ಡಿಕೆಶಿ – ಸಿಆರ್‌ಪಿ ಭೇಟಿ: ನೀರಾವರಿ ಯೋಜನೆಗೆ ಅನುದಾನ, ನದಿ ಜೋಡಣೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲಿಗೆ ಒತ್ತಾಯ

Date:

ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಹಾಗೂ ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು. ನದಿ ಜೋಡಣೆ ಯೋಜನೆಗಳಲ್ಲಿ ರಾಜ್ಯಕ್ಕೆ ನ್ಯಾಯಯುತ ನೀರಿನ ಪಾಲು ನೀಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

- Advertisement -

ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ್ ಅವರನ್ನು ಭೇಟಿ ಮಾಡಿದ ಡಿ.ಕೆ ಶಿವಕುಮಾರ್, “ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಮೇಕೆದಾಟು ಯೋಜನೆಯ ಅನುಮತಿಯ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕೇಂದ್ರ ಜಲ ಆಯೋಗ (CWC) ನಿರ್ಧಾರ ತೆಗೆದುಕೊಳ್ಳಬೇಕು ಎಂದಿದೆ. CWMA ಈಗಾಗಲೇ ಯೋಜನೆಯನ್ನು ಮೌಲ್ಯಮಾಪನ ಮಾಡಲು CWCಗೆ ಸೂಚಿಸಿರುವುದರಿಂದ, ಈ ಯೋಜನೆಗೆ ಶೀಘ್ರ ಅನುಮತಿ ಸಿಗುವಂತೆ ನೋಡಿಕೊಳ್ಳಬೇಕು” ಎಂದು ಸಚಿವರನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

“ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ‘ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ-II’ (KWDT-II) ತೀರ್ಪು ನೀಡಿ ಒಂದು ದಶಕಕ್ಕೂ ಹೆಚ್ಚು ಕಾಲ ಕಳೆದಿದ್ದರೂ, ಕೇಂದ್ರ ಸರ್ಕಾರವು ಇನ್ನೂ ಈ ತೀರ್ಪನ್ನು ಗೆಜೆಟ್‌ನಲ್ಲಿ ಅಧಿಸೂಚಿಸಿಲ್ಲ. ಕರ್ನಾಟಕ ರಾಜ್ಯವು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-III ರ ಅನುಷ್ಠಾನದಲ್ಲಿ ಭಾರಿ ಮೊತ್ತವನ್ನು ಹೂಡಿಕೆ ಮಾಡಿದೆ. ನಮ್ಮ ಯೋಜನೆಯನ್ನು ಮುಂದುವರಿಸಲು ಹಾಗೂ ನಮ್ಮ ಪಾಲಿನ ನೀರನ್ನು ಬಳಸಿಕೊಳ್ಳಲು ಕೇಂದ್ರದ ಬೆಂಬಲದ ಅಗತ್ಯವಿದೆ” ಎಂದು ಸಚಿವರ ಗಮನಕ್ಕೆ ತಂದಿದ್ದಾರೆ.

“ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೇಂದ್ರ ಸರ್ಕಾರವು 2023-24ರ ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ರೂ.ಗಳ ನೆರವನ್ನು ಘೋಷಿಸಿತ್ತು. ಆದರೆ, 3 ವರ್ಷಗಳು ಕಳೆದರೂ ರಾಜ್ಯಕ್ಕೆ ಈ ಹಣಕಾಸಿನ ನೆರವು ಬಿಡುಗಡೆಯಾಗಿಲ್ಲ. ಯೋಜನೆಯ 21,167.93 ಕೋಟಿ ರೂ.ಗಳ ಪರಿಷ್ಕೃತ ವೆಚ್ಚದ ಅಂದಾಜಿನ ಪ್ರಸ್ತುತ ಪ್ರಸ್ತಾವನೆಯನ್ನು ಮೌಲ್ಯಮಾಪನ ಮಾಡಿದೆ. PMKSY-AIBP ಯೋಜನೆಯಡಿ ಈ ಯೋಜನೆಗೆ ಕೇಂದ್ರದ ನೆರವನ್ನು ಶೀಘ್ರ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಮಹದಾಯಿ ಕಣಿವೆಯಡಿ ಬರುವ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳನ್ನು ಹುಬ್ಬಳ್ಳಿ-ಧಾರವಾಡದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಉದ್ದೇಶಿಸಲಾಗಿದೆ. ಇವುಗಳಿಗೆ ಡಿಸೆಂಬರ್ 2022 ರಲ್ಲಿ CWC/ಜಲಶಕ್ತಿ ಸಚಿವಾಲಯವು ಅನುಮತಿ ನೀಡಿದ್ದರೂ, ಈ ಯೋಜನೆಗೆ ಯಾವುದೇ ಕಾನೂನು ಅಡಚಣೆಗಳಿಲ್ಲದಿದ್ದರೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ (MoEF & CC) ಅರಣ್ಯ/ವನ್ಯಜೀವಿ ಅನುಮತಿ ಇನ್ನೂ ಸಿಕ್ಕಿಲ್ಲ. ಇದರಿಂದಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ತೀರ್ಪಿನ ಅನ್ವಯ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ನಮಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆದಷ್ಟು ಬೇಗ ಈ ಯೋಜನೆಗಳಿಗೆ ಅನುಮತಿ ಕೊಡಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿಗೆ ಎದುರಾಗುತ್ತಿವೆ ಕೆಟ್ಟ ದಿನಗಳು!

“ಭಾರತ ಸರ್ಕಾರದ AIBP-PMKSY ಮತ್ತು FMBAP ಯೋಜನೆಗಳಡಿ ಕೇಂದ್ರದ ನೆರವು ಕೋರಿ ಕರ್ನಾಟಕ ರಾಜ್ಯವು ಫೆಬ್ರವರಿ 2025 ರಲ್ಲಿ ಈ ಕೆಳಗಿನ ಯೋಜನೆಗಳ PFR / DPR ಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಸೊಂತಿ ಏತ ನೀರಾವರಿ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಬಾಕಿ ಕಾಮಗಾರಿ, ಬೆಣ್ಣಿಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ಪ್ರವಾಹ ನಿರ್ವಹಣೆ ಯೋಜನೆಗಳಿಗೆ ಕೇಂದ್ರ ಸರ್ಕಾರ ನೆರವು ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕೇಂದ್ರ ಸರ್ಕಾರದ ನದಿಗಳ ಜೋಡಣೆಯ ಪ್ರಸ್ತಾವನೆಗಳ ಅಡಿಯಲ್ಲಿ, ನದಿ ಜೋಡಣೆ (ILR) ಯೋಜನೆಗಳಿಂದ ‘ಸಮತೆ ಮತ್ತು ಸಮಾನ ಹಂಚಿಕೆಯ ತತ್ವ’ದ ಮೇಲೆ ಕರ್ನಾಟಕ ರಾಜ್ಯಕ್ಕೆ ನ್ಯಾಯಸಮ್ಮತವಾದ ಪಾಲನ್ನು ಹಂಚಿಕೆ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ ಶಿಕ್ಷಕ!

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು...

ಅ.12ರ ಪ್ರತಿಭಟನೆ ವೇಳೆ ಗರ್ಭಿಣಿ ಪತ್ರಕರ್ತೆಗೆ ತಳ್ಳಾಟ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನೋಟಿಸ್

ಅಕ್ಟೋಬರ್ 12ರಂದು ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ನಡೆಸಿದ್ದ ಪ್ರತಿಭಟನಾ ಮೆರವಣಿಗೆಯ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...