ಅಪೆಕ್ಸ್ ಬ್ಯಾಂಕ್‌ ಗಾದಿಗೆ ಡಿಕೆಶಿ ಆಪ್ತ ಎಂಎಲ್‌ಸಿ ಎಸ್ ರವಿ ಅವಿರೋಧ ಆಯ್ಕೆ: ರಾಜಣ್ಣಗೆ ನಿರಾಸೆ!

Date:

ರಾಜ್ಯ ಸಹಕಾರ ಕ್ಷೇತ್ರದ ಅತ್ಯಂತ ಪ್ರಭಾವಿ ಮತ್ತು ಪ್ರತಿಷ್ಠಿತ ಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆದ ತೀವ್ರ ಪೈಪೋಟಿಗೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ, ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ಯಾಂಕ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಕಟವರ್ತಿ ಕೆ.ಎನ್. ರಾಜಣ್ಣ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ.

- Advertisement -

ಅಪೆಕ್ಸ್ ಬ್ಯಾಂಕ್ ಚುನಾವಣೆಯು ಕಳೆದ ನಾಲ್ಕು ತಿಂಗಳುಗಳಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಂತರಿಕ ರಾಜಕೀಯದ ಜಟಾಪಟಿಗೆ ವೇದಿಕೆಯಾಗಿತ್ತು. ಸಹಕಾರ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಕೆ.ಎನ್. ರಾಜಣ್ಣ ಅವರು ಮೊದಲ ಅವಧಿಗೆ ತಮಗೇ ಅಧ್ಯಕ್ಷ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದು ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರ ಮೂಲಕ ತೀವ್ರ ಲಾಬಿ ನಡೆಸಿದ್ದರು ಎನ್ನಲಾಗಿದೆ. ಆದರೆ, ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮಟ್ಟದಲ್ಲಿ ತಮ್ಮ ಪ್ರಭಾವ ಬಳಸಿದ ಡಿ.ಕೆ. ಶಿವಕುಮಾರ್ ಅವರು ಅಂತಿಮವಾಗಿ ತಮ್ಮ ಆಪ್ತರಾದ ಎಸ್. ರವಿ ಅವರಿಗೆ ಹುದ್ದೆ ಒಲಿಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಅಸ್ಸಾಂ ಬ್ಯಾಂಕ್ ಸಂಬಂಧಿತ‌ ಹಗರಣದಲ್ಲಿ ಸಿಎಂ ಹೆಸರು: ವರದಿ ಮಾಡಿದ್ದ ಪತ್ರಕರ್ತನ ಬಂಧನ

ಸಚಿವ ಲಕ್ಷ್ಮಣ್ ಸವದಿ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ನಡೆದ ಮುಖಂಡರು ಮತ್ತು ನಿರ್ದೇಶಕರ ಸಭೆಯಲ್ಲಿ, ಬ್ಯಾಂಕ್‌ನ ಹಳೆಯ ಪರಂಪರೆಯಂತೆ ಮತದಾನಕ್ಕೆ ಅವಕಾಶ ನೀಡದೆ ಅವಿರೋಧ ಆಯ್ಕೆಯ ನಿರ್ಧಾರ ತಳೆಯಲಾಯಿತು. ನೂತನ ಉಪಾಧ್ಯಕ್ಷರಾಗಿ ಶರಣಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ.

ಈ ಬೆಳವಣಿಗೆಯಿಂದಾಗಿ ಸಿದ್ದರಾಮಯ್ಯ ಬಣದ ಪ್ರಮುಖ ನಾಯಕರಾದ ಕೆ.ಎನ್. ರಾಜಣ್ಣ ತೀವ್ರ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ರಾಜ್ಯ ಸಹಕಾರ ರಂಗದಲ್ಲಿ ಡಿ.ಕೆ. ಶಿವಕುಮಾರ್ ತಮ್ಮ ಹಿಡಿತವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...