‌ಸಿಎಂ ಸ್ಥಾನ | ಡಿ ಕೆ ಶಿವಕುಮಾರ್ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ: ಡಿ ಕೆ ಸುರೇಶ್

Date:

Advertisements

“ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸ್ಥಾನಕ್ಕೆ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ” ಎಂದು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್‌ ಹೇಳಿದರು.

ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ” ಎಂದರು.

“ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದು ಹೇಳಿದರು.

Advertisements

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.

ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ತಾವೇ ಹಾಕಿಕೊಂಡ ಲಕ್ಷ್ಮಣ ರೇಖೆ ಹೇಗೆ ದಾಟುತ್ತಾರೆ?

75 ವರ್ಷಕ್ಕೆ ನಿವೃತ್ತಿ ಪಡೆಯಬೇಕು ಎಂದು ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ಬಗ್ಗೆ ಕೇಳಿದಾಗ, “ರಾಜಕಾರಣದಲ್ಲಿ ನಿವೃತ್ತಿ ಇಲ್ಲ ಎಂದು ನಾನು ಹೇಳಿದ್ದೇನೆ. ರಾಜಕೀಯ ಇಚ್ಛಾಶಕ್ತಿ ಜೊತೆಗೆ ಅವರವರು ಹಾಕಿಕೊಂಡಿರುವ ಲಕ್ಷ್ಮಣ ರೇಖೆಗಳನ್ನು ದಾಟುವುದು ಹೇಗೆ ಎಂಬುದು ಮುಖ್ಯ. ಯಾವಾಗಲೂ ಇನ್ನೊಬ್ಬರಿಗೆ ಮಾರ್ಗದರ್ಶಕರಾಗಿ ಮಾದರಿಯಾಗಿರಬೇಕು. ಈ ರೀತಿ ದಿಟ್ಟ ಹೆಜ್ಜೆ ಇಟ್ಟಾಗ ಅವರ ಹೆಸರು ಶಾಶ್ವತವಾಗಿ ಉಳಿಯುತ್ತದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X