ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ, ಅವರು ಮುಖ್ಯಮಂತ್ರಿ ಆಗುವುದು ಖಚಿತ: ನಿಶ್ಚಲಾನಂದನಾಥ ಸ್ವಾಮೀಜಿ

Date:

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಬಹಿರಂಗವಾಗಿ ರಂಭಾಪುರಿ ಶ್ರೀ ಹೇಳಿದ ಬೆನ್ನಲ್ಲೇ ಮತ್ತೋರ್ವ ಸ್ವಾಮಿ ಇದೇ ವಿಚಾರ ಬಗ್ಗೆ ಮಾತನಾಡಿದ್ದು, ಡಿಕೆಶಿ ಅವರು ಸಿಎಂ ಆಗುವುದು ನಿಶ್ಚಿತ ಎಂದಿದ್ದಾರೆ.

- Advertisement -

ಮಂಡ್ಯದಲ್ಲಿ ಶುಕ್ರವಾರ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಈ ಮಾತು ಹೇಳಿದ್ದು, “ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ಅವರ ಅಭಿಮಾನಿಗಳ ಬಯಕೆ. ಅವರು ಸಿಎಂ ಆಗುವುದು ನಿಶ್ಚಿತ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಕಳೆದ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್‌ಗೆ ಹೆಚ್ಚು ಸೀಟುಗಳು ಬಂದಿವೆ. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡೋಣ” ಎಂದು ತಿಳಿಸಿದರು.

“ಪಕ್ಷಕ್ಕಾಗಿ ದುಡಿದ ಹಿರಿಯರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಅದೇ ರೀತಿ ನಾವು ಡಿ.ಕೆ.ಶಿವಕುಮಾರ್ ಕೂಡ ಸಿಎಂ ಆಗಲಿ ಎಂದು ಬಯಸುತ್ತೇವೆ. ಅವರು ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾಯ್ದು, ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....