ಮುಖ್ಯಮಂತ್ರಿ ಬದಲಾವಣೆ ಖಚಿತ: ಡಿಕೆಶಿಗೆ ಸಿಎಂ ಹುದ್ದೆ; ಸಿದ್ದರಾಮಯ್ಯ ರಾಜ್ಯಸಭೆಗೆ?

Date:

ರಾಜ್ಯ ರಾಜಕೀಯ ವಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ತೆರೆಬಿದ್ದಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ನಿಶ್ಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳಿಸಲು ಹೈಕಮಾಂಡ್‌ ನಿರ್ಧರಿಸಿದೆ. ಸಿದ್ದರಾಮಯ್ಯ ಕೂಡ ಸಮ್ಮತಿ ನೀಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

- Advertisement -

ಸೋಮವಾರ, ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿತ್ತು. ಅದರಂತೆ, ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಮಂಗಳವಾರ, ಡಿ.ಕೆ ಶಿವಕುಮಾರ್‌ ಕೂಡ ದೆಹಲಿಗೆ ಹೋಗಿದ್ದರು. ಇಬ್ಬರೊಂದಿಗೂ ಸಭೆ ನಡೆಸಿರುವ ಹೈಕಮಾಂಡ್‌, ಮುಖ್ಯಮಂತ್ರಿ ಬದಲಾವಣೆಗೆ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಮುಖ್ಯಮಂತ್ರಿ ಹುದ್ದೆ ತೊರೆದ ಬಳಿಕ, ಪಕ್ಷವು ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳಿಸಲು ತೀರ್ಮಾನಿಸಿದೆ. ಸಧ್ಯ, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಸಿದ್ದರಾಮಯ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್‌ನ ವಿಶ್ವಾಸಾರ್ಹ ಮೂಲಗಳಿಂದ ಗೊತ್ತಾಗಿದೆ.

ರಾಜ್ಯದಲ್ಲಿ ಸರ್ಕಾರ ರಚನೆಯಾದ ಸಂದರ್ಭದಲ್ಲಿಯೇ ಅಧಿಕಾರ ಹಂಚಿಕೆ ಸೂತ್ರವನ್ನು ಹೈಕಮಾಂಡ್ ರೂಪಿಸಿತ್ತು. ಈ ಸೂತ್ರ ಆಗ್ಗಾಗ್ಗೆ ಚರ್ಚೆಗೆ ಬಂದರೂ, ಪಕ್ಷದ ಉನ್ನತ ನಾಯಕರು ಅದನ್ನು ಬಹಿರಂಗ ಪಡಿಸಿರಲಿಲ್ಲ. ಇದೀಗ, ಆ ಸೂತ್ರ ಕಾರ್ಯಗತವಾಗುವ ಹಂತಕ್ಕೆ ಬಂದಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಗಳು ಮತ್ತು ಪಕ್ಷದ ಸಂಘಟನೆಯ ದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಚಾಣಾಕ್ಷತನ ಮತ್ತು ಸಂಘಟನಾ ಶಕ್ತಿಯನ್ನು ಆಡಳಿತದಲ್ಲಿ ಬಳಸಿಕೊಳ್ಳಲು ವರಿಷ್ಠರು ಹಸಿರು ನಿಶಾನೆ ತೋರಿದ್ದಾರೆ. ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಲು ನಿರ್ಧರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...