ನಮ್ಮದು ಎಲ್ಲರನ್ನು ಒಳಗೊಳ್ಳುವ ಸರ್ಕಾರ, ರಾಜ್ಯದಲ್ಲಿ‌ ದಬ್ಬಾಳಿಕೆಗೆ ಅವಕಾಶವಿಲ್ಲ: ಸಿಎಂ ಡಿಕೆಶಿ

Date:

“ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

“ಪವಿತ್ರ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ ಶಾಸಕರು ಹೇಳುತ್ತಿದ್ದರು. ನೀವು ಏನು ಹೇಳುತ್ತೀರೋ ಅದನ್ನು ನಾವು ಮಾಡುತ್ತೇವೆ. ನಾಡಿನ ಜನತೆಗೆ ಒಳ್ಳೆಯದಾಗಬೇಕು. ಯಾರ ಮನಸ್ಸಿಗೂ ನೋವಾಗದಂತೆ ಆಡಳಿತ ಮಾಡಲು ನಮ್ಮ ಸರ್ಕಾರ ಬಯಸುತ್ತದೆ. ನಿಮ್ಮ ಆಕಾಂಕ್ಷೆಯನ್ನು ನಮ್ಮ ಪಕ್ಷ ಕಾಪಾಡಿಕೊಂಡು ಬಂದಿದೆ. ನಿಮ್ಮ ಅಭಿಪ್ರಾಯ ಹಾಗೂ ಸೇವೆ ಏನೇ ಇದ್ದರೂ ನಮಗೆ ತಿಳಿಸಿ. ನಾವು ಅದನ್ನು ಪರಿಗಣಿಸುತ್ತೇವೆ” ಎಂದರು.

“ನಾವು ಇಂತಹುದೆ ಜಾತಿ ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ. ನಮ್ಮ ಜನ್ಮದ ನಂತರ ನಮ್ಮ ಹಿರಿಯರು ಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯುತ್ತೇವೆ. ನಮಗೆ ಧರ್ಮ ಯಾಕೆ ಬೇಕು? ಸಮಾಜದಲ್ಲಿ ನೆಮ್ಮದಿ, ಶಾಂತಿ ನೆಲೆಸಲು ಬೇಕು. ಎಲ್ಲರೂ ತಮ್ಮ ಧರ್ಮದಲ್ಲಿ ಶಾಂತಿ ನೆಲೆಸಬೇಕು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇವೆ. ಯಾವ ಧರ್ಮವೂ ಬೇರೆಯವರನ್ನು ದ್ವೇಷ ಮಾಡು ಎಂದು ಹೇಳುವುದಿಲ್ಲ” ಎಂದರು.

“ಪೈಗಂಬರ್ ಅವರು ಮಾನವೀಯತೆ ದೊಡ್ಡ ಧರ್ಮ ಎಂದು ಹೇಳಿದ್ದಾರೆ. ನಾನು ಕೂಡ ನಮ್ಮ ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಹೇಳಿದ ಮಾತನ್ನು ಪಾಲಿಸುತ್ತೇನೆ” ಎಂದಿದ್ದಾರೆ.

ಎಸ್ಐಆರ್ ಕುರಿತು ಮಾತನಾಡಿದ ಅವರು, “ಎಸ್ಐಆರ್ ವಿಚಾರದಲ್ಲಿ ಜಾಗೃತರಾಗಿರಿ. ನಿಮ್ಮ ದಾಖಲೆ ನೀಡಿ ಮತದಾನದ ಹಕ್ಕು ಉಳಿಸಿಕೊಳ್ಳಿ. ಮತದಾನದ ಹಕ್ಕು ಇಲ್ಲವಾದರೆ ಸರ್ಕಾರಿ ಸೌಲಭ್ಯ ಪಡೆಯುವುದು ಕಷ್ಟವಾಗಲಿದೆ. ಆಗಸ್ಟ್ 8ರ ಒಳಗೆ ಅರ್ಜಿ ನೀಡಿ. ಈಗಾಗಲೇ 1 ಕೋಟಿ ಜನರ ಮಾಹಿತಿ ಸರಿಯಾಗಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಕ್ಕು ಶಕ್ತಿಯಾಗಿದೆ. ಇದನ್ನು ಕಾಪಾಡಿಕೊಳ್ಳಿ” ಎಂದು ತಿಳಿಸಿದರು.

“400 ವರ್ಷಗಳ ಇತಿಹಾಸ ಇರುವ ಧರ್ಮ ಕ್ಷೇತ್ರ ಇದು. ಮಾನವ ಧರ್ಮ ಎಲ್ಲರೂ ಒಂದಾಗಲಿ ಎಂದು ನೀವು ನಾವು ಪ್ರಾರ್ಥನೆ ಮಾಡುತ್ತಿದ್ದೇವೆ. ಇಂದು ಉರುಸ್ ಕಾರ್ಯಕ್ರಮ ಇದೆ. ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...