಾಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ವಿರೋಧಿಸಿ ಗುಂಪೊಂದು ಸಭಾಂಗಣದ ಎದುರು ‘ಪ್ರಕಾಶ್ ರಾಜ್ ಗೋ ಬ್ಯಾಕ್’ ಘೋಷಣೆ ಕೂಗಿ ಪ್ರತಿಭಟನೆ ನಡೆಸಿತು. ಕಾರ್ಯಕ್ರಮಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ವಿನಂತಿಸಿದ ಬಳಿಕ ಕಾರ್ಯಕ್ರಮ ಮುಂದುವರೆಯಿತಾದರೂ, ದಾಂಧಲೆ ಎಬ್ಬಿಸುವ ಉದ್ದೇಶದಿಂದ ದಾಳಿಕೋರ ಗುಂಪು ಸಭಾಂಗಣದೊಳಗೆ ನುಗ್ಗಿದೆ. ಕಾರ್ಯಕ್ರಮ ಮುಗಿದ ಬಳಿಕ ಅಲ್ಲೇ ಇದ್ದ ಗುಂಪು, ಬ್ಯಾನರ್‌ಗಳನ್ನು ಹರಿದು ಹಾಕಿ, ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುವ ಮೂಲಕ ತನ್ನ ಫ್ಯಾಸಿಸ್ಟ್ ಪ್ರವೃತ್ತಿಯನ್ನು ಮೆರೆದಿದೆ ಎಂದು ಸಂಘಟನೆ ಆರೋಪಿಸಿದೆ.

​ಈ ಘಟನೆ ವೇಳೆ ಪೊಲೀಸ್ ವ್ಯವಸ್ಥೆಯು ಅಸಮರ್ಥತೆ ಪ್ರದರ್ಶಿಸಿದ್ದು, ದಾಳಿಗೆ ಪೂರಕವಾಗಿ ವರ್ತಿಸಿದೆ ಎಂದು ಹೇಳಿಕೆಯಲ್ಲಿ ದೂರಲಾಗಿದೆ. ಧಾರವಾಡದ ಶಾಸಕ ಅರವಿಂದ ಬೆಲ್ಲದ ಅವರು ಕಿಡಿಗೇಡಿಗಳ ಪರವಾಗಿ ಪೊಲೀಸ್ ಠಾಣೆ ಪ್ರವೇಶಿಸಿ, ಸಮುದಾಯ ಸಂಘಟನೆಯ ವಿರುದ್ಧವೇ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆವಾಜ್ ಹಾಕಿದ್ದಾರೆ ಹಾಗೂ ‘ಇಂಕ್ವಿಲಾಬ್ ಜಿಂದಾಬಾದ್’ ಘೋಷಣೆಯು ರಾಷ್ಟ್ರವಿರೋಧಿ ಎಂದು ಹೇಳಿಕೆ ನೀಡಿರುವುದು ಖಂಡನೀಯ ಎಂದು ಗಣ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಕಳೆದ 50 ವರ್ಷಗಳಿಂದ ರಂಗಭೂಮಿ ಹಾಗೂ ಜನಪರ ಚಳುವಳಿಗಳ ಮೂಲಕ ಅಸ್ಪೃಶ್ಯತೆ, ಕೋಮುವಾದ ಮತ್ತು ಅಸಮಾನತೆಯ ವಿರುದ್ಧ ನಿರಂತರವಾಗಿ ದನಿ ಎತ್ತುತ್ತಿರುವ ಸಮುದಾಯ ಸಂಘಟನೆಯ ಕಾರ್ಯಕ್ರಮದ ಮೇಲಿನ ಈ ಪ್ರಜಾಪ್ರಭುತ್ವ ವಿರೋಧಿ ದಾಳಿಯನ್ನು ಖಂಡಿಸಿರುವ ಸಾಹಿತಿಗಳು, ತಕ್ಷಣವೇ ದಾಳಿಕೋರರನ್ನು ಹಾಗೂ ಪ್ರಚೋದನೆ ನೀಡಿದವರನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

​ಈ ಪತ್ರಿಕಾ ಹೇಳಿಕೆಯಲ್ಲಿ ಸಮುದಾಯ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಮನೋಜ್ ವಾಮಂಜೂರು, ರಂಗ ನಿರ್ದೇಶಕ ಡಾ. ಎಚ್. ಜನಾರ್ಧನ್, ಸಾಹಿತಿಗಳಾದ ಡಾ. ಕೆ. ಮರುಳಸಿದ್ದಪ್ಪ, ಡಾ. ಎಲ್. ಹನುಮಂತಯ್ಯ, ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಡಾ. ವಸುಂಧರಾ ಭೂಪತಿ, ಕೆ. ನೀಲಾ, ಮಾವಳ್ಳಿ ಶಂಕರ್, ಡಾ. ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಅನೇಕ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಹೋರಾಟಗಾರರು ಸಹಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...